AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ10 ಲಕ್ಷ ಯುವಕರಿಗೆ ಉದ್ಯೋಗ; ತೇಜಸ್ವಿ ಯಾದವ್ ನೀಡಿದ ಭರವಸೆ ಬಗ್ಗೆ ನಿತೀಶ್ ಹೇಳಿದ್ದೇನು?

ಉಪ ಮುಖ್ಯಮಂತ್ರಿ ನೀಡಿದ ಭರವಸೆ ಬಗ್ಗೆ ಬಿಹಾರ ಸಿಎಂ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರಲ್ಲಿ ಕೇಳಿದಾಗ, ಅದು ನಿಜ, ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತೇವೆ.

ಬಿಹಾರದಲ್ಲಿ10 ಲಕ್ಷ ಯುವಕರಿಗೆ ಉದ್ಯೋಗ; ತೇಜಸ್ವಿ ಯಾದವ್ ನೀಡಿದ ಭರವಸೆ ಬಗ್ಗೆ ನಿತೀಶ್ ಹೇಳಿದ್ದೇನು?
ನಿತೀಶ್ ಕುಮಾರ್
TV9 Web
| Edited By: |

Updated on: Aug 12, 2022 | 3:10 PM

Share

ಬಿಹಾರದಲ್ಲಿ(Bihar) ಉದ್ಯೋಗ ಸೃಷ್ಟಿ ಕಡೆಗೆ ಗಮನ ಹರಿಸುವ ಮೂಲಕ ಚುನಾವಣಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಹೇಳಿಕೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar)ಸಮರ್ಥಿಸಿಕೊಂಡಿದ್ದಾರೆ. 2020 ಬಿಹಾರ ಚುನಾವಣೆಯಲ್ಲಿ ಆರ್​ಜೆಡಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಸ್ವಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರಿಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ನಿತೀಶ್ ಕುಮಾರ್ ಅವರ ಮಹಾಘಟ್ ಬಂಧನ್ ಅಥವಾ ಮಹಾಮೈತ್ರಿ ಸರ್ಕಾರದಲ್ಲಿ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಸಚಿವ ಸಂಪುಟ ಸೇರಿದ್ದಾರೆ. ಆದಾಗ್ಯೂ, ಈಗ ನೀವು ಅಂದು ಕೊಟ್ಟಿದ್ದ ಭರವಸೆಯನ್ನು ಈಡೇರಿಸುತ್ತೀರಾ ಎಂದು ಕೇಳಿದಾಗ, ನಾನು ಈ ಬಗ್ಗೆ ಬಿಹಾರ ಸಿಎಂ ಜತೆ ಚರ್ಚಿಸಿದ್ದೇನೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಾದ ಕೂಡಲೇ ಈ ಬಗ್ಗೆ ಕಾರ್ಯ ಪ್ರವೃತ್ತರಾಗುತ್ತೇವೆ ಎಂದಿದ್ದಾರೆ. ಉಪ ಮುಖ್ಯಮಂತ್ರಿ ನೀಡಿದ ಭರವಸೆ ಬಗ್ಗೆ ಬಿಹಾರ ಸಿಎಂ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರಲ್ಲಿ ಕೇಳಿದಾಗ, ಅದು ನಿಜ, ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತೇವೆ. ಅವರು ಹೇಳಿದ್ದು ಸರಿ. ಅದಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದಿದ್ದಾರೆ.

ಯಾದವ್ ಅವರಿಗೆ ಹೆಚ್ಚಿನ ಭದ್ರತೆ ನೀಡಿದ್ದಕ್ಕೆ ಆಕ್ಷೇಪವಿದೆ ಎಂಬ ಆರೋಪ ನಿರಾಕರಿಸಿದ ಕುಮಾರ್ ಇದೆಲ್ಲ ಅಸಂಬದ್ಧ ಎಂದಿದ್ದಾರೆ. ಭದ್ರತಾ ಸಮಿತಿಯ ಶಿಫಾರಸು ಮೇರೆ ತೇಜಸ್ವಿ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ.

ಯಾಕೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಬೇಕು? ಅವರು ಉಪ ಮುಖ್ಯಮಂತ್ರಿ. ಅವರಿಗೆ ಭದ್ರತೆ ಬೇಕು. ಆರೋಪಗಳೆಲ್ಲ ಅಸಂಬದ್ಧ ಎಂದಿದ್ದಾರೆ ನಿತೀಶ್. 2024ರ ಚುನಾವಣೆಯಲ್ಲಿ ನೀವು ಪ್ರಧಾನಿ ಅಭ್ಯರ್ಥಿಯೇ ಎಂದು ಕೇಳಿದಾಗ ಅಂಥಾ ಯಾವುದೇ ಉದ್ದೇಶವಿಲ್ಲ. ನಾನು ಎಲ್ಲ ವಿರೋಧ ಪಕ್ಷಗಳನ್ನು ಒಂದೇ ವೇದಿಕೆಗೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ.

ನಾನು ಕೈ ಮುಗಿದು ಹೇಳುತ್ತಿದ್ದೇನೆ, ನನಗೆ ಅಂಥಾ ಯೋಚನೆಗಳೇನೂ ಇಲ್ಲ. ನಾನು ಎಲ್ಲರಿಗಾಗಿ ಕೆಲಸ ಮಾಡಬೇಕು. ಎಲ್ಲ ವಿರೋಧಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದಕ್ಕೆ ನಾನು ಪ್ರಯತ್ನಿಸುತ್ತೇನೆ. ಹೀಗಾದರೆ ಒಳ್ಳೆಯದು ಎಂದು ಹೇಳಿದ್ದಾರೆ. ನಾವು ಎಲ್ಲರನ್ನೂ ಒಗ್ಗೂಡಿಸಲು ಬಯಸುತ್ತೇವೆ. ನಾನು ಪಾಸಿಟಿವ್ ಕೆಲಸ ಮಾಡುತ್ತಿದ್ದೇನೆ. ನನಗೆ ಹಲವಾರು ಫೋನ್ ಕರೆಗಳು ಬಂದಿತ್ತು. ನಾನು ಎಲ್ಲವನ್ನೂ ಮಾಡುವೆ, ಅದಕ್ಕಿಂತ ಮೊದಲು ನಾನಿಲ್ಲಿನ ಕೆಲಸ ಮಾಡುವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತೀಯ ಗ್ರಾಹಕರಿಗೆ 5ಜಿ ವಲಯದಲ್ಲಿ ಕ್ರಾಂತಿಕಾರಕ ಸೇವೆ ಒದಗಿಸುವ ನಿಟ್ಟಿನಲ್ಲಿ 19,867.8 ಮೆಗಾಹರ್ಟ್ಸ್‌ ಸ್ಪೆಕ್ಟ್ರಮ್‌ ಖರೀದಿಸಿದ ಏರ್‌ಟೆಲ್‌

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್