ಬಿಜೆಪಿಗೆ ಮತ್ತೊಂದು ಶಾಕ್; ಕಮಲಕ್ಕೆ ಗುಡ್​ಬೈ ಹೇಳಿ ಕಾಂಗ್ರೆಸ್​​ಗೆ ಸೇರಲು ಮುಂದಾದ ಮಾಜಿ ಶಾಸಕ

ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಎರಡೂ ಪಕ್ಷದಲ್ಲೂ ಒಂದಿಷ್ಟು ಡ್ಯಾಮೇಜ್​ ಆಗುತ್ತಿದೆ. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಹಲವು ಬಿಜೆಪಿ ನಾಯಕರಿಗೆ ಟಿಕೆಟ್​ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದಾರೆ. ಈ ಎರಡೂ ಕಾರಣದಿಂದ ಎರಡೂ ಪಕ್ಷದ ಹಲವು ನಾಯಕರು ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ. ಅದರಂತೆ ಇದೀಗ ಬಿಜೆಪಿ ಮಾಜಿ ಶಾಸಕ ಪಕ್ಷ ತೊರೆಯಲು ಸಿದ್ದರಾಗಿದ್ದು, ಕಾಂಗ್ರೆಸ್​ನಲ್ಲಿ ಒಂದು ಕಾಲಿಟ್ಟಿದ್ದಾರೆ.

ಬಿಜೆಪಿಗೆ ಮತ್ತೊಂದು ಶಾಕ್; ಕಮಲಕ್ಕೆ ಗುಡ್​ಬೈ ಹೇಳಿ ಕಾಂಗ್ರೆಸ್​​ಗೆ ಸೇರಲು ಮುಂದಾದ ಮಾಜಿ ಶಾಸಕ
ಶಾಸಕ ರಾಮಣ್ಣ ಲಮಾಣಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ವಿವೇಕ ಬಿರಾದಾರ

Updated on: Sep 30, 2023 | 1:35 PM

ಗದಗ ಸೆ,30: ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ-ಜೆಡಿಎಸ್​ (BJP-JDS) ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಎರಡೂ ಪಕ್ಷದಲ್ಲೂ ಒಂದಿಷ್ಟು ಡ್ಯಾಮೇಜ್​ ಆಗುತ್ತಿದೆ. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಹಲವು ಬಿಜೆಪಿ ನಾಯಕರಿಗೆ ಟಿಕೆಟ್​ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದಾರೆ. ಈ ಎರಡೂ ಕಾರಣದಿಂದ ಎರಡೂ ಪಕ್ಷದ ಹಲವು ನಾಯಕರು ಕಾಂಗ್ರೆಸ್​ನತ್ತ (Congress) ಮುಖಮಾಡಿದ್ದಾರೆ. ಅದರಂತೆ ಇದೀಗ ಬಿಜೆಪಿ ಮಾಜಿ ಶಾಸಕ ಪಕ್ಷ ತೊರೆಯಲು ಸಿದ್ದರಾಗಿದ್ದು, ಕಾಂಗ್ರೆಸ್​ನಲ್ಲಿ ಒಂದು ಕಾಲಿಟ್ಟಿದ್ದಾರೆ. ಹೌದು ಶಿರಹಟ್ಟಿಯಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ರಾಮಣ್ಣ ಲಮಾಣಿ (Ramanna Lamani) ಬಿಜೆಪಿಗೆ ಗುಡ್​ಬೈ ಹೇಳಿ ಅ.10ರಂದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಶಿರಹಟ್ಟಿ ತಾಲೂಕಿನ ಕುಂದ್ರಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ. ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತು ನಾನು ಕಾಂಗ್ರೆಸ್​ಗೆ ಸೇರುತ್ತೇವೆ. ಇದೇ ವೇಳೆ ಬಿಜೆಪಿಯ ಹಲವು ಮಾಜಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಶಾಸಕ ರಾಮಣ್ಣ ಲಮಾಣಿ  ಹೇಳಿದರು.

ಬಿಜೆಪಿಯಲ್ಲಿ ಎರಡು ಭಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚ ಮಾಡಿದ್ದೇನೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲ್ಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದ್ದೇನೆ. ಆದರೆ ಈಗೀನ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲ ಎಂದು ಆರೋಪ ಮಾಡಿದರು.

ಇದನ್ನೂ ಓದಿ: ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ನೀವು ರಾಮಣ್ಣ ಲಮಾಣಿ ಅಭಿಮಾನಿಗಳು ನಮ್ಮ ಹತ್ತಿರ ಬರಬೇಡಿ ಎಂದಿದ್ದಾರೆ. ನನ್ನ ಕಾರ್ಯಕರ್ತರು ನನ್ನ ಬಳಿ ಹೇಳಿಕೊಂಡಿದ್ದಾರೆ. ಇದರಿಂದ ಮನಸ್ಸಿಗೆ ಬೇಜಾರ ಆಗಿ ಜಗದೀಶ್ ಶೆಟ್ಟರ್ ಅವರ ಜೊತೆ ಮಾತುಕತೆ ಮಾಡಿದ್ದೇನೆ. ಡಿಸಿಎಂ ಡಿ.ಕೆ.ಶಿವಕುಮಾರನ್ನು ಭೇಟಿಯಾಗಿ ಬಂದಿದೇನೆ. ಅವರು ಹೇಳಿದ್ದಾರೆ ಅಕ್ಟೋಬರ್ 10ಕ್ಕೆ ಬಹಳಷ್ಟು ಮಾಜಿ ಶಾಸಕರು ಬರುತ್ತಿದ್ದಾರೆ. ಅಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗು ಎಂದು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷದ ನಾಯಕರು ಕಾಂಗ್ರೆಸ್ ಸೇರ್ಪಡೆ

ಕಳೆದ ಕೆಲ ದಿನಗಳ ಹಿಂದೆ ಜೆಡಿಎಸ್‌ನ ಮೂವರು ಮಾಜಿ ಶಾಸಕರು ಬೆಂಗಳೂರಿನಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ ರವಾನೆಯಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್