Bihar Political Crisis: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಅಂತ್ಯ; ಹೊಸ ಮಿತ್ರಪಕ್ಷದೊಂದಿಗೆ ಹೊಂದಾಣಿಕೆಯ ಮುನ್ಸೂಚನೆ
ಬಿಜೆಪಿಗೆ ಕೈಕೊಟ್ಟು ನಿತೀಶ್ ಕುಮಾರ್ ಸರ್ಕಾರ ಉರುಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2015ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬಿಜೆಪಿಯಿಂದ ಬೇರ್ಪಟ್ಟಿತ್ತು.
ಪಾಟ್ನಾ: ಬಿಹಾರದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟು ಇದೀಗ ರಾಜಭವನದ (Raj Bhavan) ಹೊಸ್ತಿಲಿಗೆ ಹೋಗಿ ನಿಂತಿದೆ. ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ಹಾಗೂ ಸಿಎಂ ನಿತೀಶ್ ಕುಮಾರ್ (Nitish Kumar) ತೇಜಸ್ವಿ ಯಾದವ್ ಅವರೊಂದಿಗೆ ಇಂದು ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಇಂದು ನಿತೀಶ್ ಕುಮಾರ್ ತಮ್ಮ ಪಕ್ಷದ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಿದ್ದಾರೆ. ಇಂದು ಸಂಜೆ ರಾಜ್ಯಪಾಲರ ಭೇಟಿಯ ಬಳಿಕ ಅವರು ಬಿಜೆಪಿ ಸಚಿವರ ಹೆಸರುಗಳನ್ನು ಕೈಬಿಡುವ ಸಾಧ್ಯತೆಯಿದೆ. ಹಾಗೇನಾದರೂ ಆದರೆ, ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಲಿದೆ. ಬಳಿಕ ವಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಜೆಡಿಯು ಸರ್ಕಾರ ರಚಿಸಲು ನಿರ್ಧರಿಸಿದೆ.
ಬಿಜೆಪಿಗೆ ಕೈಕೊಟ್ಟು ನಿತೀಶ್ ಕುಮಾರ್ ಸರ್ಕಾರ ಉರುಳಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2015ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬಿಜೆಪಿಯಿಂದ ಬೇರ್ಪಟ್ಟಿತ್ತು. ಬಳಿಕ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈ ಜೋಡಿಸಿತ್ತು. ಜೆಡಿ(ಯು)-ಆರ್‌ಜೆಡಿ-ಕಾಂಗ್ರೆಸ್ ‘ಮಹಾಘಟಬಂಧನ್’ 2015ರಲ್ಲಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿತ್ತು. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಅವರ ಉಪಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು.
ಇದನ್ನೂ ಓದಿ: Bihar Political Crisis: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯ; ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್
ಆದರೆ, ನಿತೀಶ್ ಕುಮಾರ್ ಅವರು 2017ರಲ್ಲಿ ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸಿದ್ದರು. ಆ ಮೈತ್ರಿ ಕೂಡ ಹೆಚ್ಚು ದಿನ ಉಳಿಯಲಿಲ್ಲ. ಮೊದಲು ಬಿಹಾರದಲ್ಲಿ ಬಿಜೆಪಿಯೊಂದಿಗೆ ಆಡಳಿತ ನಡೆಸುತ್ತಿದ್ದಾಗ ಅವರು ಎನ್‌ಡಿಎ ತೊರೆದು ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡರು. ನಂತರ ಅವರು ಆರ್‌ಜೆಡಿ ತೊರೆದು ಬಿಜೆಪಿ ನೇತೃತ್ವದ ಒಕ್ಕೂಟಕ್ಕೆ ಮರಳಿದರು.
नये स्वरूप में नये गठबंधन के नेतृत्व की जवाबदेही के लिए श्री नीतीश कुमार जी को बधाई। नीतीश जी आगे बढ़िए। देश आपका इंतजार कर कर रहा है।
— Upendra Kushwaha (@UpendraKushJDU) August 9, 2022
ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಜಗಳವು ಅವರ ಮೈತ್ರಿಯ ನಡುವೆ ವಿಭಜನೆಗೆ ಕಾರಣವಾಗಬಹುದು ಎಂದು ಹಿರಿಯ ಜೆಡಿಯು ನಾಯಕ ಉಪೇಂದ್ರ ಕುಶ್ವಾಹಾ ಅವರ ಆಪ್ತರು ಹೇಳಿದ್ದಾರೆ. ಬಿಹಾರದಲ್ಲಿ ಹೊಸ ಸರ್ಕಾರವನ್ನು ರಚಿಸಲು ಆರ್‌ಜೆಡಿ ನಿತೀಶ್ ಕುಮಾರ್‌ಗೆ ಬೆಂಬಲ ಸೂಚಿಸಿದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರಿಸಬೇಕೆ? ಎಂದು ಚರ್ಚಿಸಿದ್ದಾರೆ. ಈ ಸಭೆಯ ನಂತರ ಮಾತನಾಡಿರುವ ಜೆಡಿಯು ಹಿರಿಯ ನಾಯಕರೊಬ್ಬರು “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಹೇಳಿದ್ದರು. ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಒಡೆಯಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ ಎಂಬ ನಿತೀಶ್ ಕುಮಾರ್ ಅವರ ಕಳವಳವೇ ಈ ನಿರ್ಧಾರಕ್ಕೆ ಬಲವಾದ ಕಾರಣ ಎನ್ನಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:18 pm, Tue, 9 August 22