Karnataka Politics: ಕರ್ನಾಟಕವನ್ನು ಹಾಳು ಮಾಡಲಿದೆ ಕಾಂಗ್ರೆಸ್; ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ
5 ಖಾತರಿಗಳು ಕಾರ್ಯಗತಗೊಳ್ಳುವ ಯಾವುದೇ ಲಕ್ಷಣಗಳಿಲ್ಲ ಮತ್ತು ಈಗ ಯಾವುದೇ ಅಭಿವೃದ್ಧಿಯೂ ಇಲ್ಲ. ಕಾಂಗ್ರೆಸ್ ಶಾಸಕರು ಇನ್ನು ಮುಖ ಮುಚ್ಚಿಕೊಂಡು ಓಡಾಡಬೇಕಷ್ಟೆ ಎಂದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಿರುವ ಕಾರಣ ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಶಾಸಕರಿಗೆ ಅನುದಾನ ನೀಡಲುನ ಸಾಧ್ಯವಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಹಾಳುಮಾಡಲಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ಟೀಕಿಸಿದ್ದಾರೆ.
ನಾವು ಈ ವರ್ಷ 5 ಉಚಿತ ಗ್ಯಾರಂಟಿಗಳಿಗಾಗಿ 40,000 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕಾಗಿತ್ತು. ಈ ವರ್ಷ ನಾವು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತದೆ. 5 ಖಾತರಿಗಳು ಕಾರ್ಯಗತಗೊಳ್ಳುವ ಯಾವುದೇ ಲಕ್ಷಣಗಳಿಲ್ಲ ಮತ್ತು ಈಗ ಯಾವುದೇ ಅಭಿವೃದ್ಧಿಯೂ ಇಲ್ಲ. ಕಾಂಗ್ರೆಸ್ ಶಾಸಕರು ಇನ್ನು ಮುಖ ಮುಚ್ಚಿಕೊಂಡು ಓಡಾಡಬೇಕಷ್ಟೆ ಎಂದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕೂಡ ಡಿಕೆ ಶಿವಕುಮಾರ್ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
“We have had to set aside 40,000 crore this year (for the 5 guarantees). This year, we can’t provide development.”
Congress will ruin Karnataka. There is no sign of the 5 guarantees being implemented… and now no development too.
MLAs will have no face.https://t.co/6mosnDc6BJ
— Amit Malviya (@amitmalviya) July 27, 2023
ಇದನ್ನೂ ಓದಿ: ಅಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್ ಹೇಳಿಕೆ ಉಲ್ಲೇಖಿಸಿ ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್ ಜೋಶಿ
ಕೆಲವು ಸಚಿವರ ಕಾರ್ಯವೈಖರಿಯಿಂದ ಕಾಂಗ್ರೆಸ್‌ನ ಒಂದು ನಿರ್ದಿಷ್ಟ ವರ್ಗದ ಶಾಸಕರು ಅತೃಪ್ತರಾಗಿದ್ದಾರೆ ಮತ್ತು ಆಯಾ ಕ್ಷೇತ್ರಗಳ ಅಭಿವೃದ್ಧಿಗೆ ಹಣದ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂಬ ವರದಿಗಳ ನಡುವೆ ಡಿಕೆ ಶಿವಕುಮಾರ್ ಅನುದಾನ ನೀಡಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡಿದ್ದರು. ಹಿಂದಿನ ಬಿಜೆಪಿ ಸರ್ಕಾರ ರಾಜ್ಯವನ್ನು ದಿವಾಳಿತನಕ್ಕೆ ತಳ್ಳಿದೆ ಎಂದು ಆರೋಪಿಸಿದ್ದ ಅವರು, ಅವರ ತಪ್ಪುಗಳನ್ನು ಸರಿಪಡಿಸುವುದು ಮತ್ತು ನಮ್ಮ ಖಾತರಿಗಳಿಗೆ ಹಣವನ್ನು ವ್ಯವಸ್ಥೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದರು.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ