ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ 1.30 ಕೋಟಿ ಲಂಚ ಪಡೆದ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ನಾಯಕ ರಮೇಶ್ ಆಗ್ರಹ

ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ಸ್ಥಾನದ ದುರುಪಯೋಗ, ಭ್ರಷ್ಟಾಚಾರ ಹಾಗೂ ವಂಚನೆ ಪ್ರಕರಣ ದಾಖಲಿಸುತ್ತೇವೆ ಎಂದು ರಮೇಶ್ ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ 1.30 ಕೋಟಿ ಲಂಚ ಪಡೆದ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ನಾಯಕ ರಮೇಶ್ ಆಗ್ರಹ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 30, 2022 | 2:54 PM

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಚೆಕ್ ಮೂಲಕ ₹ 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿಂಗ್ಸ್​ಕೋರ್ಟ್​ನ ಎಲ್.ವಿವೇಕಾನಂದ ಎನ್ನುವವರಿಂದ ಸಿದ್ದರಾಮಯ್ಯ ₹ 1.30 ಕೋಟಿ ಲಂಚ ಪಡೆದಿದ್ದರು. ಲಂಚದ ಹಣ ಸಂದಾಯವಾದ ನಂತರವೇ ಅವರು 2014ರಲ್ಲಿ ಟರ್ಫ್​ ಕ್ಲಬ್​ ಉಸ್ತುವಾರಿ ಹುದ್ದೆಗೆ ವಿವೇಕಾನಂದ ಅವರನ್ನು 3 ವರ್ಷಗಳ ಅವಧಿಗೆ ನೇಮಿಸಿದರು ಎಂದು ದೂರಿದರು.

ವಿವೇಕಾನಂದ ಅವರಿಂದ ತಾವು ಸಾಲ ಪಡೆದಿರುವುದಾಗಿ ಸಿದ್ದರಾಮಯ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ಕೊಟ್ಟಿದ್ದರು. ಆದರೆ ಇದು ಸಾಲವಾಗಿರಲಿಲ್ಲ. ಕೇಂದ್ರ ಗೃಹ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ ಯಾರಿಗಾದರೂ ಯಾವುದಾದರೂ ಹುದ್ದೆ ನೀಡುವುದಕ್ಕೆ ಪ್ರತಿಯಾಗಿ ಉಡುಗೊರೆ ಅಥವಾ ಚೆಕ್​ ಪಡೆಯುವಂತಿಲ್ಲ. ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ನಾಳೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಅವರು ಹೇಳಿದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13ರ ಅಡಿಯಲ್ಲಿ ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ಹಣ ಪಡೆದಿರುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ಸ್ಥಾನದ ದುರುಪಯೋಗ, ಭ್ರಷ್ಟಾಚಾರ ಹಾಗೂ ವಂಚನೆ ಪ್ರಕರಣ ದಾಖಲಿಸುತ್ತೇವೆ. ಸಿದ್ದರಾಮಯ್ಯ ವಿರುದ್ಧ ಸಿಬಿಐ, ಸಿಐಡಿ, ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಹುದ್ದೆಗೆ ಪ್ರತಿಯಾಗಿ ಕಿಕ್​ಬ್ಯಾಕ್ ಪಡೆದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆಯಲಾಗಿದೆ. ಈ ಬಗ್ಗೆ ಸೂಕ್ತ ತನಿಖೆಗೆ ಸಿಎಂ ಆದೇಶಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಬಿಜೆಪಿ ವಿರುದ್ಧ ಪೇಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಮೂಡಿತ್ತು. ಪಿಎಸ್​ಐ ನೇಮಕಾತಿ ಹಗರಣ, ಕೆಪಿಎಸ್​ಸಿ ಹಗರಣಗಳನ್ನು ಪದೇಪದೆ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಮೂಲಕ ಬಿಜೆಪಿ ತನ್ನ ಬತ್ತಳಿಕೆಯಲ್ಲಿದ್ದ ಹಳೆಯ ಅಸ್ತ್ರವನ್ನು ಮತ್ತೆ ಪ್ರಯೋಗಿಸಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್​​​ ಭಟ್​ ವಿರುದ್ಧ ಲೋಕಾಯುಕ್ತರಿಗೆ (Lokayukta) ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್ ಅ 12ರಂದು ಲೋಕಾಯುಕ್ತರಿಗೆ ದೂರು ನೀಡಿದ್ದರು. ಖಾಸಗಿ ಬಿಲ್ಡರ್​​​ ಅಶೋಕ್​ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಅವರು ಖರೀದಿಸಿದ್ದರು ಎಂದು ಹೇಳಲಾಗಿದೆ.

ಸರ್ವೆ ನಂಬರ್ 27/1, 28/4, 28/5 ಮತ್ತು 28/6 ರಲ್ಲಿರುವ ಸುಮಾರು 2.39 ಎಕರೆ ಭೂಮಿಯನ್ನು ಡಿ-ನೋಟಿಫೈ ಮಾಡಲಾಗಿದೆ. ಈ ಭೂಮಿಯ ಮೌಲ್ಯವು ₹ 200 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಭಾವಿ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ರಿ-ಡೂ (Re-Do) ಎಂಬ ಹೆಸರಿನಲ್ಲಿ De-Notification ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಾಸ್ಟರ್ ಪ್ಲಾನ್​ ಪ್ರಕಾರ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಯ ಜಾಗ ಎಂದು ಮೀಸಲಿಟ್ಟಿತ್ತು. ನರ್ಸರಿಗಳಿದ್ದ ಸ್ವತ್ತುಗಳನ್ನು ಉದ್ಯಾನವನ ಮತ್ತು ಸಾರ್ವಜನಿಕರ ಬಳಕೆಗೆಂದು ಮೀಸಲಿಡಲಾಗಿತ್ತು. ಇದನ್ನು ಅಶೋಕ್ ಧಾರಿವಾಲ್ ಎಂಬ ಖಾಸಗಿ ಬಿಲ್ಡರ್ ಕಾನೂನುಬಾಹಿರವಾಗಿ ಕ್ರಯಕ್ಕೆ ಪಡೆದಿರುತ್ತಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ನಿಯಮಗಳ ಪ್ರಕಾರ ಈ ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು (No Development Area) ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ