ಬಿಜೆಪಿಯ 18 ಶಾಸಕರ ಅಮಾನತು ಹಿಂಪಡೆಯಬೇಕು: ಸ್ಪೀಕರ್ಗೆ ಆರ್ ಅಶೋಕ ಪತ್ರ
ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದು, ಅಮಾನತುಗೊಂಡ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಸದನದಲ್ಲಿನ ಘಟನೆ ಉದ್ದೇಶಪೂರ್ವಕವಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು, ಏಪ್ರಿಲ್ 01: ಬಿಜೆಪಿಯ (Vidhansabha) 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ (UT Khadar) ಅವರಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashok) ಪತ್ರ ಬರೆದಿದ್ದಾರೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಸಭಾಧ್ಯಕ್ಷರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ಆ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಪತ್ರದಲ್ಲಿ ಏನಿದೆ?
“ಮಾರ್ಚ್ 21 ರಂದು ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ”.
“ಈ ಸಂದರ್ಭದಲ್ಲಿ ತಾವು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತಿರೆಂದು ಆಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರ ನಿರ್ಬಂಧಗಳನ್ನೂ ವಿಧಿಸಲಾಗಿರುತ್ತದೆ.”
“ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳು ಈ ಸ್ಥಳಗಳು “ಪ್ರಜಾಪ್ರಭುತ್ವದ ದೇಗುಲಗಳು” ಎಂದು ಕರೆದರೆ ತಪ್ಪೇನೂ ಇಲ್ಲ. ಈ ದೇಗುಲಗಳಲ್ಲಿನ ಸಭಾಧ್ಯಕ್ಷರು ಮತ್ತು ಮಾನ್ಯ ಸಭಾಪತಿಗಳಿಗೆ ಇರುವ ಸ್ನಾನವೂ ಅಷ್ಟೇ ಗೌರವಾನ್ವಿತವಾದುದು. ಈ ವಿಚಾರದಲ್ಲಿ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ.”
“ಮಾರ್ಚ್ 03 ರಂದು ನಡೆದ ಘಟನೆ ಉದ್ದೇಶಪೂರ್ವಕವಾದುದು ಅಲ್ಲ ಅಥವಾ ನಿಮ್ಮ ಪೀಠಕ್ಕೆ ಅಗೌರವ ತರುವ ಉದ್ದೇಶವೂ ಯಾವ ಶಾಸಕರಿಗೂ ಇರಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ. ಸಂಸದೀಯ ಚರ್ಚೆಯ ಗುಣಮಟ್ಟ ಭಾಷೆಯ ಬಳಕೆ, ಕಲಾಪಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳಲ್ಲವು ದಿನದಿಂದ ದಿನಕ್ಕೆ ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲೀ ಇದು ಅತ್ಯಂತ ಕಷ್ಟದ ಕೆಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗ್ಗೆ ನಮಗೆ ಅಪಾರವಾದ ಗೌರವವಿದೆ.”
ಟ್ವಿಟರ್ ಪೋಸ್ಟ್
ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್ ಅವರಿಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದೇನೆ.
ಜನಸಾಮಾನ್ಯರ… pic.twitter.com/Y7KZ2vAiWy
— R. Ashoka (@RAshokaBJP) April 1, 2025
“ಒಂದು ವೇಳೆ ತಾವು ಅಂದು ನಮ್ಮ ಎಲ್ಲಾ ಶಾಸಕರನ್ನು ತಮ್ಮ ಕೊಠಡಿಗೆ ಕರೆದು ವಿವರಣೆ ಕೇಳಿದ್ದರೆ ನಾವುಗಳು ಖಂಡಿತ ಈ ಘಟನೆಯ ಬಗ್ಗೆ ಸೃಷೀಕರಣ ಕೊಡುತ್ತಿದ್ದೆವು. ಅದಕ್ಕೆ, ಅವಕಾಶ ಸಿಗಲಿಲ್ಲ ಈಗ ಒಂದಿಷ್ಟು ಕಠೋರ ಎನ್ನುವಂಥ ನಿರ್ಧಾರ ತಮ್ಮಿಂದ ವ್ಯಕಟವಾಗಿದೆ. ಇದರಿಂದಾಗಿ ಒಟ್ಟು 18 ಶಾಸಕರು ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದಂತೆ ಆಗಿದೆ. ನಿರ್ಬಂಧಗಳನ್ನು, ಸಡಿಲಿಸಿ ಎಂದಿನಂತೆ ಒಬ್ಬ ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳಿಗೆ ಅವಕಾಶ ಕೊಡಬೇಕೆಂದು ಕೋರಿ ಈ ಪತ್ರವನ್ನು ಬರೆಯುತ್ತಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್ ಅಶೋಕ್
“ನಮ್ಮಗಳ ಪ್ರತಿಭಟನೆ ತಮ್ಮ ವಿರುದ್ಧ ಇರಲಿಲ್ಲ ಎಂಬುದನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತೊಮ್ಮೆ ತಮ್ಮ ಗಮನಕ, ತರಲು ಬಯಸುತ್ತೇನೆ ಈ ಪತ್ರದ ಆರಂಭದಲ್ಲಿ ತಿಳಿಸಿದಂತೆ ಸದನ ದೊಡ್ಡದು. ಸಭಾಧ್ಯಕ್ಷರು ದೊಡ್ಡವರು ಎಂಬ ಪ್ರಜಾಪ್ರಭುತ್ವದ ಮೂಲಭೂತ ಆಶಯಕ್ಕೆ ಅನುಗುಣವಾಗಿ ಹಾಗೂ ನಾವೆಲ್ಲರೂ ಸೇರಿಕೊಂಡು ಈ ಸಂಸ್ಥೆಯ ಘನತೆ ಹಾಗೂ ಗೌರವವನ್ನು ಉಳಿಸಬೇಕಾಗಿದೆ ಎಂಬ ಚಿತ್ರದಲ್ಲಿ ನಂಬಿಕೆ ಇರಿಸಿ ಅಮಾನತ್ತು ಮಾಡಿರುವ 18 ಶಾಸಕರ ಆದೇಶವನ್ನು ಮತ್ತೊಮ್ಮೆ ಮರುವರಿಶೀಲಿಸಲು ಕೋರುತ್ತಾ ಸದರಿ ಆದೇಶವನ್ನು ಹಿಂಪಡೆಯಬೇಕಾಗಿ ತಮ್ಮನ್ನು ಕೋರುತ್ತೇನೆ” ಎಂದು ವಿನಂತಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:07 pm, Tue, 1 April 25