AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅರಮನೆ ಮೈದಾನದಲ್ಲಿ ಗುಜರಾತ್ ಸಮುದಾಯದ ಸಮಾವೇಶ, ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ: ಭೂಪೇಂದ್ರ ಪಟೇಲ್ ಕರೆ

ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದರು.

ಬೆಂಗಳೂರು: ಅರಮನೆ ಮೈದಾನದಲ್ಲಿ ಗುಜರಾತ್ ಸಮುದಾಯದ ಸಮಾವೇಶ, ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ: ಭೂಪೇಂದ್ರ ಪಟೇಲ್ ಕರೆ
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 26, 2023 | 9:29 PM

ಬೆಂಗಳೂರು: ನಗರದಲ್ಲಿ ಅರಮನೆ ಮೈದಾನದಲ್ಲಿ (Bengaluru Palace Ground) ಗುಜರಾತ್ (Gujarat) ಸಮುದಾಯದ ‘ಸದಾಕಾಲ್ ಗುಜರಾತ್’ ಹೆಸರಿನಲ್ಲಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಹೇಳಿದರು.

ಗುಜರಾತ್​ನಲ್ಲಿ ಮೋದಿ ನೇತೃತ್ವದ ಸರ್ಕಾರದಿಂದ ಅಭಿವೃದ್ಧಿ ಆಗಿದೆ. ದೇಶದ ಪರಂಪರೆ, ಸಂಸ್ಕೃತಿಯಲ್ಲಿ ಗುಜರಾತಿಗಳ ಪಾತ್ರ ಬಹಳ‌ ಮುಖ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಒಂದು ವಿಷನ್ ಇದೆ. ಕೃಷಿ ಮಾರುಕಟ್ಟೆ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಪ್ರಧಾನಿ ಮೋದಿಗೆ ಇಂದು ವಿಶ್ವಗುರು ಎಂಬ ಗೌರವ ಸಿಗುತ್ತಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯರನ್ನ ಸಿಎಂ ಮಾಡಲ್ಲ ಎಂದು ಭವಿಷ್ಯ ನುಡಿದ ಯತ್ನಾಳ್​

ಸಮಾವೇಶದಲ್ಲಿ ಗುಜರಾತ್ ಸಚಿವ ಹರ್ಷ ಸಾಂಘ್ವಿ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 pm, Sun, 26 March 23