ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್

ಬಿಜೆಪಿಯ ಪ್ರಮುಖ ನಾಯಕರು ಒಬ್ಬರಿಂದೊಬ್ಬರು ಕಾಂಗ್ರೆಸ್​ ಸೇರುತ್ತಿದ್ದಾರೆ. ಇದೀಗ ಮಾಜಿ ಶಾಸಕ ರಾಮಪ್ಪ ಲಮಾಣಿ ಅಧಿಕೃತವಾಗಿ ಕೈ ಹಿಡಿದರು. ಅಲ್ಲದೇ ಬಿಜೆಪಿಯ ಒಂದು ತಂಡ ಸಿನಿಮೀಯ ರೀತಿಯಲ್ಲಿ ಮಾತುಕತೆ ನಡೆಸಿದೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಜಗದೀಶ್ ಶೆಟ್ಟರ್​ ಸಹ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹಲ್​ ಚಲ್ ಎಬ್ಬಿಸಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್
ರುದ್ರಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Oct 12, 2023 | 1:58 PM

ಬೆಂಗಳೂರು, (ಅಕ್ಟೋಬರ್ 12): ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿ(BJP) ತೊರೆದು ಕಾಂಗ್ರೆಸ್ (Congress)ಸೇರ್ಪಡೆಯಾದರು. ಇಂದು (ಅ.12) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್(DK Shivakumar) ಸಮ್ಮುಖದಲ್ಲಿ ಅಧಿಕೃತವಾಗಿ ಕೈ ಹಿಡಿದರು. ಈ ವೇಳೆ ಸಚಿವ ಹೆಚ್​.ಕೆ.ಪಾಟೀಲ್​​, ಶಾಸಕ ಲಕ್ಷ್ಮಣ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ 42 ನಾಯಕರು ಅರ್ಜಿ ಹಾಕಿದ್ದಾರೆ. ನಂಬರ್ ಹೇಳಬಾರದು ಅಂದುಕೊಂಡಿದ್ದೆ, ಹೇಳುವ ಪರಿಸ್ಥಿತಿ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದರು.

ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿರೋಧಿಸಿ 42 ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿದ್ದಾರೆ. ಆಪ್​ನಿಂದ ಸ್ಪರ್ಧಿಸಿದ್ದ 100ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್​ ಸೇರಿದ್ದಾರೆ. ಬಿಜೆಪಿ ಒಂದು ಟೀಂ ಸಿನಿಮಾ ರೀತಿ ನಮ್ಮ ಜತೆ ಮಾತುಕತೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್​ ಎಬ್ಬಿಸಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೆರಡು ವಿಕೆಟ್‌ ಪತನ, ಕೇಸರಿ ಪಡೆಗೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಜಗದೀಶ್ ಶೆಟ್ಟರ್

ರಾಮಪ್ಪ ಲಮಾಣಿ ಮಾತು

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ಯಾವುದೇ ಕಂಡೀಷನ್ ಇಲ್ಲದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಜಗದೀಶ್ ಶೆಟ್ಟರ್ ಸಾಕಷ್ಟು ಮಾಜಿ ಶಾಸಕರಿಗೆ ಗಾಳ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಾಕಷ್ಟು ಮಂದಿಗೆ ಗಾಳ ಹಾಕಿದ್ದು, ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಲಪಡಿಸಲು ನಾನು ಕೆಲಸ ಮಾಡುತ್ತೇನೆ ಎಂದರು.

ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಇನ್ನು ಇದೇ ವೇಳೆ ಮಾಜಿ ಸಿಎಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ. ಸ್ವಂತವಾಗಿ ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕ ಮಾಡುತ್ತಿದ್ದಾರೆ. ಯಾರಿಗೂ ಯಾರೂ ಒತ್ತಡ ಹಾಕುತ್ತಿಲ್ಲ. ರಾಜ್ಯದಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಹೇಳಿದರು.

ಆಪರೇಷನ್ ಹಸ್ತದಲ್ಲಿ ಜಗದೀಶ್ ಶೆಟ್ಟರ್ ಪಾತ್ರವೂ ಸಹ ಮಹತ್ವದಾಗಿದೆ. ರಾಮಪ್ಪ ಲಮಾಣಿ ಹಾಗೂ ಎಂಪಿ ಕುಮಾರಸ್ವಾಮಿ ಕಾಂಗ್ರೆಸ್​ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರು ಮಾತ್ರಲ್ಲದೇ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು, ಬಿಜೆಪಿಯ ಮಾಜಿ ಶಾಸಕರಿಗೂ ಗಾಳ ಹಾಕಿದ್ದಾರೆ ಎಂದು ತಿಳಿದುಬಂದಿದೆ.​

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ