Big News: ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಆಟ ಶುರು?; ಕುತೂಹಲ ಮೂಡಿಸಿದ ದೇವೇಂದ್ರ ಫಡ್ನವಿಸ್​- ಉದ್ಧವ್ ಠಾಕ್ರೆ ಭೇಟಿ

Maharashtra Politics: ಏಕನಾಥ್ ಶಿಂಧೆ ಅವರಿಗೆ ಬೆಂಬಲ ನೀಡುವ ಬದಲು ನಮ್ಮ ಜೊತೆ ಡೀಲ್ ಮಾಡಿಕೊಂಡರೆ ಇಡೀ ಶಿವಸೇನೆ ಪಕ್ಷವೇ ಬಿಜೆಪಿ ಜೊತೆ ಬರುತ್ತದೆ ಎಂಬ ಪ್ರಸ್ತಾಪವನ್ನು ಉದ್ಧವ್ ಠಾಕ್ರೆ ಡಿಸಿಎಂ ದೇವೇಂದ್ರ ಫಡ್ನವಿಸ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

Big News: ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಆಟ ಶುರು?; ಕುತೂಹಲ ಮೂಡಿಸಿದ ದೇವೇಂದ್ರ ಫಡ್ನವಿಸ್​- ಉದ್ಧವ್ ಠಾಕ್ರೆ ಭೇಟಿ
ಉದ್ಧವ್ ಠಾಕ್ರೆ- ದೇವೇಂದ್ರ ಫಡ್ನವಿಸ್Image Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 18, 2022 | 11:15 AM

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು (Maharashtra Political Crisis) ಕೊನೆಗೂ ಒಂದು ಹಂತಕ್ಕೆ ಬಂದು ನಿಂತಿತ್ತು. ಉದ್ಧವ್ ಠಾಕ್ರೆ ವಿರುದ್ಧ ದಂಗೆದ್ದಿದ್ದ ಏಕನಾಥ್ ಶಿಂಧೆ (Eknath Shinde) ಬಣ ಕೊನೆಗೂ ಸರ್ಕಾರ ಉರುಳಿಸುವಲ್ಲಿ ಜಯ ಗಳಿಸಿತ್ತು. ಬಳಿಕ ರಾಜೀನಾಮೆ ನೀಡಿದ್ದ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಸ್ಥಾನವನ್ನು ಏಕನಾಥ್ ಶಿಂಧೆ ಪಡೆದುಕೊಂಡಿದ್ದರು. ಆದರೆ, ಎಲ್ಲ ಸರಿಯಾಯಿತು ಎನ್ನುವಷ್ಟರಲ್ಲಿ ಇದೀಗ ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಆಟ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ (Devendra Fadnavis) ಅವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಕನಾಥ್ ಶಿಂಧೆ ಬಣಕ್ಕೆ ಬೆಂಬಲ ನೀಡಿ ಸರ್ಕಾರ ರಚನೆಗೆ ಮುಖ್ಯ ಕಾರಣರಾಗಿದ್ದ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಉದ್ಧವ್ ಠಾಕ್ರೆ ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಮೂಲವೊಂದರ ಪ್ರಕಾರ, ಉದ್ಧವ್ ಠಾಕ್ರೆ ಅವರು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಖಾಸಗಿಯಾಗಿ ಮಾತನಾಡಿದ್ದಾರೆ. ಏಕನಾಥ್ ಶಿಂಧೆ ಅವರಿಗೆ ಬೆಂಬಲ ನೀಡುವ ಬದಲು ನಮ್ಮ ಜೊತೆ ಡೀಲ್ ಮಾಡಿಕೊಂಡರೆ ಇಡೀ ಶಿವಸೇನೆ ಪಕ್ಷವೇ ಬಿಜೆಪಿ ಜೊತೆ ಬರುತ್ತದೆ ಎಂಬ ಕುರಿತು ಉದ್ಧವ್ ಠಾಕ್ರೆ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಬಿಜೆಪಿ ನಾಯಕರು ಈ ಸುದ್ದಿಯನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ; ಚಿಕ್ಕೋಡಿ ವ್ಯಾಪ್ತಿಯ 10 ಸೇತುವೆಗಳು ಜಲಾವೃತ, ಜೀವ ಭಯದಲ್ಲಿ ಕೃಷ್ಣಾ ನದಿ ತೀರದ ಜನ

ಇದನ್ನೂ ಓದಿ
Image
ಮುಂಬೈಗೆ ಬಂದಾಗ ಉದ್ಧವ್ ಠಾಕ್ರೆ ಮನೆ ಮಾತೋಶ್ರೀಗೆ ಭೇಟಿ ನೀಡಲ್ಲ ದ್ರೌಪದಿ ಮುರ್ಮು
Image
Presidential Poll: ರಾಷ್ಟ್ರಪತಿ ಚುನಾವಣೆ; ಶಿವಸೇನೆಯಿಂದ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ
Image
ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗೆ ಉದ್ದವ್​​​ ಠಾಕ್ರೆ ಒತ್ತಾಯ

ಇದು ದೇವೇಂದ್ರ ಫಡ್ನವಿಸ್ ಮತ್ತು ಉದ್ಧವ್ ಠಾಕ್ರೆ ನಡುವೆ ಮಾತ್ರ ನಡೆದ ಸಂಭಾಷಣೆಯಾಗಿದೆ ಎಂದು ಮೂಲಗಳು ಹೇಳಿವೆ. ಉದ್ಧವ್ ಠಾಕ್ರೆ ಅವರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಅವರು ಪ್ರತಿಕ್ರಿಯಿಸಲಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಈ ಹಿಂದೆ 2019ರಲ್ಲಿ ಬಿಜೆಪಿ ಹೈಕಮಾಂಡ್ ಉದ್ಧವ್ ಠಾಕ್ರೆ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತು. ಆದರೆ ಆಗ ಅವರು ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆಸಲು ಸಿದ್ಧರಿಲ್ಲ ಎಂದು ಹೇಳಿದ್ದರು.

Published On - 11:14 am, Mon, 18 July 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್