ಮೋದಿ…ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ಮೋದಿ...ಮೋದಿ ಎಂದು ಕೂಗಿದರೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿ, ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮೋದಿ...ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು
ಶಿವರಾಜ್ ತಂಗಡಗಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Mar 25, 2024 | 10:30 PM

ಬೆಂಗಳೂರು, (ಮಾರ್ಚ್ 25): “ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ (Shivaraj tangadagi)ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದ್ದು, ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್​ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಇಂದು(ಮಾರ್ಚ್ 25) ಚುನಾವಣೆ ಆಯೋಗಕ್ಕೆ ದೂರು ನೀಡಿದರು.

ಇದನ್ನೂ ಓದಿ: ನಾವೂ ಮೋದಿ ಮೋದಿ ಎನ್ನುತ್ತೇವೆ… ಬನ್ನಿ ನಮ್ಮ ಕಪಾಳಕ್ಕೆ ಹೊಡೆಯಿರಿ: ತಂಗಡಗಿಗೆ ಕಾರ್ಯಕರ್ತರ ಸವಾಲ್

ನಮ್ಮ ಪಕ್ಷದ ಮತದಾರರ ವಿರುದ್ಧ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಎತ್ತಿಕಟ್ಟಿ, ದ್ವೇಷ ಭಾವನೆ ಮೂಡುವಂತೆ ಮಾಡಿ ಮತದಾರರ ಮೇಲೆ ಹಲ್ಲೆ ಮಾಡುವಂತೆ ಪ್ರಚೋದಿಸಿದ್ದಾರೆ. ಇಂಥ ಹೇಳಿಕೆಯಿಂದ ಮತದಾರರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಹೀಗಾಗಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ನಿಯೋಗ ಮನವಿ ಮಾಡಿದೆ.

ಇದನ್ನೂ ಓದಿ:  ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ

ಶಿವರಾಜ್ ತಂಗಡಗಿ ಹೇಳಿದ್ದೇನು?

ಕೊಪ್ಪಳ ಜಿಲ್ಲೆಯ  ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ? ಎಂದು ಪ್ರಶ್ನೆ ಮಾಡಿದ್ದರು.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು