AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor: ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ಬಿಜೆಪಿ ಪರವಾಗಿ ಕೆಲಸ ಮಾಡಲು ಶುರು ಮಾಡಿದರಾ?

ಚುನಾವಣಾ ತಂತ್ರಜ್ಞ ಎಂದೇ ಜನಜನಿತರಾಗಿರುವ ಪ್ರಶಾಂತ್ ಕಿಶೋರ್ ಅವರು ರಾಜಕೀಯವಾಗಿ ಇತ್ತೀಚೆಗೆ ನಿತೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಕೆಲ ದಿನಗಳಿಂದ ಇಬ್ಬರ ನಡುವಿನ ಅಂತರ ಹೆಚ್ಚಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಭೆ ರಾಜಕೀಯ ಮಹತ್ವ ಪಡೆದುಕೊಂಡಿದೆ. ಈ ಭೇಟಿಯ ಮೂಲಕ ಇಬ್ಬರ ನಡುವೆ ರಾಜಿ ಸಂಧಾನಕ್ಕೆ ಅವಕಾಶವಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ

Prashant Kishor: ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ಬಿಜೆಪಿ ಪರವಾಗಿ ಕೆಲಸ ಮಾಡಲು ಶುರು ಮಾಡಿದರಾ?
ಚುನಾವಣಾ ತಂತ್ರಕಾರ ಪ್ರಶಾಂತ್ ಕಿಶೋರ್ ಬಿಜೆಪಿ ಪರವಾಗಿ ಕೆಲಸ ಮಾಡಲು ಶುರು ಮಾಡಿದರಾ?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 04, 2022 | 2:12 PM

ಚುನಾವಣಾ ತಂತ್ರಜ್ಞ ಎಂದೇ ಜನಜನಿತರಾಗಿರುವ ಪ್ರಶಾಂತ್ ಕಿಶೋರ್ ಅವರು ರಾಜಕೀಯವಾಗಿ ಇತ್ತೀಚೆಗೆ ನಿತೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಕೆಲ ದಿನಗಳಿಂದ ಇಬ್ಬರ ನಡುವಿನ ಅಂತರ ಹೆಚ್ಚಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಭೆ ರಾಜಕೀಯ ಮಹತ್ವ ಪಡೆದುಕೊಂಡಿದೆ. ಈ ಭೇಟಿಯ ಮೂಲಕ ಇಬ್ಬರ ನಡುವೆ ರಾಜಿ ಸಂಧಾನಕ್ಕೆ ಅವಕಾಶವಿದೆ ಎಂದು ಎಲ್ಲರೂ ಭಾವಿಸಿದ್ದರು.

ಆದರೆ ಪ್ರಮುಖ ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡುವಿನ ಸಮನ್ವಯ ಯತ್ನ ವಿಫಲವಾಗಿದೆ. ಇತ್ತೀಚೆಗೆ ಪ್ರಶಾಂತ್ ಕಿಶೋರ್ ಅವರು ನಿತೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಕೆಲ ದಿನಗಳಿಂದ ಇಬ್ಬರ ನಡುವಿನ ಅಂತರ ಹೆಚ್ಚಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಭೆ ರಾಜಕೀಯ ಮಹತ್ವ ಪಡೆದುಕೊಂಡಿದೆ. ಈ ಸಭೆಯ ಮೂಲಕ ಇಬ್ಬರ ನಡುವೆ ರಾಜಿ ಸಂಧಾನಕ್ಕೆ ಅವಕಾಶವಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಈ ಸಭೆಯ ನಂತರವೂ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಈ ಹಿಂದಿನಂತೆಯೆ ಟೀಕಿಸುತ್ತಿದ್ದಾರೆ.

ಅದೇ ಮಟ್ಟದಲ್ಲಿ ಪ್ರಶಾಂತ್ ಕಿಶೋರ್ ವಿರುದ್ಧವೂ ಜೆಡಿಯು ನಾಯಕರು ಕೌಂಟರ್ ವಾಗ್ದಾಳಿ ನಡೆಸುತ್ತಿದ್ದಾರೆ. ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಮತ್ತೊಮ್ಮೆ ಪ್ರಶಾಂತ್ ಕಿಶೋರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಶಾಂತ್ ಕಿಶೋರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಹಾರದಲ್ಲಿ ಅವರ ‘ಜನ್ ಸೂರಜ್’ ಪಾದಯಾತ್ರೆಗೆ ಹಣ ಎಲ್ಲಿಂದ ಬರುತ್ತಿದೆ ಎಂದು ಹೇಳುವಂತೆ ಪ್ರಶಾಂತ್ ಕಿಶೋರ್ ಅವರನ್ನು ಕೇಳಿದ್ದಾರೆ.

ನಿತೀಶ್ ಕುಮಾರ್ ಅವರ ಆಡಳಿತದಲ್ಲಿ ಕಳೆದ ದಶಕದಲ್ಲಿ ಬಿಹಾರ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ರಾಜೀವ್ ರಂಜನ್ ಮೆಚ್ಚುಗೆ ವ್ಯಕ್ತಪಡಿಸಿದರು. ಅದು ರಾಜ್ಯದ ಜನತೆಗೂ ಚೆನ್ನಾಗಿ ಗೊತ್ತಿದೆ. ಆದರೆ ಈ ಬಗ್ಗೆ ಪ್ರಶಾಂತ್ ಕಿಶೋರ್ ಅವರಿಂದ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಇದೇ ವೇಳೆ ಕಿಡಿಕಾರಿದ್ದಾರೆ. ಇದೇ ವೇಳೆ, ಪ್ರಶಾಂತ್ ಕಿಶೋರ್ ಇತರ ನಾಗರಿಕರಂತೆ ಯಾತ್ರೆ ಮತ್ತು ಪ್ರದರ್ಶನಗಳನ್ನು ಮಾಡುವ ಹಕ್ಕು ಹೊಂದಿದ್ದಾರೆ ಎಂದಿರುವ ರಾಜೀವ್ ರಂಜನ್,ವ ನಿತೀಶ್ ಕುಮಾರ್ ಅವರ ಆಡಳಿತವನ್ನು ಟೀಕಿಸುವ ಪಾದಯಾತ್ರೆಗೆ ಪ್ರಶಾಂತ್ ಕಿಶೋರ್ ಯಾವುದೇ ಹೆಸರಿಟ್ಟರೂ ಅವರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಅವರ ಮೇಲಿದೆ. ದೊಡ್ಡ ರಾಜಕೀಯ ಪಕ್ಷಗಳೂ ಪತ್ರಿಕೆಗಳಲ್ಲಿ ಪೂರ್ಣ ಪುಟ ಜಾಹೀರಾತು ನೀಡುವುದಿಲ್ಲ ಎಂದು ನೆನಪಿಸಿದರು. ಹಣ ಎಲ್ಲಿಂದ ಬಂತು? ಐಟಿ, ಸಿಬಿಐ, ಇ.ಡಿ ಏಕೆ ಇದರತ್ತ ಗಮನಹರಿಸುತ್ತಿಲ್ಲ? ಕೇಂದ್ರ ಸರ್ಕಾರದ ಬೆಂಬಲದಿಂದಾಗಿ ಪ್ರಶಾಂತ್ ಕಿಶೋರ್ ಅವರಿಗೆ ಎಲ್ಲಿಂದ ಹಣ ಬರುತ್ತಿದೆ ಎಂಬುದರ ಬಗ್ಗೆ ಐಟಿ ಇಲಾಖೆ, ಸಿಬಿಐ ಮತ್ತು ಇ.ಡಿ ಏಕೆ ಕಾಳಜಿ ವಹಿಸುತ್ತಿಲ್ಲ ಎಂದು ಅವರು ಶಂಕೆ ವ್ಯಕ್ತಪಡಿಸಿದರು.

ಈ ಹಿಂದೆ ಬಿಜೆಪಿ ನಾಯಕರು ಕೂಡ ಪ್ರಶಾಂತ್ ಕಿಶೋರ್ ವಿರುದ್ಧ ಇದೇ ರೀತಿಯ ಆರೋಪ ಮಾಡಿದ್ದರು. ನಿತೀಶ್ ಕುಮಾರ್ ಪರ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿದ್ದಾರೆ ಎಂದು ಬಿಹಾರದ ವಕ್ತಾರ ನಿಖಿಲ್ ಆನಂದ್ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಒಬ್ಬ ರಾಜಕೀಯ ದಲ್ಲಾಳಿ. ನಿತೀಶ್ ಕುಮಾರ್ ಅವರೊಂದಿಗೆ ದೋಷಪೂರಿತ ಒಪ್ಪಂದವನ್ನು ಹೊಂದಿದ್ದಾರೆ ಎಂದು ಹೇಳಿದ್ದರು. ಪ್ರಶಾಂತ್ ಕಿಶೋರ್ ಅವರು ನಿತೀಶ್ ಕುಮಾರ್ ಅವರ ರಾಜಕೀಯ ಟೀಕೆಗೆ ಪ್ರಾಮಾಣಿಕತೆಯ ಕೊರತೆಯಿದೆ ಎಂದು ಆರೋಪಿಸಲಾಗಿದೆ.

To read more in Telugu click here

Published On - 1:26 pm, Tue, 4 October 22