AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವಂಟಮುರಿ ಘಟನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ

ಎಂಎಲ್​ಸಿ ಜಗದೀಶ್ ಶೆಟ್ಟರ್ ಜನ್ಮದಿನಾಚರಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಶುಭಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬೆಳಗಾವಿಯ ಹೊಸ ವಂಟಮುರು ಘಟನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರಕರಣದ ವಿಚಾರದಲ್ಲಿ ಸರ್ಕಾರ ಎಲ್ಲಿ ಫೇಲ್ ಆಗಿದೆ ಎಂದು ಪ್ರಶ್ನಿಸಿದರು.

ಹೊಸ ವಂಟಮುರಿ ಘಟನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on:Dec 17, 2023 | 12:38 PM

ಹುಬ್ಬಳ್ಳಿ, ಡಿ.17: ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಎಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಪ್ರಶ್ನಿಸಿದರು.

ಉತ್ತರ ಪ್ರದೇಶದಲ್ಲಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆಪಿ ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳತ್ತಾರೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇಂತಹ ಎಂಎಲ್ಎ ಇಟ್ಟುಕೊಂಡು ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆಯಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು

ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ ನ್ಯಾಷನಲ್ ಕ್ರೈಂ ಬ್ಯಿರೋ ಅವರ ವರದಿ ನೋಡಲಿ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳತ್ತವೆ. ಬೆಳಗಾವಿಯಲ್ಲಿ ನಡೆದಿದ್ದು ಅನಾಗರಿಕ ಘಟನೆ. ಇದು ನಾಗರಿಕ ಸಮಾಜದಲ್ಲಿ ನಡೆಯಬಾರದು ಎಂದರು.

ತಜ್ಞರ ಜೊತೆ ಸಭೆ ಮಾಡಲು ಸೂಚನೆ

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ನಿನ್ನೆ ಆರೋಗ್ಯ ಇಲಾಖೆ ಸಚಿವರ ಜೊತೆ ನಾನು ಮಾತಾಡಿದ್ದೇ‌ನೆ. ತಜ್ಞರ ಜೊತೆ ಸಭೆ ಮಾಡಲು ಸೂಚಿಸಿದ್ದೇನೆ ಎಂದರು.

ಕೋಲಾರದ ಮಾಲೂರಿನಲ್ಲಿ ವಸತಿ ಶಾಲೆಯ ವಿದ್ಯಾರ್ತಿಗಳಿಂದ ಶೌಚಾಲಯದ ಗುಂಡಿ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ಆ ವಿಚಾರ ನನ್ನ ಗಮನಕ್ಕೆ ಬಂದಿದೆ. ವರದಿ ತರಿಸಿಕೊಳ್ಳುತ್ತೇನೆ. ಯಾರೆ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಜಗದೀಶ್ ಶೆಟ್ಟರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಇಂದು 68ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಹೀಗಾಗಿ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ​​ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಶುಭಕೋರಿದರು. ಬಳಿಕ ಉಪಾಹಾರ ಸೇವಿಸಿದರು. ನಿವಾಸದ ಮುಂದೆ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಆದರೆ, ಶೋಕಾಚರಣೆ ಇದೆ ಶೆಟ್ಟರೆ ಎಂದು ಹೇಳಿ ಸಿದ್ದರಾಮಯ್ಯ ಅವರು ಶಾಲು, ಹಾರ ಸ್ವೀಕರಿಸಲು ನಿರಾಕರಿಸಿದರು. ಸಮಾರಂಭ, ಘೋಷಣೆ ಕೂಗುವುದು ಬೇಡ ಎಂದರು.

ಲೋಕಸಭೆಗೆ ಜಗದೀಶ್ ಶೆಟ್ಟರ್​ ಆಕಾಂಕ್ಷಿ

ಜಗದೀಶ್​ ಶೆಟ್ಟರ್​ಗೆ ಲೋಕಸಭಾ ಟಿಕೆಟ್​ ನೀಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ,  ಶೆಟ್ಟರ್ ಅಭಿಪ್ರಾಯ ಕೇಳುತ್ತಿದ್ದೇವೆ. ಅವ​ರನ್ನೂ ಆಕಾಂಕ್ಷಿ ಅಂತಾ ಅಂದುಕೊಂಡಿದ್ದೇವೆ ಎಂದರು. ಈ ವೇಳೆ ನಾನು ಆಕಾಂಕ್ಷಿ ಅಲ್ಲ ಎಂದು ಶೆಟ್ಟರ್ ಸ್ಪಷ್ಟಪಡಿಸಿದರು. ಶಾಸಕರು, ಕಾರ್ಯಕರ್ತರು ಯಾರಿಗೆ ಹೇಳುತ್ತಾರೋ ಅವರಿಗೆ ಟಿಕೆಟ್ ನೀಡಲಾಗುವುದು. ಪ್ರತಿ ಜಿಲ್ಲೆಯಲ್ಲೂ ಸಚಿವರನ್ನು ವೀಕ್ಷಕರಾಗಿ ನೇಮಕ ಮಾಡಿದ್ದೇವೆ. ಸಚಿವರು ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಅಲ್ಪಸಂಖ್ಯಾತರಿಗೆ ಮೂರು ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ನಾವು ಹಿಂದೇನು ಕೂಡ ಎರಡು ಕೊಟ್ಟಿದ್ದೇವೆ ಈಗಲೂ ಕೂಡ ಕೊಡುತ್ತೇವೆ. ಬಿಜೆಪಿಯವರು ಅಲ್ಪಸಂಖ್ಯಾತರ ವೋಟ್ ಬೇಡ ಅಂತಾರೆ. ಅಲ್ಪಸಂಖ್ಯಾತರು ಭಾರತೀಯ ನಾಗರಿಕರಲ್ಲವೇ? ಇದಕ್ಕೆ ಅವರು ಉತ್ತರ ಹೇಳುತ್ತಾರಾ?  ಗಡ್ಡ ಬಿಟ್ಟವರು ಬುರುಕ ಹಾಕಿದವರು ಬರಬೇಡಿ, ಅವರನ್ನು ನಾನು ಭೇಟಿ ಮಾಡಲ್ಲ ಅಂತ ಯತ್ನಾಳ್ ಹೇಳುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:54 am, Sun, 17 December 23

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ