AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

kota srinivas poojary: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಲವು ತಿಂಗಳ ಬಳಿಕ ವಿಧಾಸಭಾ ವಿಪಕ್ಷ ನಾಯಕನನ್ನಾಗಿ ಆರ್ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ವಿಧಾನಪರಿಷತ್ ವಿರೋಧ ಪಕ್ಷದ ನಾಯಕನನ್ನೂ ಸಹ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
ಕೋಟ ಶ್ರೀನಿವಾಸ ಪೂಜಾರಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 25, 2023 | 3:04 PM

Share

ಬೆಂಗಳೂರು, (ಡಿಸೆಂಬರ್ 25): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ(kota srinivas poojary)ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ಉ ಸಹ ನೇಮಕ ಮಾಡಲಾಗಿದೆ.

ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹಾಗೂ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಕ್ಕೆ ಅರವಿಂದ್ ಬೆಲ್ಲದ್​ ಅಸಮಾಧಾನಗೊಂಡಿದ್ದರು. ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಅರವಿಂದ ಬೆಲ್ಲದ್ ಅವರನ್ನು ಸಮಾಧಾನಪಡಿಸಲು ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

ಇನ್ನು ವಿಪಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್​ ರವಿ ಕುಮಾರ್ ಅವರಿಗೆ ವಿಧಾನಪರಿಷತ್​ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.

Published On - 2:51 pm, Mon, 25 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ