ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೂ ಮುನ್ನಾ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ (Rajya Sabha Poll) ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು (ಮೇ 31) ವಿಧಾನಸಭೆಯ ಕಾರ್ಯದರ್ಶಿ ವಿಶಾಲಕ್ಷಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನಾ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ದೇವಾಲಯಕ್ಕೆ ಆಗಮಿಸಿದಾಗ ವಿತ್ತ ಸಚಿವೆಗೆ ಮಹಿಳಾ ಬಿಜೆಪಿ ಕಾರ್ಯಕರ್ತರು ಆರತಿ ಎತ್ತಿ, ಅರಿಶಿಣ- ಕುಂಕುಮ ನೀಡಿ ಮಂತ್ರ ಘೋಷಗಳೊಂದಿಗೆ ಸ್ವಾಗತ ಕೋರಿದ್ದರು.
ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸುವಾಗ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಉಪಸ್ಥಿತರಿದ್ದರು.
ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಗವಿಪುರಂ ಗೋಸಾಯಿ ಮಹಾ ಸಂಸ್ಥಾನ ಮಠಕ್ಕೆ ಸಚಿವೆ ಭೇಟಿ ನೀಡಿದ್ದರು. ಇನ್ನು ದೇವಸ್ಥಾನದಿಂದ ತೆರಳುವ ಮುನ್ನಾ ಬಿಜೆಪಿ ಮಹಿಳಾ ಕಾರ್ಯಕರ್ತರು ನಿರ್ಮಲಾ ಸೀತಾರಾಮನ್ ಜೊತೆ ಫೋಟೋ ತೆಗೆಸಿಕೊಂಡರು.
Bengaluru | Union Finance Minister Nirmala Sitharaman files her nomination from Karnataka for the upcoming Rajya Sabha polls pic.twitter.com/4IQ4NMWcNP
— ANI (@ANI) May 31, 2022
ಜೆಡಿಎಸ್ ನಾಮ ಪತ್ರ ಸಲ್ಲಿಕೆಗೆ ಅಡ್ಡಿ: ಇನ್ನು 11 ಗಂಟೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಕುಪೇಂದ್ರ ರೆಡ್ಡಿ ಕಾಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ನಾಮಪತ್ರ ಸಲ್ಲಿಕೆಗೆ ಮೊದಲು ಅಪಾಯಿಟ್ಮೆಂಟ್ ತೆಗೆದುಕೊಂಡಿದ್ದರಿಂದ ಜೆಡಿಎಸ್ ನಾಯಕರು ಬೇಗನೇ ಬಂದಿದ್ದರೂ ಕಾಯುವಂತಾಯಿತು. ಬಿಜೆಪಿಯವರು ಸಮಯ ಪಡೆದುಕೊಂಡಿದ್ದಾರೆ. ಬಿಜೆಪಿ ನಾಮಪತ್ರ ಆದ ಮೇಲೆ ಜೆಡಿಎಸ್ ನಾಮಪತ್ರ ಅಂತ ಚುನಾವಣಾಧಿಕಾರಿ ತಡೆದಿದ್ದರು.
ಮಧ್ಯಾಹ್ನ 12.20ಕ್ಕೆ ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಇನ್ನು ಮಧ್ಯಾಹ್ನ 1.20ಕ್ಕೆ ಸರಿಯಾಗಿ ಬಿಜೆಪಿ ಎರಡನೇ ಅಭ್ಯರ್ಥಿ ಜಗ್ಗೇಶ್ ನಾಮಪತ್ರ ಸಲ್ಲಿಸುತ್ತಾರೆ.
ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Published On - 11:52 am, Tue, 31 May 22