ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಇಲ್ಲಿದೆ ಮಾಹಿತಿ

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾ‌ನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ.

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರImage Credit source: NDTV
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 23, 2023 | 9:01 PM

ಬೆಂಗಳೂರು, ಡಿಸೆಂಬರ್​​ 23: ರಾಜ್ಯ ಬಿಜೆಪಿ (bjp) ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾ‌ನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪದಾಧಿಕಾರಿಗಳ ಪಟ್ಟಿಯಲ್ಲಿ 6 ಶಾಸಕರು, ವಿಧಾನಪರಿಷತ್​ನ ಓರ್ವ ಸದಸ್ಯ, 10 ಮಾಜಿ ಶಾಸಕರಿಗೆ ಅವಕಾಶ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ 6 ಆಪ್ತರು, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ವಿಜಯೇಂದ್ರರ ಇಬ್ಬರು ಆಪ್ತರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿಗೆ ಬಂದಿದ್ದ 17 ವಲಸಿಗರ ಪೈಕಿ ಭೈರತಿ ಬಸವರಾಜ್​ಗೆ ಮತ್ತು 6 ಮಹಿಳೆಯರಿಗೆ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಕರಡು ಸಮಿತಿಯಲ್ಲಿ ಸ್ಥಾನ ನೀಡಿದ್ದಕ್ಕೆ ಖರ್ಗೆಗೆ ಸಿದ್ದರಾಮಯ್ಯ ಧನ್ಯವಾದ

ಕಟೀಲು ಅವಧಿಯಲ್ಲಿನ BJP ಉಪಾಧ್ಯಕ್ಷರ ಪೈಕಿ ಒಬ್ಬರು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಎಂ.ರಾಜೇಂದ್ರ ಮುಂದುವರಿಕೆ ಮಾಡಲಾಗಿದ್ದು, ಕಟೀಲು ಅವಧಿಯಲ್ಲಿನ ನಾಲ್ವರು ಪ್ರಧಾನ ಕಾರ್ಯದರ್ಶಿಗಳ ಬದಲಾವಣೆ ಮಾಡಲಾಗಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ: ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ, ರಾಜೂ ಗೌಡ ನಾಯಕ್, ಎನ್. ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ನಾಯಕ್, ಡಾ. ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ. ರಾಜೇಂದ್ರ ನೇಮಕ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ: ವಿ. ಸುನೀಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ್ ರೆಡ್ಡಿ ಮತ್ತು ಜೆ. ಪ್ರೀತಮ್ ಗೌಡ ನೇಮಕ.

ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾಗಿ: ಶೈಲೇಂದ್ರ ಬೆಲ್ದಾಳೆ, ಡಿ.ಎಸ್. ಅರುಣ್, ಬಸವರಾಜ ‌ಮತ್ತಿಮೂಡ, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ. ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ನೇಮಕ.

ಬಿಜೆಪಿ ರಾಜ್ಯ ಖಜಾಂಚಿಯಾಗಿ: ಸುಬ್ಬನರಸಿಂಹ ನೇಮಕ.

ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆಯಾಗಿ: ಸಿ. ಮಂಜುಳಾ

ಬಿಜೆಪಿ ಯುವ ಮೋರ್ಛಾ ರಾಜ್ಯಾಧ್ಯಕ್ಷರಾಗಿ: ಧೀರಜ್ ಮುನಿರಾಜು ನೇಮಕ

ಬಿಜೆಪಿ ಎಸ್​ಟಿ ಮೋರ್ಛಾ ರಾಜ್ಯಾಧ್ಯಕ್ಷರಾಗಿ: ಬಂಗಾರು ಹನುಮಂತು

ಬಿಜೆಪಿ ಎಸ್​ಸಿ ಮೋರ್ಛಾ ರಾಜ್ಯಾದ್ಯಕ್ಷರಾಗಿ: ಎಸ್. ಮಂಜುನಾಥ್

ಬಿಜೆಪಿ ಒಬಿಸಿ ಮೋರ್ಛಾ ರಾಜ್ಯಾಧ್ಯಕ್ಷರಾಗಿ: ರಘು ಕೌಟಿಲ್ಯ

ಬಿಜೆಪಿ ರೈತ ಮೋರ್ಛಾ ರಾಜ್ಯಾದ್ಯಕ್ಷರಾಗಿ: ಎ.ಎಸ್. ಪಾಟೀಲ್ ನಡಹಳ್ಳಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ರಾಜ್ಯಾಧ್ಯಕ್ಷರಾಗಿ: ಅನಿಲ್ ಥಾಮಸ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.