Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

"ಜಾತ್ಯತೀತ ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ?" ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಸಿದ್ದರಾಮಯ್ಯ, ಹೆಚ್​ಡಿ ಕುಮಾರಸ್ವಾಮಿ
Follow us
Pramod Shastri G
| Updated By: ವಿವೇಕ ಬಿರಾದಾರ

Updated on:Sep 30, 2023 | 1:31 PM

ಬೆಂಗಳೂರು ಸೆ.30: ಬಿಜೆಪಿ (BJP) ಜೊತೆ ಜೆಡಿಎಸ್​ (JDS) ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು “ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು” ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ (HD Kumarswamy) ಅವರು ಸರಣಿ ಟ್ವೀಟ್​​ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ” ಎಂದು ಟಾಂಗ್ ಕೊಟ್ಟರು.​​​

“ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ?” ಎಂದು ಪ್ರಶ್ನಿಸಿದ್ದಾರೆ. “ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್​​​ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್​ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?” ಎಂದು ಸವಾಲು ಹಾಕಿದ್ದಾರೆ.

“ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜತೆ ಮೈತ್ರಿ ಎಫೆಕ್ಟ್: ದೇವೇಗೌಡ್ರು ಭರವಸೆ ಕೊಟ್ಟರೂ ಜೆಡಿಎಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ

“2006ರಲ್ಲಿ ಬಿಜೆಪಿ ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್​ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ ಮರೆತಿರಾ ಛದ್ಮವೇಷಧಾರಿ?? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು” ಎಂದು ವಾಗ್ದಾಳಿ ಮಾಡಿದರು.

“ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್​​ ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?” ಎಂದು ಹ್ಯಷ್​​ಟ್ಯಾಗ್​​ ಛದ್ಮವೇಷಧಾರಿ ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Sat, 30 September 23

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ