ಪ್ರಹ್ಲಾದ್ ಜೋಶಿಗೆ ರಾಜಸ್ಥಾನದ ಜವಾಬ್ದಾರಿ; ತೆಲಂಗಾಣ, ಮಧ್ಯ ಪ್ರದೇಶ, ಛತ್ತೀಸ್‌ಗಢದ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

|

Updated on: Jul 07, 2023 | 8:47 PM

ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಅವರನ್ನು ತೆಲಂಗಾಣದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ ಉಸ್ತುವಾರಿಯಾಗಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಈಗ ಜಾವಡೇಕರ್‌ಗೆ ಸಹಕಾರ ನೀಡಲಿದ್ದಾರೆ.

ಪ್ರಹ್ಲಾದ್ ಜೋಶಿಗೆ ರಾಜಸ್ಥಾನದ ಜವಾಬ್ದಾರಿ; ತೆಲಂಗಾಣ, ಮಧ್ಯ ಪ್ರದೇಶ, ಛತ್ತೀಸ್‌ಗಢದ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಜೆಪಿ ನಡ್ಡಾ
Follow us on

ಬಿಜೆಪಿ (BJP) ಶುಕ್ರವಾರ ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು (Election in-charges) ನೇಮಿಸಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮಧ್ಯಪ್ರದೇಶದ (Madhya Pradesh) ಉಸ್ತುವಾರಿ ನೀಡಲಾಗಿದೆ. ಅವರು ಈ ಹಿಂದೆ ಬಿಹಾರ ಮತ್ತು ಗುಜರಾತ್‌ನಲ್ಲಿ ನಡೆದ ಚುನಾವಣೆಗಳ ಮೇಲ್ವಿಚಾರಣೆ ನಡೆಸಿದ್ದರು. ಅವರಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ನೆರವು ನೀಡಲಿದ್ದಾರೆ.  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನಂತರ ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದೆ.

ರಾಜಸ್ಥಾನದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇಲ್ಲಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇಬ್ಬರು ಸಹ-ಇನ್ ಚಾರ್ಜ್‌ಗಳಾಗಿ ನಿತಿನ್ ಪಟೇಲ್ ಮತ್ತು ಕುಲದೀಪ್ ಬಿಷ್ಣೋಯ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಅವರನ್ನು ತೆಲಂಗಾಣದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ ಉಸ್ತುವಾರಿಯಾಗಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಈಗ ಜಾವಡೇಕರ್‌ಗೆ ಸಹಕಾರ ನೀಡಲಿದ್ದಾರೆ.

ಇದನ್ನೂ ಓದಿ: Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಮೋದಿ

ಛತ್ತೀಸ್‌ಗಢದಲ್ಲಿ ಪಕ್ಷದ ಹಿರಿಯ ನಾಯಕ ಓಂ ಮಾಥುರ್ ಅವರು ಪಕ್ಷದ ಚುನಾವಣಾ ಉಸ್ತುವಾರಿಯಾಗಲಿದ್ದು, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಸಹಕಾರ ನೀಡಲಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Fri, 7 July 23