ಜನಾರ್ದನ ರೆಡ್ಡಿಯನ್ನು ಸಂಪರ್ಕಿಸಿರುವ ಬಿಜೆಪಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಕೆಆರ್​ಪಿಪಿ ಸ್ಥಾಪಕ?

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಬೇಕು. ಇಡೀ ವಿಶ್ವವೇ ತಿರುಗಿ ನೋಡುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಜನಾರ್ದನ ರೆಡ್ಡಿಯನ್ನು ಸಂಪರ್ಕಿಸಿರುವ ಬಿಜೆಪಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಕೆಆರ್​ಪಿಪಿ ಸ್ಥಾಪಕ?
ಜನಾರ್ದನ ರೆಡ್ಡಿ
Follow us
TV9 Web
| Updated By: Ganapathi Sharma

Updated on: Jan 27, 2024 | 10:59 AM

ಬೆಂಗಳೂರು, ಜನವರಿ 27: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆಗೊಳಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (G. Janardhana Reddy) ಅವರನ್ನು ಸಂಪರ್ಕಿಸಿದ್ದಾರೆ. ಮತ್ತೆ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕರೂ ಆಗಿರುವ ಶಾಸಕ ಜನಾರ್ದನ ರೆಡ್ಡಿ ಬಳಿ ಅವರ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವಂತೆ ಕೋರಲಾಗಿದೆ. ಬಳಿಕ ಕೊಪ್ಪಳ ಕ್ಷೇತ್ರದಿಂದ ಜನಾರ್ದನ ರೆಡ್ಡಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ವಿಲೀನದ ಬಗ್ಗೆ ಜನಾರ್ದನ ರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕೊಪ್ಪಳ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕಾರಕ್ಕೆ ಒಲವು ತೋರ್ಪಡಿಸಿದ್ದಾರೆ ಎನ್ನಲಾಗಿದೆ. ರೆಡ್ಡಿ ಅವರು ಈ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕರಿಸುವ ಮಾತುಗಳನ್ನಾಡಿದ್ದಾರೆ. ಪ್ರಧಾನಿ ಮೋದಿ ಪರ ಅಭಿಪ್ರಾಯ ವ್ಯಕ್ತಪಡಿಸಿ ಜನಾರ್ದನ ರೆಡ್ಡಿ ಮಾತನಾಡಿದ್ದಾರೆ. ಹೀಗಾಗಿ ರೆಡ್ಡಿಯನ್ನು ಮತ್ತೆ ಪಕ್ಷಕ್ಕೆ ಸೆಳೆಯಲು ಬಿಜೆಪಿ ಪ್ರಯತ್ನ ಆರಂಭಿಸಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಬೇಕು. ಇಡೀ ವಿಶ್ವವೇ ತಿರುಗಿ ನೋಡುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಜನಾರ್ದನ ರೆಡ್ಡಿ ಈ ಹೇಳಿಕೆ ನೀಡಿದ್ದರು.

ಜನಾರ್ದನ ರೆಡ್ಡಿ ಅವರು ಈ ಹಿಂದೆ ಬಿಜೆಪಿಯಲ್ಲೇ ಇದ್ದವರು. ಅಕ್ರಮ ಗಣಿಗಾರಿಕೆ ಸೇರಿದಂತೆ ಹಲವು ಆರೋಪಗಳಿಂದಾಗಿ ಪಕ್ಷ ತ್ಯಜಿಸಬೇಕಾದ ಸಂದರ್ಭ ಅವರಿಗೆ ಒದಗಿಬಂದಿತ್ತು. ಅದಾದ ನಂತರದಲ್ಲಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿಜೆಪಿ ನಾಯಕ ಶ್ರೀರಾಮುಲು ಆಪ್ತರೂ ಆಗಿರುವ ರೆಡ್ಡಿ ಬಿಜೆಪಿಯ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ದಿ. ಸುಷ್ಮಾ ಸ್ವರಾಜ್ ಜತೆ ಉತ್ತಮ ಬಾಂಧವ್ಯ ಹೊಂದಿದ್ದರು.

ಇದನ್ನೂ ಓದಿ: ಯಾವುದೇ ಆಪರೇಷನ್ ಗುರಿ ಇಲ್ಲ, ಲೋಕಸಭಾ ಚುನಾವಣೆಯೇ ನಮ್ಮ ಗುರಿ: ಬಿವೈ ವಿಜಯೇಂದ್ರ

ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಬಲ ವೃದ್ಧಿಸುವತ್ತ ಬಿಜೆಪಿ ದೃಷ್ಟಿ ನೆಟ್ಟಿದೆ. ಆದರೆ, ರೆಡ್ಡಿ ಅವರು ಬಿಜೆಪಿ ಸೇರ್ಪಡೆಗೆ ಮನ ಮಾಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್