ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ, ಟಿಕೆಟ್ ಕೈತಪ್ಪಿದವರಿಗೆ ಸ್ಥಾನ

BJP star campaigners: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪ್ರಚಾರ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಇನ್ನು ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಟಿಕೆಟ್ ವಂಚಿತ ನಾಯಕರಿಗೆ ಸ್ಥಾನ ನೀಡುವುದು ವಿಶೇಷವಾಗಿದೆ.

ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ, ಟಿಕೆಟ್ ಕೈತಪ್ಪಿದವರಿಗೆ ಸ್ಥಾನ
ಬಿಜೆಪಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 29, 2024 | 8:52 PM

ಬೆಂಗಳೂರು, (ಮಾರ್ಚ್ 29): ಕರ್ನಾಟಕದಲ್ಲಿ (Karnataka) ಲೋಕಸಭಾ ಚುನಾವಣೆ (Loksabha Elections 2024) ರಂಗೇರಿದೆ. ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇಂದು ಉಭಯ ಪಕ್ಷಗಳು ಸಮನ್ವಯ ಸಭೆ ನಡೆಸಿದವು. ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ (Karnataka BJP star campaigners:) ಪಟ್ಟಿ ಬಿಡುಗಡೆ ಮಾಡಿದೆ. ನರೇಂದ್ರ ಮೋದಿ, ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ಕರ್ನಾಟಕದ ಮೂವರು ಮಾಜಿ ಸಿಎಂಗಳು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಲ್ಲದೇ ಈ ಬಾರಿ ಲೋಕಸಭಾ ಟಿಕೆಟ್ ನೀಡದೇ ಕೊಕ್ ನೀಡಲಾಗಿರುವ ನಾಯಕರುಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಇಂತಿದೆ

ನರೇಂದ್ರ ಮೋದಿ, ಜಗತ್ ಪ್ರಕಾಶ್ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಕೆ.ಅಣ್ಣಾಮಲೈ, ರಾಧಾಮೋಹನ ದಾಸ್ ಅಗರ್ವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮಾ, ಪ್ರಮೋದ್ ಸಾವಂತ್, ಫಡ್ನವಿಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದಗೌಡ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲು, ಸಿ.ಟಿ.ರವಿ, ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್ ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಭೈರತಿ ಬಸವರಾಜ್, ಪ್ರಮೋದ್ ಮಧ್ವರಾಜ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ, ಎನ್.ಮಹೇಶ್​ಗೆ ಸ್ಟಾರ್​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಸಮನ್ವಯ ಸಮಿತಿ ರಚನೆಗೆ ತೀರ್ಮಾನ: ಜೆಡಿಎಸ್​-ಬಿಜೆಪಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಇಂತಿವೆ

ಟಿಕೆಟ್ ಕೈತಪ್ಪಿದವರಿಗೆ ಮಣೆ

ಹೌದು…ಈ ಬಾರಿ ಹಲವು ಹಾಲಿ ಸಂಸದರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿಲ್ಲ. ಇದರಿಂದ ಕೆಲ ಸಂಸದರು ಅಸಮಾಧಾನಗೊಂಡಿದ್ದಾರೆ. ಇನ್ನೂ ಕೆಲವರು ಟಿಕೆಟ್​ ಕೈತಪ್ಪಿದ ಬೇಸರಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ. ಹೀಗಾಗಿ ಅಂತವರಿಗೆ ಬಿಜೆಪಿ ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಅತೃಪ್ತರನ್ನು ಮನವೊಲಿಸು ಪ್ರಯತ್ನ ಮಾಡಿದೆ.

ಟಿಕೆಟ್ ವಂಚಿತ ಹಾಲಿ ಸಂಸದರ ಪೈಕಿ ಡಿ.ವಿ. ಸದಾನಂದ ಗೌಡ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಮತ್ತು ಎ. ನಾರಾಯಣಸ್ವಾಮಿಗೆ ಅವಕಾಶ ನೀಡಲಾಗಿದೆ. ಮುಖ್ಯವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸ್ಟಾರ್ ಪ್ರಚಾರಕನ್ನಾಗಿ ನೇಮಕ ಮಾಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ಮೈಸೂರು ಅಭ್ಯರ್ಥಿ ಯದುವೀರ ಒಡೆಯರ್, ಮಂಡ್ಯ ಸಂಸದೆ ಸುಮಲತಾ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ