AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾ’ಕೈ’ಸ್ತಾನ ಎಂದು ವ್ಯಂಗ್ಯ: ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್​ಗೆ ಪಾಕ್​ನಲ್ಲಿ ದೂರು ಕೊಡ್ತೀರಾ ಎಂದ ಬಿಜೆಪಿ

ನಿನ್ನೆ(ಫೆ.27) ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ (Congress) ಮೂವರು ಅಭ್ಯರ್ಥಿಗಳು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅದರಲ್ಲೊಬ್ಬರಾದ ನಾಸಿರ್‌ ಹುಸೇನ್‌ ಬೆಂಬಲಿಗರು ಸಂಭ್ರಮಾಚರಣೆ ಮಾಡುವ ವೇಳೆ ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಕೇಳಿಬಂದಿತ್ತು. ಇದು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್​ ಕಿತ್ತಾಟ ಶುರುವಾಗಿದೆ.

ಪಾ'ಕೈ'ಸ್ತಾನ ಎಂದು ವ್ಯಂಗ್ಯ: ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್​ಗೆ ಪಾಕ್​ನಲ್ಲಿ ದೂರು ಕೊಡ್ತೀರಾ ಎಂದ ಬಿಜೆಪಿ
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್​, ಬಿಜೆಪಿ ಕಿತ್ತಾಟ
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 28, 2024 | 7:58 PM

Share

ಬೆಂಗಳೂರು, ಫೆ.28: ರಾಜ್ಯಸಭೆ ಚುನಾವಣೆ ನಡೆದಿದ್ದು, ಅದರಲ್ಲಿ ನೂತನ ಸಂಸದರಾಗಿ ನಿನ್ನೆ(ಫೆ.27) ಕಾಂಗ್ರೆಸ್‌ನ (Congress) ನಾಸಿರ್‌ ಹುಸೇನ್‌ ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ಕುರಿತು ಹಲವು ಬಿಜೆಪಿ(BJP) ನಾಯಕರು ಕಿಡಿಕಾರಿದ್ದರು. ಜೊತೆಗೆ ಇಂದು ವಿಧಾನಸಭೆ ಕಲಾಪದಲ್ಲೂ ಕೂಡ ಸದನದ ಬಾವಿಗಿಳಿದು ಧರಣಿ ನಡೆಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿಯೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ಕಿತ್ತಾಟ ನಡೆಸಿದೆ.

ಪಾ‘ಕೈ’ಸ್ತಾನ ಎಂದು ಬಿಜೆಪಿ ಪೋಸ್ಟ್

ಕಾಂಗ್ರೆಸ್​ ಚಿಹ್ನೆಯಾದ ಹಸ್ತವನ್ನ ಬಳಸಿ ನಿನ್ನೆ ಪಾ‘ಕೈ’ಸ್ತಾನ ಎಂದು ಬಿಜೆಪಿ ಪೋಸ್ಟ್ ಮಾಡಿತ್ತು. ಬಿಜೆಪಿ ಪೋಸ್ಟರ್ ಹಾಕಿದ್ದಕ್ಕೆ ಕೆರಳಿ ಕೆಂಡವಾದ ಕಾಂಗ್ರೆಸ್ ಪಕ್ಷವು, ಅಯೋಗ್ಯ ಬಿಜೆಪಿ ಎಂದು ತಿರುಗೇಟು ನೀಡಿದ್ದಲ್ಲದೆ, ಅವಹೇಳನಕಾರಿ ಪೋಸ್ಟ್ ಡಿಲೀಟ್ ಮಾಡದಿದ್ದರೆ ಕಠಿಣ ಕ್ರಮ ಜರುಗಿಸುವುದು ನಿಶ್ಚಿತ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿತ್ತು. ಕಾಂಗ್ರೆಸ್ ಎಚ್ಚರಿಕೆಗೆ ಮತ್ತೆ ತಿರುಗೇಟು ನೀಡಿದ ಬಿಜೆಪಿ, ‘ನೀವು ದೂರು ದಾಖಲಿಸುವುದು ಪಾಕ್​ನಲ್ಲೋ ಅಥವಾ ಭಾರತದಲ್ಲೋ? ಎಂದು ಕಾಂಗ್ರೆಸ್ ಎಚ್ಚರಿಕೆಗೆ ಮತ್ತೆ ರಾಜ್ಯ ಬಿಜೆಪಿ ಘಟಕ ಟಾಂಗ್ ನೀಡಿತ್ತು.

ಇದನ್ನೂ ಓದಿ:ಪಾಕಿಸ್ತಾನ ಪರ ಘೋಷಣೆ ಆರೋಪ, ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ: ಕಮಲ ನಾಯಕರು ಪೊಲೀಸ್ ವಶಕ್ಕೆ, ಸಿಎಆರ್​ ಮೈದಾನದಲ್ಲಿ ಹೈಡ್ರಾಮಾ!

ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಕಾಂಗ್ರೆಸ್ ಕಾರ್ಯಕರ್ತ

ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮದ ವೇಳೆ ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಮೊಳಗಿತ್ತು. ನಾಸಿರ್ ಹುಸೇನ್ ಹಿಂದೆ ಇದ್ದ ಯುವಕನೊಬ್ಬ 2 ಬಾರಿ ಪಾಕ್​ ಪರ ಘೋಷಣೆ ಕೂಗಿದ್ದ. ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಾಸಿರ್ ಹುಸೇನ್, ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು. ಈ ವೇಳೆ ನಾಸಿರ್ ಹುಸೇನ್ ಹುಸೇನ್ ಪಕ್ಕದಲ್ಲಿ ಇದ್ದ ಯುವಕ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ. ಈ ಹಿನ್ನಲೆ ಬಿಜೆಪಿ ನಾಳೆ(ಫೆ.29) ರಾಜ್ಯಪಾಲರಿಗೆ ದೂರು ನೀಡಲು ಸಜ್ಜಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Wed, 28 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ