ಬೆಂಗಳೂರು, ಜನವರಿ 05: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸಚಿನ್ ಪ್ರಕರಣ ರಾಜಕೀಯ ವಲಯದಲ್ಲಿ ಗದ್ದಲ ಎಬ್ಬಿಸಿದೆ. ಇನ್ನೊಂದೆಡೆ ಬಸ್ ಟಿಕೆಟ್ ದರ ಏರಿಕೆ ಕರ್ನಾಕದಾದ್ಯಂತ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಬಿಜೆಪಿ (bjp) ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಶುರುವಾಗಿದೆ. ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು, ಕೇವಲ ರಾಜ್ಯದ ಲೂಟಿ. ಬಿಜೆಪಿ ಕಾಲದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ ವಿರುದ್ಧ ವಿಷ ಕಾರುತ್ತಿದೆ. ಭ್ರಷ್ಟಾಚಾರದ ಪಿತಾಮಹರಾದ ಬಿಜೆಪಿ ನಾಯಕರು ಅವರ ಘನ ಕಾರ್ಯಗಳ ಬಗ್ಗೆ ಕೇಳಿದರೆ ಮಾತ್ರ ಬೆನ್ನು ತಿರುಗಿಸಿ ಓಡುತ್ತಾರೆ ಎಂದು ವಾಗ್ದಾಳಿ ಮಾಡಲಾಗಿದೆ.
ಅಧಿಕಾರದುದ್ದಕ್ಕೂ @BJP4Karnataka ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ ವಿರುದ್ಧ ವಿಷ…
— Karnataka Congress (@INCKarnataka) January 5, 2025
ಇನ್ನು ಪ್ರಧಾನಿ ಮೋದಿ ಸರ್ಕಾರದ ಆಡಳಿತದಲ್ಲಿ ದೇಶದ ಪ್ರಗತಿ ನಿಂತ ನೀರಾಗಿದೆ. ಪ್ರತಿಗಾಮಿ ನೀತಿಗಳು ದೇಶದ ಅರ್ಥ ವ್ಯವಸ್ಥೆ ತಲೆಕೆಳಗಾಗುವಂತೆ ಮಾಡುತ್ತಿದೆ. ಈ ಎಲ್ಲದರ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರವನ್ನೂ ಕಾಡುತ್ತಿದೆ. ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಕುಸಿತ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ.
ಇದನ್ನೂ ಓದಿ: ಮಾನವಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು: ಡಿಕೆಶಿ, ಬಾದರ್ಲಿ, ಹೆಬ್ಬಾಳ್ಕರ್ ವಿರುದ್ಧ ಗಂಭೀರ ಆರೋಪ
ಇನ್ಕ್ರೆಡಿಬಲ್ ಇಂಡಿಯಾ ಘೋಷಣೆ ದೇಶದ ಪ್ರವಾಸೋದ್ಯಮ ಕ್ಷೇತ್ರವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಬೇಕಿತ್ತು. ಆದರೆ ವಾಸ್ತವದಲ್ಲಿ ಅದು ಕೇವಲ ಪ್ರಚಾರದ ಸರಕಾಗಿಯಷ್ಟೇ ಬಳಕೆಯಾಗಿದೆ ಎಂದು ಹರಿಹಾಯ್ದಿದೆ.
ವರದಿ: ಈರಣ್ಣ ಬಸವ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.