ಫೋನ್​ ಕಾಲ್​ ಮೂಲಕ ಲಕ್ಷ್ಮಣ ಸವದಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ, ಸವದಿಗೆ ರಮೇಶ್ ಜಾರಕಿಹೊಳಿ ಚೆಕ್​ ಮೆಟ್

ಫೋನ್​ ಕಾಲ್​ ಮೂಲಕ ಲಕ್ಷ್ಮಣ ಸವದಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇದರೊಂದಿಗೆ ಲಕ್ಷ್ಮಣ ಸವದಿ ರಾಜಕೀಯ ತಂತ್ರಕ್ಕೆ ರಮೇಶ್ ಜಾರಕಿಹೊಳಿ ಚಕ್​ ಮೆಟ್​ ಕೊಟ್ಟಿದ್ದಾರೆ.

ಫೋನ್​ ಕಾಲ್​ ಮೂಲಕ ಲಕ್ಷ್ಮಣ ಸವದಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ, ಸವದಿಗೆ ರಮೇಶ್ ಜಾರಕಿಹೊಳಿ ಚೆಕ್​ ಮೆಟ್
Ramesh Jarkiholi And Laxman Savadi
Follow us
ರಮೇಶ್ ಬಿ. ಜವಳಗೇರಾ
|

Updated on: Mar 28, 2023 | 2:47 PM

ಬೆಳಗಾವಿ: ರಾಜ್ಯ ಸಾರ್ವತ್ರಿಕ ಚುನಾವಣೆಗೆ (Karnataka Assembly Elections 2023) ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಈಗಾಗಲೇ ಮೊದಲ ಪಟ್ಟಿಯನ್ನು ಪ್ರಕಟಸಿಸಿದೆ. ಸದ್ಯ ಬಿಜೆಪಿಯಲ್ಲೂ ಸಹ ಟಿಕೆಟ್‌ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಅಥಣಿ ಟಿಕೆಟ್‌ (athani Assembly constituency Ticket) ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಮಧ್ಯೆ ಜಂಗೀಕುಸ್ತಿ ಫೈಟ್ ನಡೆಯುತ್ತಿದೆ.‌ ಇಷ್ಟು ‌ದಿನ ಸೈಲೆಂಟ್ ಆಗಿದ್ದ ಸವದಿ ಸಮಾವೇಶವನ್ನು ಮಾಡಿ ಜನಾಭಿಪ್ರಾಯ ಪಡೆದು ನಾನು ಟಿಕೆಟ್ ಕೇಳಬೇಕೋ ಬೇಡವೋ ಎಂಬ ನಿರ್ಧಾರ ಮಾಡುತ್ತೇನೆ ಎಂದಿದ್ದರು. ಆದ್ರೆ, ಇದಕ್ಕೆ ರಮೇಶ್​ ಜಾರಕಿಹೊಳಿ (Ramesh Jarkiholi) ಬ್ರೇಕ್​ ಹಾಕಿಸಿದ್ದಾರೆ.

ಇದನ್ನೂ ಓದಿ: Ramesh Jarkiholi: ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೆ ನಾನೂ ಸ್ಪರ್ಧಿಸಲ್ಲ; ರಮೇಶ್ ಜಾರಕಿಹೊಳಿ ಎಚ್ಚರಿಕೆ

ಹೌದು…ರಮೇಶ್ ಜಾರಕಿಹೊಳಿ ಕೇವಲ ತಮ್ಮ ಗೋಕಾಕ್ ಕ್ಷೇತ್ರ ಮಾತ್ರವಲ್ಲದೇ ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ತಮ್ಮದೇ ಹಿಡಿತ ಹೊಂದಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಸ್ವಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ಪಕ್ಷೇತರ ಅಭ್ಯರ್ಥಿ ತಮ್ಮ ಸಹೋದರನನ್ನು(ಲಖನ್ ಜಾರಕಿಹೊಳಿ) ಗೆಲ್ಲಿಸಿ ತಮ್ಮ ಶಕ್ತಿ ತೋರಿಸಿದ್ದರು. ಇದೀಗ ಈ ಬಾರಿ ಚುನಾವಣೆಯಲ್ಲಿ ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್​ ಮಹೇಶ್ ಕುಮಟಳ್ಳಿಗೆ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇತ್ತ ಲಕ್ಷ್ಮಣ ಸವದಿ ಸಹ ಅಥಣಿ ಟಿಕೆಟ್​​ಗೆ ಕಸರತ್ತು ನಡೆಸಿದ್ದಾರೆ. ವಿವಿಧ ಸಮುದಾಯಗಳ ಸಭೆ ಮಾಡುವ ಮೂಲಕ ರಮೇಶ್ ಜಾರಕಿಹೊಳಿಗೆ ಠಕ್ಕರ್​ ಕೊಡಲು ಮುಂದಾಗಿದ್ದ ಸವದಿಗೆ ಹೈಕಮಾಂಡ್​ ಬ್ರೇಕ್​ ಹಾಕಿದೆ. ಬಿಜೆಪಿ ಹೈಕಮಾಂಡ್, ಲಕ್ಷ್ಮಣ ಸವದಿಗೆ ದೂರವಾಣಿ ಕರೆ ಮಾಡಿ ಯಾವುದೇ ಸಮುದಾಯದ ಸಭೆ ಮಾಡದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಹೈಕಮಾಂಡ್​ ಮೂಲಕ ಸವದಿಗೆ ಚೆಕ್ ಮೆಟ್ ಕೊಟ್ರಾ ಎನ್ನುವ ಚರ್ಚೆಗಳು ಶುರುವಾಗಿವೆ.

ಅಥಣಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಂಬಂಧ ವಿವಿಧ ಸಮುದಾಯಗಳ ಲಕ್ಷ್ಮಣ ಸವದಿ ಸಭೆ ಮಾಡಿ ತೀರ್ಮಾನಿಸುವುದಾಗಿ ಹೇಳಿದ್ದರು. ಸವದಿ ಆ್ಯಕ್ಟೀವ್ ಆಗ್ತಿದ್ದಂತೆ ಅಲರ್ಟ್ ಆದ ರಮೇಶ್ ಜಾರಕಿಹೊಳಿ ಈ ಬಗ್ಗೆ ಹೈಕಮಾಂಡ್​ಗೆ ದೂರು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಕೆಲ ದಿನಗಳ ಹಿಂದಷ್ಟೇ ಅಮಿತ್ ಶಾ ಗೆ ಭೇಟಿಯಾಗಿ ಈ ವಿಚಾರ ಗಮನಕ್ಕೆ ತಂದಿದ್ದರು. ಇದೀಗ ಹೈಕಮಾಂಡ್​ ಕರೆ ಮಾಡಿ ಯಾವುದೇ ಸಭೆ ಸಮಾರಂಭ ಮಾಡದಂತೆ ಎಚ್ಚರಿಕೆ ನೀಡಿದೆ. ಬೆಳಗಾವಿ ರಾಜಕಾರಣದಲ್ಲಿ ಮಾತ್ರವಲ್ಲ. ರಾಜ್ಯ ರಾಜಕಾರಣದ ಮೇಲೂ ಪ್ರಭಾವ ಬೀರುವಷ್ಟು ರಮೇಶ್ ಜಾರಕಿಹೊಳಿ ಸಮರ್ಥರಿದ್ದಾರೆ. ಮೈತ್ರಿ ಸರ್ಕಾರ ಮುರಿದು ಬಿಜೆಪಿ ಅಧಿಕಾರಕ್ಕೆ ಬರಲು ರಮೇಶ್ ಜಾರಕಿಹೊಳಿ ಪಾತ್ರ ಸಹ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಮಮಾಂಡ್​ ರಮೇಶ್​ ಜಾರಕಿಹೊಳಿ ಮಾತಿಗೆ ಮನ್ನಣೆ ನೀಡಿದೆ ಎನ್ನಲಾಗುತ್ತಿದೆ. ಹೈಕಮಾಂಡ್ ಅವಕಾಶ ಕೊಟ್ರೇ ಸ್ಪರ್ಧೆ ಮಾಡುತ್ತೇನೆ ಅಂತಿದ್ದ ಲಕ್ಷ್ಮಣ ಸವದಿಯನ್ನ ರಮೇಶ್ ಜಾರಕಿಹೊಳಿ ಸೈಲೆಂಟ್ ಮಾಡಿಸಿದ್ದಾರೆ.

ಒಟ್ಟಿನಲ್ಲಿ ಅಥಣಿಗಾಗಿ ಇಬ್ಬರೂ ನಾಯಕರ ಮಧ್ಯೆ ಟಿಕೆಟ್‌ ಫೈಟ್ ಜೋರಾಗಿಯೇ ನಡೆಯುತ್ತಿದ್ದು, ಈ ಆರದ ಗಾಯಕ್ಕೆ ಹೈ ಕಮಾಂಡ್ ಯಾವ ಮುಲಾಮು ಹುಚ್ಚುತ್ತೆ ಕಾದು ನೋಡಬೇಕು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ