AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್​ಶಿಪ್ ನಿರ್ಮಾಣ ಎಂದ ಸಿಎಂ ಡಿಕೆ ಶಿವಕುಮಾರ್​​

ಸಿಎಂ ಡಿಕೆ ಶಿವಕುಮಾರ್​​ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಡಿಸಿ, SP, ಸಿಇಒಗಳ ಜೊತೆ ಸಭೆ ಮಾಡಿ ಅಧಿಕಾರಿಗಳಿಗೆ ಹಲವು ನಿರ್ದೇಶನ ನೀಡಿದ್ದಾರೆ. ಅದರಲ್ಲೂ ಹೆಚ್​​ಡಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲೇ ಬಿಡದಿ ಟೌನ್​ಶಿಪ್ ನಿರ್ಮಾಣ ಯೋಜನೆ ಮುಂದುವರೆಸುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್​​ ಟಕ್ಕರ್ ನೀಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್​ಶಿಪ್ ನಿರ್ಮಾಣ ಎಂದ ಸಿಎಂ ಡಿಕೆ ಶಿವಕುಮಾರ್​​
ಸಿಎಂ ಡಿಕೆ ಶಿವಕುಮಾರ್​​ Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:Jun 13, 2026 | 7:53 PM

Share

ಬೆಂಗಳೂರು, ಜೂನ್​​ 13: ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ವಿಚಾರ ಸದ್ಯ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಜೂನ್ 22ಕ್ಕೆ ಬೃಹತ್ ಪ್ರತಿಭಟನೆಗೆ ರೈತರು ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar)​ ಪ್ರತಿಕ್ರಿಯಿಸಿದ್ದು, ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮಾರ್ಗದರ್ಶನದಂತೆ ನಾವು ಈ ಯೋಜನೆ ಮುಂದುವರೆಸುತ್ತಿದ್ದೇವೆ. ದೆಹಲಿ ಭೇಟಿ ವೇಳೆ ಬಿಡದಿ ಟೌನ್​ಶಿಪ್ ಬಗ್ಗೆ ಚರ್ಚೆ ಮಾಡಿದ್ದೇನೆ. ಪ್ರಧಾನಿ ಮೋದಿ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರೇ ಹೊಗಳಿದ್ದಾರೆ ಎಂದ ಸಿಎಂ 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಡಿಸಿ, SP, ಸಿಇಒಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್​, ಬೆಂಗಳೂರಿನ ಮೇಲೆ ಒತ್ತಡವಿದೆ, ಟೌನ್​ಶಿಪ್ ಅಗತ್ಯವಿದೆ. ನೀನು ಒಳ್ಳೆಯ ಕೆಲಸ ಮಾಡುತ್ತಿದ್ದೀಯಾ. ನಾನು 7ರಿಂದ 8 ಟೌನ್​ಶಿಪ್ ಮಾಡಿದ್ದೇನೆ, ನೀವು ಮಾಡಿ. ನಿಮಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.

ಮತದಾನ ಹಕ್ಕು ಕಳೆದುಕೊಂಡರೆ ಸರ್ಕಾರಿ ಸೌಲಭ್ಯಗಳು ಸಿಗುವುದು ಕಷ್ಟ

ರಾಜ್ಯದಲ್ಲಿ ಎಸ್​ಐಆರ್​ ಪ್ರಾರಂಭ ಆಗುತ್ತಿದೆ. ಅರ್ಜಿ ಫಾರ್ಮ್ ತುಂಬಿದರೆ ಮಾತ್ರ ಮತ ಉಳಿಯುತ್ತದೆ. ಮೂರು ಸಲ ಬಿಎಲ್​ಒಗಳು ಮನೆಗೆ ಬರ್ತಾರೆ. ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿ ತುಂಬಬೇಕು. ಪ್ರತಿಯೊಬ್ಬ ಮತದಾರರು ತಮ್ಮ ಮತಗಳನ್ನ ಉಳಿಸಿಕೊಳ್ಳಲಿ. ಮತದಾನ ಹಕ್ಕು ಕಳೆದುಕೊಂಡರೆ ಸರ್ಕಾರಿ ಸೌಲಭ್ಯಗಳು ಸಿಗುವುದು ಕಷ್ಟವಾಗುತ್ತೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಮತ್ತೆ ಅರ್ಜಿಯನ್ನ ಸಲ್ಲಿಸಬೇಕು

ಈವರೆಗೆ ಮೃತಪಟ್ಟವರ ಖಾತೆಗೆ 100 ಕೋಟಿ ರೂ ಹೋಗಿದೆ. ಹಾಗಾಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು. ಯಾವ ಬ್ಯಾಂಕ್​ನಲ್ಲಿ ಹಣ ಪಡೀತಿದ್ದಾರೆಂಬ ಮಾಹಿತಿ ಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿಯನ್ನ ಸಲ್ಲಿಸಬೇಕು. 1.64 ಲಕ್ಷ ಜನರಿಗೆ ಗೃಹಜ್ಯೋತಿಯಡಿ ಉಚಿತ ವಿದ್ಯುತ್​​ ತೆಗೆದುಕೊಳ್ಳುತ್ತಿದ್ದಾರೆ. ಅವರೆಲ್ಲರಿಗೂ ಗುರುತಿನ ಚೀಟಿ ಕೊಡುತ್ತೇವೆ. ನಾವು ವಾಸಕ್ಕೆ ಮಾತ್ರ ಫ್ರೀ ಕರೆಂಟ್​​ ಕೊಡುತ್ತಿದ್ದೇವೆ. ಕಮರ್ಷಿಯಲ್​ ಬಳಕೆಗೆ ಬಳಸಿಕೊಂಡರೆ ಆಗಲ್ಲ ಎಂದಿದ್ದಾರೆ.

ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡುವಂತಿಲ್ಲ

ಕರ್ನಾಟಕದಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಆಸ್ಪದ ನೀಡುವುದಿಲ್ಲ. ಅಧಿಕಾರಿಗಳ ಮೇಲೆ ಸಚಿವರು, ಶಾಸಕರು ಒತ್ತಡ ಹೇರಬಾರದು. ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ನಾಮಫಲಕದಲ್ಲಿ ಓರ್ವ ಹಿರಿಯ ಅಧಿಕಾರಿ ನಂಬರ್ ನಮೂದಿಸಬೇಕು. ಸಿಬ್ಬಂದಿ ಯಾರೇ ಲಂಚ ಕೇಳಿದರೂ ಆ ಸಂಖ್ಯೆ ಸಂಪರ್ಕಿಸಬೇಕು. ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡುವಂತಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಶೂನ್ಯಕ್ಕೆ ಇಳಿಸಲು ನಿರ್ಧರಿಸಿದ್ದೇವೆ. ಭ್ರಷ್ಟಾಚಾರ ಮುಕ್ತ ಕರ್ನಾಟಕ ಮತ್ತು ಸರ್ಕಾರ ನಮ್ಮದಾಗಬೇಕು ಎಂಬ ಆಶಯವಿದೆ ಎಂದರು.

ಇದನ್ನೂ ಓದಿ: Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆ ಆರಂಭವಾಗಿದೆ. ರಸಗೊಬ್ಬರ ಕೊರತೆ ಬಗ್ಗೆ ಪ್ರಧಾನಿ ಭೇಟಿ ವೇಳೆ ಪ್ರಸ್ತಾಪಿಸಿದ್ದೇನೆ. ರಾಜ್ಯಕ್ಕೆ ಬೇಡಿಕೆಯಷ್ಟು ರಸಗೊಬ್ಬರ ಪೂರೈಸಲು ಮನವಿ ಮಾಡಿರುವೆ. ರಸಗೊಬ್ಬರದ ಬದಲು ಸಾವಯವ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:40 pm, Sat, 13 June 26

Follow Us
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ