Karnataka Congress: ಮಾಡಾಳ್ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡ್ನಂತೆ; ಕಾಂಗ್ರೆಸ್
ಕಡುಭ್ರಷ್ಟ ಬಿಜೆಪಿಗೆ ಮತ ಕೇಳಲು ಜನರ ಮುಂದೆ ಹೋಗಲು ಯಾವುದೇ ನೈತಿಕ ಹಕ್ಕೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು: ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa Arrest) ಅವರನ್ನು ಲೋಕಾಯುಕ್ತ ಬಂಧಿಸಿದ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ (Congress) ವಾಗ್ದಾಳಿ ನಡೆಸಿದೆ. ಮಾಡಾಳ್ ವೀರೂಪಾಕ್ಷಪ್ಪರ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡಿನಂತೆ! 40 ಪರ್ಸೆಂಟ್ ಸರ್ಕಾರ ಭ್ರಷ್ಟರ ರಕ್ಷಣೆಯ ಪ್ರಯತ್ನದ ಹೊರತಾಗಿಯೂ ಈ ಬಂಧನವಾಗಿದ್ದು ಬಿಜೆಪಿಯ ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವುದಕ್ಕೆ ಸಾಕ್ಷಿ. ಇಂಥಹ ಕಡುಭ್ರಷ್ಟ ಬಿಜೆಪಿಗೆ ಮತ ಕೇಳಲು ಜನರ ಮುಂದೆ ಹೋಗಲು ಯಾವುದೇ ನೈತಿಕ ಹಕ್ಕೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿರುವ ವಿಚಾರವಾಗಿಯೂ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. “ಮೋದಿ ಬಂದು ಕೈ ಬೀಸಿ ಹೋದರೆ ಕನ್ನಡಿಗರಿಗೆ ಬರೆ ಎಳೆದರೆಂದೇ ಅರ್ಥ” ಎಂದು ಮೊದಲೇ ಹೇಳಿದ್ದೆವು. ನರೇಂದ್ರ ಮೋದಿ ಅವರೇ, ತಾವು ಬಂದು “ಬಂಜಾರ ಸಮುದಾಯದ ನಿಮ್ಮ ಮಗ ದೆಹಲಿಯಲ್ಲಿ ಕುಳಿತಿದ್ದಾನೆ” ಎಂದು ಹೇಳಿ ಹೋದ ನಂತರ ಇಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ, ಕಲ್ಲು ತೂರಾಟ ನಡೆದಿದೆ. ದೆಹಲಿಯಲ್ಲಿ ಕುಳಿತ ಮಗ ಬಂಜಾರರಿಗೆ ಕೈ ಕೊಟ್ಟನೇ! ಎಂದು ಮತ್ತೊಂದು ಟ್ವೀಟ್ನಲ್ಲಿ ವ್ಯಂಗ್ಯವಾಡಿದೆ.
ಮಾಡಾಳ್ ವೀರೂಪಾಕ್ಷಪ್ಪರ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡಿನಂತೆ!#40percentsarkara ಭ್ರಷ್ಟರ ರಕ್ಷಣೆಯ ಪ್ರಯತ್ನದ ಹೊರತಾಗಿಯೂ ಈ ಬಂಧನವಾಗಿದ್ದು ಬಿಜೆಪಿಯ ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವುದಕ್ಕೆ ಸಾಕ್ಷಿ.
ಇಂಥಹ ಕಡುಭ್ರಷ್ಟ ಬಿಜೆಪಿಗೆ ಮತ ಕೇಳಲು ಜನರ ಮುಂದೆ ಹೋಗಲು ಯಾವುದೇ ನೈತಿಕ ಹಕ್ಕೂ ಇಲ್ಲ
— Karnataka Congress (@INCKarnataka) March 27, 2023
ಮೂಗಿಗೆ ತುಪ್ಪ ಸವರುವ ಬಿಜೆಪಿ ಸರ್ಕಾರದ ನವರಂಗಿ ಆಟಕ್ಕೆ ಜನ ಬ್ರೇಕ್ ಹಾಕುವುದು ನಿಶ್ಚಿತ. “ಇದು ಕೇವಲ ಟ್ರೇಲರ್ ಅಷ್ಟೇ, ಪಿಚ್ಚರ್ ಮುಂದಿದೆ” ಎನ್ನುತ್ತಿದೆ ಬಂಜಾರ ಸಮುದಾಯ, ಪಿಚ್ಚರ್ ನೋಡಲು ತಯಾರಿದ್ದೀರಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಬಿಜೆಪಿ ಜನರತ್ತ ದ್ರೋಹದ ಕಲ್ಲೆಸೆದರೆ, ಜನರ ಕಡೆಯಿಂದಲೂ ಕಲ್ಲು ತೂರಿ ಬರುತ್ತವೆ ಎಂದು ಕಾಂಗ್ರೆಸ್ ಹೇಳಿದೆ.
ಇದನ್ನೂ ಓದಿ: Karnataka Assembly Election 2023: ಮುಸ್ಲಿಮರಿಗೆ ಹೊಸ ಆರಂಭವಾಗಲಿದೆಯೇ ಈ ಚುನಾವಣೆ?
ಒಳಮೀಸಲಾತಿ ಜಾರಿ ವಿರೋಧಿಸಿ ಬಂಜಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದ್ದು, ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಮೈತ್ರಿ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ನಂತರ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿ ಮಾಡುವ ಅವಾಂತರಗಳಿಗೆ ಬಿಜೆಪಿಯೇ ಶಾಸ್ತಿ ಅನುಭವಿಸಲಿದೆ ಎಂಬುದು ಬಿಎಸ್ ಯಡಿಯೂರಪ್ಪ ಅವರ ಮನೆಯ ಕಲ್ಲೆಸೆತವೇ ನಿದರ್ಶನ. ತಳಸಮುದಾಯಗಳಿಗೆ ದ್ರೋಹವೆಸಗುತ್ತಿರುವ ಬಸವರಾಜ ಬೊಮ್ಮಾಯಿ ಅವರ ಮೂಗಿಗೆ ತುಪ್ಪ ಸವರುವ ಕುತಂತ್ರ ಜನತೆಗೆ ಅರ್ಥವಾಗಿದೆ. ಸ್ವತಃ ಬಿಜೆಪಿಯ ಸಚಿವರೇ ಮೀಸಲಾತಿ ಅವಾಂತರದ ವಿರುದ್ಧ ನಿಂತಿರುವುದು ಬಿಜೆಪಿಯ ಎಡಬಿಡಂಗಿ ನೀತಿಗೆ ಸಾಕ್ಷಿ ಎಂದು ಕಾಂಗ್ರೆಸ್ ಟೀಕಿಸಿದೆ.
ಒಳ ಮೀಸಲಾತಿ ನಿರ್ಧಾರ ವಿರೋಧಿಸಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಪತ್ರ ಬರೆದಿದ್ದರು.
ರಾಜಕೀಯಕ್ಕೆ ಸಂಬಂಧಿಸಿದ ಮತ್ತಷ್ಟು ಅಪ್ಡೇಟ್ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ