ಲೋಕಸಭೆ ಚುನಾವಣೆಗೆ ಬೆಳಗಾವಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಬಿಗ್​ ಟ್ವಿಸ್ಟ್!

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಬೆಳಗಾವಿ ಕ್ಷೇತ್ರದ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಆಘಾತಕಾರಿ ಆಗಬಹುದಾದ ಸುದ್ದಿಯೊಂದು ಹೊರ ಬಿದ್ದಿದೆ. ಅದಾಗಿಯೂ, ನಾಳೆಯೇ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು ತಮಗೆ ಟಿಕೆಟ್ ಸಿಗುವುದು ಖಚಿತ ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬೆಳಗಾವಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಬಿಗ್​ ಟ್ವಿಸ್ಟ್!
ಜಗದೀಶ್ ಶೆಟ್ಟರ್
Follow us
TV9 Web
| Updated By: Ganapathi Sharma

Updated on:Mar 16, 2024 | 1:33 PM

ಬೆಂಗಳೂರು, ಮಾರ್ಚ್​ 16: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಹಾವೇರಿ ಮತ್ತು ಧಾರವಾಡ ಕ್ಷೇತ್ರದಲ್ಲಿ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ (Jagadish Shettar) ಬೆಳಗಾವಿಯಿಂದ (Belagavi) ಸ್ಪರ್ಧಿಸುವ ಆಫರ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದರು. ಇದನ್ನು ಒಪ್ಪಿರುವುದಾಗಿಯೂ ಶೆಟ್ಟರ್ ಹೇಳಿದ್ದಾರೆ. ಈ ಮಧ್ಯೆ ಬೆಳಗಾವಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಬಿಗ್​ ಟ್ವಿಸ್ಟ್ ಆಗುವ ಲಕ್ಷಣ ಇದೆ ಎಂಬ ಸುಳಿವು ದೊರೆತಿದೆ.

ಕೊನೆ ಕ್ಷಣದಲ್ಲಿ ಶೆಟ್ಟರ್​ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬಿದೆ. ಬೆಳಗಾವಿಯಿಂದ ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಡ ಹೆಚ್ಚಾಗಿದೆ. ಕಾಂಗ್ರೆಸ್​ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಣಕ್ಕಿಳಿದರೆ ಬಿಜೆಪಿ ಜಾತಿ ಕಾರ್ಡ್​ ಬಳಕೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ, ​ಮೃಣಾಲ್ ಕಣಕ್ಕಿಳಿದ್ರೆ ಬಿಜೆಪಿ ಪಂಚಮಸಾಲಿ ಕಾರ್ಡ್ ಬಳಕೆ ಮಾಡಲಿದೆ ಎಂದು ವರದಿಯಾಗಿದೆ.

ಈ ಮಧ್ಯೆ, ಬೆಳಗಾವಿ ಟಿಕೆಟ್ ಪಡೆಯಲು ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಮಾತ್ರವಲ್ಲದೆ, ರಮೇಶ್ ಜಾರಕಿಹೊಳಿ ಸೇರಿ ಹಲವರಿಂದ ಪ್ರಯತ್ನ ನಡೆಯುತ್ತಿದೆ. ಯತ್ನಾಳ್ ಸದ್ಯ ದೆಹಲಿಯಲ್ಲಿಯೇ ಬೀಡುಬಿಟ್ಟಿದ್ದಾರೆ. ಅವರು ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಭೇಟಿ ಮಾಡುವ ಸಾಧ್ಯತೆ ಇದೆ.

ಮತ್ತೊಂದೆಡೆ, ಶೆಟ್ಟರ್​ಗೆ ಟಿಕೆಟ್ ನೀಡಲು ಬಿಎಲ್ ಸಂತೋಷಗೆ ಒಲವಿಲ್ಲ ಎಂಬುದು ಬಹಿರಂಗವಾಗಿದೆ. ಹೀಗಾಗಿ ಟಿಕೆಟ್​ ಪಡೆಯಲು ಯತ್ನಾಳ್​ ಶತ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು, ಯತ್ನಾಳ್​ಗೆ ಬೆಂಬಲವಾಗಿ ರಮೇಶ್ ಜಾರಕಿಹೊಳಿ ನಿಂತಿದ್ದಾರೆ.

ಇದನ್ನೂ ಓದಿ: ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್; ಜಿಲ್ಲಾ ಬಿಜೆಪಿಯಲ್ಲಿ ತೀವ್ರ ಅಸಮಾಧಾನ; ಕುತೂಹಲ ಕೆರಳಿಸಿದ ನಾಯಕರ ಹೇಳಿಕೆ

ಬೆಳಗಾವಿ ಟಿಕೆಟ್​ ನನಗೇ ಸಿಗಲಿದೆ: ಶೆಟ್ಟರ್ ವಿಶ್ವಾಸ

ಈ ಮಧ್ಯೆ, ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್, ಬಿಜೆಪಿಯ 3ನೇ ಪಟ್ಟಿ ನಾಳೆ ಬಿಡುಗಡೆ ಆಗಬಹುದು. ನಾಳೆ ನನ್ನ ಹೆಸರು ಅಧಿಕೃತ ಘೋಷಣೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಿಂದ ಸ್ಪರ್ಧೆ ಮಾಡಲು‌ ಒಪ್ಪಿಗೆ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಪ್ರಭಾಕರ ಕೋರೆ ಮನೆಯಲ್ಲಿ ಸಭೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, ನಾನು ಪ್ರಭಾಕರ್​​ ಕೋರೆ ಅವರ ಜತೆ ಮಾತಾಡಿದ್ದೇನೆ. ಮನೆಗೆ ಬಂದರೆ ಬೇಡ ಅನ್ನೋಕಾಗುತ್ತಾ? ಪ್ರಭಾಕರ ಕೋರೆ ಅವರು ನೇರವಾಗಿ ಎಲ್ಲೂ ಹೇಳಿಲ್ಲ. ನೇರವಾಗಿ ಹೇಳಿದ್ರೆ ಅದಕ್ಕೆ ಪ್ರತಿಕ್ರಿಯೆ ಕೊಡಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Sat, 16 March 24

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ