Karnataka Assembly Election: ರಾಜ್ಯದ 12 ನಾಯಕರಿಗೆ ಜಿಲ್ಲಾ ಮಟ್ಟದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್
ವಿಧಾನಸಭಾ ಚುನಾವಣಾ ಸಿದ್ದತೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಗ್ರೌಂಡ್ ಲೆವೆಲ್ ಜವಾಬ್ದಾರಿ ಕೊಟ್ಟಿದೆ. 12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ರಂಗು ಹೆಚ್ಚುತ್ತಿದೆ. ರಾಜಕೀಯ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿವೆ. ರಾಜ್ಯ ಬಿಜೆಪಿ (BJP) ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ನಾಲ್ಕು ದಿಕ್ಕಿನಿಂದಲೂ ಜನಸಂಕಲ್ಪ ರಥಯಾತ್ರೆ ಮೂಲಕ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ತಲುಪುತ್ತಿದ್ದಾರೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಇಡುವ ಮೂಲಕ ಮತ ಕ್ರೋಢೀಕರಣ ಮಾಡುತ್ತಿದ್ದಾರೆ. ಇನ್ನು ಕೇಂದ್ರ ನಾಯಕರು ಕರ್ನಾಟಕದ ಮೇಲೆ ಹದ್ದಿಣ ಕಣ್ಣು ಇಟ್ಟಿದ್ದು, ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ರಾಜ್ಯವಾದ ಕರ್ನಾಟಕದಲ್ಲಿ ಕಮಲವನ್ನು ಅರಳಿಸಲು ಟೊಂಕ ಕಟ್ಟಿ ನಿಂತಿದ್ದಾರೆ. ಈ ಹಿನ್ನೆಲೆ ನಾಯಕರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣಾ ಸಿದ್ದತೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಗ್ರೌಂಡ್ ಲೆವೆಲ್ ಜವಾಬ್ದಾರಿ ಕೊಟ್ಟಿದೆ.
12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಹ ಉಸ್ತುವಾರಿ ಡಿ.ಕೆ. ಅರುಣಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ, ಬಿ. ಶ್ರೀರಾಮುಲು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾಗೆ ಜವಾಬ್ದಾರಿ ನೀಡಲಾಗಿದೆ. 12 ಜನರನ್ನು 5 ತಂಡಗಳನ್ನಾಗಿ ಮಾಡಿ ಜಿಲ್ಲೆಗಳನ್ನು ಹಂಚಿಕೆ ಮಾಡಿದ್ದಾರೆ.
ಈ ತಂಡಗಳು ಜಿಲ್ಲೆಗಳಲ್ಲಿನ ಅಸಮಾಧಾನ ಶಮನ, ಬಿಜೆಪಿ ಕಾರ್ಯಕರ್ತರು ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವಿನ ಸಮನ್ವಯತೆ, ಟಿಕೆಟ್ ಆಕಾಂಕ್ಷಿಗಳ ನಡುವಿನ ಅಸಮಾಧಾನ, ಪ್ರಚಾರಕ್ಕೆ ಬೇಕಿರುವ ಸಂಘಟನಾ ಸಮನ್ವಯತೆ, ಆಕಾಂಕ್ಷಿಗಳ ಪಟ್ಟಿ ರಾಜ್ಯ ಘಟಕಕ್ಕೆ ಸಲ್ಲಿಕೆ ಜವಾಬ್ದಾರಿಯನ್ನು ನಿರ್ವಹಿಸಲಿವೆ. ಕೆಲವು ದಿನಗಳ ಬಿಜೆಪಿ, ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:57 pm, Sat, 4 March 23