ಬಿಜೆಪಿ ಹಾಗೂ ‌ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ: ಸಂಸದ ಡಿಕೆ ಸುರೇಶ್​ ವಾಗ್ದಾಳಿ

ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ (Pratap Simha) ರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದರು.

Follow us
|

Updated on: Jun 04, 2023 | 3:37 PM

ರಾಮನಗರ: ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ (Pratap Simha) ರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದರು. ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ (Guarantee Scheme) ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ ಎಂದು ಕಿಡಿಕಾರಿದರು.

ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೇ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಮುಸ್ಲಿಮರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ, ಯಾರು ಯಜಮಾನಿ ಆಗುತ್ತಾರೆ; ಪ್ರತಾಪ್ ಸಿಂಹ ವ್ಯಂಗ್ಯ

ಗೋ ಹತ್ಯೆ ನಿಷೇದ ಕಾಯ್ದೆ ಬಗ್ಗೆ ಮಾಹಿತಿ ಇಲ್ಲ 

ಗೋ ಹತ್ಯೆ ನಿಷೇದ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ದೌರ್ಜನ್ಯದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗಾಗಿ ವಕೀಲರ ತಂಡ ಸಜ್ಜು: ತೇಜಸ್ವಿ ಸೂರ್ಯ

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ವ್ಯಂಗ್ಯ  

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ನಿನ್ನೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಸ್ಲಿಮರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ. ಆ ಪೈಕಿ ಯಾರು ಯಜಮಾನಿಯಾಗುತ್ತಾರೆ? ಯಾರಿಗೆ 2,000 ರೂ. ನೀಡಲಾಗುತ್ತದೆ ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯವಾಡಿದ್ದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲು ಕಾಂಗ್ರೆಸ್‌ನವರು ಎದೆ ಬಡಿದುಕೊಂಡು ಊರು ಊರಿಗೆ ಹೋಗಿ ತಮಟೆ ಬಾರಿಸಿದ್ದರು. ವಿದ್ಯುತ್ ಎಲ್ಲರಿಗೂ ಉಚಿತ ಅಂದಿದ್ದರು. ಕೆಎಸ್​​​ಆರ್​​ಟಿಸಿ ಅಧಿಕಾರಿಗಳಿಗೆ ಇನ್ನೂ ಮಾಹಿತಿ ಕೊಟ್ಟಿಲ್ಲ ಎಂದು ಟೀಕಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ