ಮೈಸೂರಿನಲ್ಲೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ: ಜಿಲ್ಲೆಗೆ ಬಂದ ಹೊಸ ಮತ ಯಂತ್ರಗಳ ಬಗ್ಗೆಯೂ ಕೈ ನಾಯಕರ ಅನುಮಾನ

ಬೆಂಗಳೂರು ಮಾತ್ರವಲ್ಲದೇ ಮೈಸೂರಿನಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅಕ್ರಮ ಆರೋಪ ಕೇಳಿಬಂದಿದೆ. ಇನ್ನೂ ಮೈಸೂರಿಗೆ ಹೊಸ ವಿದ್ಯುನ್ಮಾನ ಮತದಾನದ ಯಂತ್ರಗಳು ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲೂ  ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ: ಜಿಲ್ಲೆಗೆ ಬಂದ ಹೊಸ ಮತ ಯಂತ್ರಗಳ ಬಗ್ಗೆಯೂ ಕೈ ನಾಯಕರ ಅನುಮಾನ
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 29, 2022 | 3:39 PM

ಮೈಸೂರು: ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಚುನಾವಣೆ ತಯಾರಿಯಲ್ಲಿ ತೊಡಗಿಕೊಂಡಿವೆ. ಇದರ ಮಧ್ಯೆ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಮೈಸೂರು (Mysuru) ಜಿಲ್ಲೆಗೆ ಹೊಸ ಇವಿಎಂ (EVM Machines) ಗಳನ್ನು ತರಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಣ್ಮಣ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ನ.29) ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯ 11 ವಿಧಾನಸಭೆ ಕ್ಷೇತ್ರಗಳಿಗೆ 5,635 ಬ್ಯಾಲೆಟ್ ಯೂನಿಟ್ 3,958 ಕಂಟ್ರೋಲ್ ಯೂನಿಟ್ ಗಳನ್ನು ತರಿಸಲಾಗಿದೆ. ಇವು ಹೊಸ ವಿದ್ಯುನ್ಮಾನ ಮತದಾನದ ಯಂತ್ರಗಳಾಗಿದ್ದು, ಇದುವರೆಗೂ ಎಲ್ಲೂ ಬಳಕೆಯಾಗದ ಮತಯಂತ್ರಗಳನ್ನು ತರಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದರು.

ಇದ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಹೆಚ್ಚು ಜಯ: ಪ್ರಕಾಶ್ ಅಮ್ಮಣ್ಣಾಯ

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬಹಳಷ್ಟು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಹೊಸ ಮತ ಯಂತ್ರಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಹೊಸ ಮತಯಂತ್ರಗಳನ್ನು ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತಯಾರಿಸಿದೆ. ಆದರೆ ಇವುಗಳ ನಿರ್ವಹಣೆ ಮುಂಬೈ ಮೂಲದ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿಯೊಂದು ಮತಯಂತ್ರದ ಡೆಮೋ ಮಾಡಬೇಕು‌. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಡೆಮೋ ಮಾಡುವ ಮೂಲಕ ಮತಯಂತ್ರಗಳ ಬಗ್ಗೆ ವ್ಯಕ್ತವಾಗಿರುವ ಅನುಮಾನವನ್ನು ದೂರ ಮಾಡಬೇಕು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಒತ್ತಾಯಿಸಿದರು.

ಇನ್ನು ಇದೇ ವೇಳೆ ಮತ್ತೋರ್ವ ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಮಾತನಾಡಿದ್ದು, ಬೆಂಗಳೂರು ಮಾತ್ರವಲ್ಲದೇ ಮೈಸೂರಿನಲ್ಲೂ 1,45,908 ಮತದಾರರ ಹೆಸರು ಡಿಲಿಟ್ ಮಾಡಲಾಗಿದೆ. ಅಧಿಕಾರ ಹಿಡಿಯಲು ಬಿಜೆಪಿ ಸರ್ಕಾರ ಈ ರೀತಿ ಅನೈತಿಕ ದಾರಿ ಹಿಡಿದಿದೆ. ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1 ಲಕ್ಷದ 45 ಸಾವಿರಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ ಎಂದು ಹೊಸ ಬಾಂಬ್ ಸಿಡಿಸಿದರು.

ರಾಜ್ಯದಲ್ಲಿ ನಡೆದಿರುವ ಮತದಾರರ ಮಾಹಿತಿ ಕಳುವು ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಯಾವುದೇ ಕಾರಣವಿಲ್ಲದೇ ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರನ್ನೇ ಗುರಿಯಾಗಿಸಿದೆ. ಮತದಾರರ ಹಕ್ಕನ್ನೇ ಕಸಿದುಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕ್ಷೇತ್ರವಾರು ಅಂಕಿ ಅಂಶಗಳ ಸಹಿತ ಆರೋಪಿಸಿದರು.

ಕೆ ಆರ್ ಕ್ಷೇತ್ರದಲ್ಲಿ – 17,856, ಚಾಮರಾಜ ಕ್ಷೇತ್ರ – 16,224. ಎನ್ ಆರ್ ಕ್ಷೇತ್ರ – 18,007, ಚಾಮುಂಡೇಶ್ವರಿ – 12,367. ಈ ರೀತಿ 11 ಕ್ಷೇತ್ರಗಳಿಂದ ಒಟ್ಟು 1,45,908 ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ.

ಯಾವುದೇ ಕಾರಣ ಇಲ್ಲದೇ ಮತದಾರರ ಹೆಸರನ್ನು ತೆಗೆದಿರುವುದು ಖಂಡನೀಯ. ಸಿಎಂಗೆ ಸಾಕ್ಷಿ ಪ್ರಜ್ಞೆ ಇದ್ದರೆ ನೈತಿಕ ಹೊಣೆ ಹೊತ್ತು ಕೂಡಲೇ ರಾಜಿನಾಮೆ ಕೊಡಬೇಕು. ಅಧಿಕಾರ ಹಿಡಿಯಲು ಇಂತಹ ನೀಚ ಕೆಲಸಕ್ಕೆ ಇಳಿದಿದೆ. ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:28 pm, Tue, 29 November 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ