ಬಿಜೆಪಿ ನನ್ನ ವಿರುದ್ಧ ಪಿತೂರಿಯ ಟೂಲ್ ಕಿಟ್ ರೂಪಿಸಿದೆ: ಸಚಿವ ಪ್ರಿಯಾಂಕ್​ ಖರ್ಗೆ

ವಿಜೆಪಿ, ವೈಜೆಪಿ ಮತ್ತು ಎಪಿಜೆಗಳ ನಡುವಿನ ಅಧಿಕಾರ ಹೋರಾಟವನ್ನು ಮರೆಮಾಚಲು ಹೋರಾಟ ಎಂಬ ನಾಟಕವನ್ನು ಬಿಜೆಪಿ ಆರಂಭಿಸಿದೆ. ಬಿಜೆಪಿಗೆ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಅನಿವಾರ್ಯವಾಗಿದೆ, ಹಾಗಾಗಿ ನನ್ನ ವಿರುದ್ಧದ ಪಿತೂರಿಯ ಟೂಲ್ ಕಿಟ್ ರೂಪಿಸಿದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ನನ್ನ ವಿರುದ್ಧ ಪಿತೂರಿಯ ಟೂಲ್ ಕಿಟ್ ರೂಪಿಸಿದೆ: ಸಚಿವ ಪ್ರಿಯಾಂಕ್​ ಖರ್ಗೆ
ಬಿಜೆಪಿ ನನ್ನ ವಿರುದ್ಧ ಪಿತೂರಿಯ ಟೂಲ್ ಕಿಟ್ ರೂಪಿಸಿದೆ: ಸಚಿವ ಪ್ರಿಯಾಂಕ್​ ಖರ್ಗೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 01, 2025 | 7:50 PM

ಬೆಂಗಳೂರು, ಜನವರಿ 01: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವಿಚಾರವಾಗಿ ಬಿಜೆಪಿ (BJP) ನಾಯಕರು ಸರ್ಕಾರದ ಮೇಲೆ ಉರಿದುರಿದು ಬೀಳುತ್ತಿದ್ದಾರೆ. ಈ ಮಧ್ಯೆ ಬಿಜೆಪಿಗೆ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಅನಿವಾರ್ಯವಾಗಿದೆ, ಹಾಗಾಗಿ ನನ್ನ ವಿರುದ್ಧದ ಪಿತೂರಿಯ “ಟೂಲ್ ಕಿಟ್“ ರೂಪಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದೆ ಬಿಜೆಪಿ vs ಕೆಜೆಪಿ ಬಡಿದಾಟವಿತ್ತು. ಈಗ ಬಿಜೆಪಿಯಲ್ಲಿ VJP vs YJP vs AJP ಬಡಿದಾಟ ನಡೆಯುತ್ತಿದೆ, ಈ ಬಡಿದಾಟವನ್ನು ಮರೆಮಾಚಲು ಹೋರಾಟ ಎಂಬ ನಾಟಕ ಶುರು ಮಾಡಿಕೊಂಡಿದೆ. ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ, ಕಾಫಿ, ಟಿ, ಬಿಸ್ಕೆಟ್ ಗಳ ಆತಿಥ್ಯವನ್ನೂ ನೀಡುತ್ತೇನೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ, ರಾಜೀನಾಮೆ ಯಾಕೆ ಕೊಡಬೇಕು: ಸಿಎಂ ಪ್ರಶ್ನೆ

ರಾಜ್ಯ ಬಿಜೆಪಿ ನಾಯಕರು ಹೈಕಮಾಂಡಿಗೆ ತಮ್ಮ ಸಾಧನೆಯ ರಿಪೋರ್ಟ್ ಕಾರ್ಡ್ ತೋರಿಸಲು ನನ್ನ ಹೆಸರಿನಲ್ಲಿ ಹೋರಾಟದ ನಾಟಕ ಆರಂಭಿಸಿದ್ದಾರೆ, ನನ್ನ ಹೆಸರಿನ ಮೂಲಕ ವಿಜಯೇಂದ್ರರವರು “ಸಂಕ್ರಾಂತಿಯ ಡೆಡ್ ಲೈನ್” ದಾಟುವ ಪ್ರಯತ್ನ ನಡೆಸಿದ್ದಾರೆ. ಡಿಯರ್​ ಬಿಜೆಪಿ, ಸುಳ್ಳುಗಳ ಆಧಾರದಲ್ಲಿ ನನ್ನ ವಿರುದ್ಧ ಇಷ್ಟೆಲ್ಲಾ ಸುವ್ಯವಸ್ಥಿತವಾದ, ವಿವಿಧ ಮಾದರಿಯ ಹಾಗೂ ವ್ಯಾಪಕವಾದ ಹೋರಾಟ ಮಾಡುವ ಬದಲು ರಾಜ್ಯದ ಜನರೆದುರು ನಿಮ್ಮ “ನೈತಿಕತೆ“ಯನ್ನು ನಿರೂಪಿಸುವ ಹೋರಾಟ ಮಾಡಿ ಎಂದು ವಾಗ್ದಾಳಿ ಮಾಡಿದ್ದಾರೆ.

  • ಮಹಿಳೆಯರನ್ನು ಅತ್ಯಾಚಾರಗೈದು, ದಲಿತರನ್ನು ನಿಂದಿಸಿ, ಒಕ್ಕಲಿಗ ಮಹಿಳೆಯರನ್ನು ಮಂಚಕ್ಕೆ ಕರೆದ ಮುನಿರತ್ನರವರ ವಿರುದ್ಧ ಹೋರಾಟ ಮಾಡಿ, ಜನ ಮೆಚ್ಚುತ್ತಾರೆ.
  • ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಪೊಕ್ಸೋ ಪ್ರಕರಣ ಎದುರಿಸುತ್ತಿರುವ ಯಡಿಯೂರಪ್ಪನವರ ವಿರುದ್ಧ ಕರಪತ್ರ ಹಂಚಿ, ಜನ ಒಪ್ಪುತ್ತಾರೆ.
  • ಮಹಿಳೆಯರನ್ನು ಅತ್ಯಂತ ಕೊಳಕು ಭಾಷೆಯಲ್ಲಿ ನಿಂದಿಸಿದ ಸಿ.ಟಿ ರವಿಯವರ ಮನೆಗೆ ಮುತ್ತಿಗೆ ಹಾಕಿ, ಜನ ಜೈ ಅನ್ನುತ್ತಾರೆ.
  • ಕೋವಿಡ್ ಕಾಲದಲ್ಲಿ ಹೆಣದ ಮೇಲೆ ಹಣ ಮಾಡಿ, ಭ್ರಷ್ಟಾಚಾರದಿಂದ ಸಾವಿರಾರು ಜೀವ ತೆಗೆದ ಭ್ರಷ್ಟರ ವಿರುದ್ಧ ಕಪ್ಪು ಬಾವುಟ ತೋರಿಸಿ, ಜನ ಸಮಾಧಾನವಾಗುತ್ತಾರೆ.
  • ವಕ್ಫ್ ವರದಿ ಮುಚ್ಚಿ ಹಾಕಲು 150 ಕೋಟಿ ರೂ. ಆಮಿಷ ಒಡ್ಡಿದ ವಿಜಯೇಂದ್ರರವರ ವಿರುದ್ಧ ಪೋಸ್ಟರ್ ಪ್ರದರ್ಶನ ಮಾಡಿ, ಜನ ಬಹುಪರಾಕ್ ಹಾಕುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಬಿಜೆಪಿ ಈ ಎಲ್ಲಾ ಕೆಲಸಗಳನ್ನು ಮಾಡಿ, ರಾಜ್ಯದ ಜನಕ್ಕೆ ನೀವು ಎಸಗಿದ ದ್ರೋಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ, ನಿಮಗೂ “ನೈತಿಕತೆ” ಪದದ ಅರ್ಥ ತಿಳಿದಿದೆ ಎಂಬುದನ್ನು ನಿರೂಪಿಸಿ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೊಬೆಲ್ಸ್ ಸಿದ್ದಾಂತವನ್ನು ಮೆಚ್ಚಿ ನೆಚ್ಚಿಕೊಂಡಿರುವ ಬಿಜೆಪಿಗರು ಮುಂದಿನ ದಿನಗಳಲ್ಲಿ ಗೊಬೆಲ್ಸ್ ಕೂಡ ನಾಚುವಂತ ಸುಳ್ಳುಗಾರರಾಗಿ ಹೊರಹೊಮ್ಮಲಿದ್ದಾರೆ. ಅಂದಹಾಗೆ, ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಈ ಟೂಲ್ ಕಿಟ್​ ತುಂಬಾ ಸೊಗಸಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:49 pm, Wed, 1 January 25

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ