ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ಮೋದಿ ಕಡೆ ಬೊಟ್ಟು ತೋರಿಸುತ್ತೀರಾ?: ಸಿದ್ದರಾಮಯ್ಯಗೆ ಯಡಿಯೂರಪ್ಪ ಪ್ರಶ್ನೆ

|

Updated on: Jun 24, 2023 | 8:09 PM

ಕಾಂಗ್ರೆಸ್​ನವರು ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್​ನವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದರು.

ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ಮೋದಿ ಕಡೆ ಬೊಟ್ಟು ತೋರಿಸುತ್ತೀರಾ?: ಸಿದ್ದರಾಮಯ್ಯಗೆ ಯಡಿಯೂರಪ್ಪ ಪ್ರಶ್ನೆ
ಬಿಎಸ್ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ
Follow us on

ಬೆಂಗಳೂರು: ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ನರೇಂದ್ರ ಮೋದಿ (Narendra Modi) ಕಡೆ ಬೊಟ್ಟು ತೋರಿಸುತ್ತೀರಾ ಎಂದು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಘೋಷಿಸಿರುವ ಗ್ಯಾರಂಟಿ ಜಾರಿ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್​ನವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡದ ಕಾಂಗ್ರೆಸ್ ವಿರುದ್ಧ ಅಧಿವೇಶನ ಆರಂಭದ ದಿನದಿಂದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಬೇಕು. ನಮ್ಮ ಶಾಸಕರು ಅಧಿವೇಶನ ನಡೆಸಲು ಬಿಡದೆ ಹೋರಾಡಬೇಕು. ಉಪವಾಸ ಸತ್ಯಾಗ್ರಹ ಬೇಡ, ಊಟ ಮಾಡಿ ಪ್ರತಿಭಟನೆ ಮಾಡೋಣ. ಈ ಸರ್ಕಾರದ ಮೂಗು ಹಿಂಡುವ ಕೆಲಸ ನಾವು ಮಾಡೋಣ ಎಂದು ಹೇಳಿದ ಯಡಿಯೂರಪ್ಪ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಜೊತೆ 10 ಕೆಜಿ ಅಕ್ಕಿ ಸೇರಿಸಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಪೂರ್ಣಾವಧಿ ಸಿಎಂ ಸ್ಥಾನದ ಭರವಸೆ ನಂತರ ಗ್ಯಾರಂಟಿ ಜಾಮೀನಿಗೆ ಸಹಿ ಹಾಕಿದ ಸಿದ್ದರಾಮಯ್ಯ: ಮುನಿರತ್ನ

ಕಾಂಗ್ರೆಸ್​ನವರಿಗೆ ರಾಜಕೀಯ ದೊಂಬರಾಟ ಮಾಡಲು ಬಿಡುವುದಿಲ್ಲ. ಬಿಬಿಎಂಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು. ಸಾಧನೆ ಮಾತಾಡಬೇಕು, ಮಾತಾಡುವುದೇ ಸಾಧನೆ ಆಗಬಾರದು ಎಂದು ಯಡಿಯೂರಪ್ಪ ಹೇಳಿದರು.

ಸಿದ್ದರಾಮಯ್ಯ ಪಂಚೆ ಕಳಚಿಕೊಂಡು ಓಡಬೇಕಾಗುತ್ತದೆ: ಕಾರಜೋಳ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಮಾವೇಶದಲ್ಲಿ ಆರೋಪಿಸಿದ ಮಾಜಿ ಸಚಿವ ಗೋವಿಂದ ಎಂ ಕಾರಜೋಳ, ಸಿದ್ದರಾಮಯ್ಯ ಅವರು ಪಂಚೆ ಮೇಲೇರಿಸಿಕೊಂಡು ಗ್ಯಾರಂಟಿ ಘೋಷಿಸಿದ್ದರು. ಆದರೆ ಈಗ ಆಟೋ ಚಾಲಕರು, ಖಾಸಗಿ ಬಸ್​ ಮಾಲೀಕರು ಬೀದಿಗೆ ಬಿದ್ದಿದ್ದಾರೆ. ಇವರು ಬಡಿಗೆ ಎತ್ತಿಕೊಳ್ಳಲಿದ್ದಾರೆ. ಗೃಹಲಕ್ಷ್ಮೀ ಗ್ಯಾರಂಟಿ ಜಾರಿ ಮಾಡದಿದ್ದರೆ ಸ್ತ್ರೀಯರು ಪೊರಕೆ ಎತ್ತಿಕೊಂಡು ಬರುತ್ತಾರೆ. ಆಗ ಸಿದ್ದರಾಮಯ್ಯ ಅವರು ಪಂಚೆ ಕಳಚಿಕೊಂಡು ಓಡಬೇಕಾಗುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ