ನವದೆಹಲಿ, ಜನವರಿ 27: ಮುಂಬರುವ ಲೋಕಸಭೆ ಚುನಾವಣೆಯನ್ನು (Lok sabha election) ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ಬಿಜೆಪಿ (BJP) ನೇಮಕ ಮಾಡಿದೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ (Radha Mohan Das Agarwal) ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ (Sudhakar Reddy) ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ. ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.
ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ದಕ್ಷಿಣ ರಾಜ್ಯ ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
भारतीय जनता पार्टी के राष्ट्रीय अध्यक्ष श्री @JPNadda ने आगामी लोकसभा चुनाव के लिए निम्नलिखित राज्यों में प्रदेश चुनाव प्रभारी एवं सह-चुनाव प्रभारी की नियुक्ति की है। pic.twitter.com/1hpPH4cNsa
— BJP (@BJP4India) January 27, 2024
ಇನ್ನುಳಿದಂತೆ ಅಂಡಮಾನ್ ಮತ್ತು ನಿಕೋಬಾರ್ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್ಗೆ ತರುಣ್ ಚುಗ್, ಲಕ್ಷ್ಯದ್ವೀಪಕ್ಕೆ ಅರವಿಂದ್ ಮೆನನ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನಾ, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಬಿಹಾರಕ್ಕೆ ವಿನೋದ್ ತಾವ್ಡೆ, ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ
ಮತ್ತೊಂದೆಡೆ, ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆ ಭರದಿಂದ ಸಾಗಿದೆ. ಪ್ರಣಾಳಿಕೆ ಸಿದ್ಧಪಡಿಸಲು ಸಲಹೆ ಸೂಚನೆ ನೀಡುವಂತೆ ಯುವ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಆಹ್ವಾನಿಸಿದ್ದು, ನಮೋ ಅಪ್ಲಿಕೇಶನ್‌ನಲ್ಲಿ ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:03 pm, Sat, 27 January 24