ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ಗೆ ಹೃತ್ಪೂರ್ವಕ ಸ್ವಾಗತ ಎಂದ ಅಮಿತ್ ಶಾ, ಜೆಪಿ ನಡ್ಡಾ

BJP JDS Alliance in Karnataka; ಜೆಡಿಎಸ್ ಜತೆಗಿನ ಮೈತ್ರಿಯು ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲಿದೆ. ಜತೆಗೆಬಲಿಷ್ಠ ಎನ್​ಡಿಎ ಮತ್ತು ಬಲಿಷ್ಠ ಭಾರತಕ್ಕೆ ದಾರಿ ಮಾಡಿಕೊಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಸೀಟು ಹಂಚಿಕೆ ವಿಚಾರವಾಗಿ ಉಭಯ ಪಕ್ಷಗಳು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.

ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ಗೆ ಹೃತ್ಪೂರ್ವಕ ಸ್ವಾಗತ ಎಂದ ಅಮಿತ್ ಶಾ, ಜೆಪಿ ನಡ್ಡಾ
ಅಮಿತ್ ಶಾ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು
Follow us
Ganapathi Sharma
|

Updated on: Sep 22, 2023 | 5:46 PM

ನವದೆಹಲಿ, ಸೆಪ್ಟೆಂಬರ್ 22: ಮುಂಬರುವ ಲೋಕಸಭಾ ಚುನಾವಣೆಯ (Lok Sabha Election) ದೃಷ್ಟಿಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಒಮ್ಮತಕ್ಕೆ ಬಂದಿವೆ. ಇದರ ಬೆನ್ನಲ್ಲೇ, ಆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಾಮಾಜಿಕ ಮಾಧ್ಯಮ ‘ಎಕ್ಸ್​​​’ನಲ್ಲಿ ಪೋಸ್ಟ್​ ಮಾಡಿದ್ದು, ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ಗೆ ಹೃತ್ಪೂರ್ವಕ ಸ್ವಾಗತ ಎಂದು ಉಲ್ಲೇಖಿಸಿದ್ದಾರೆ. ಇದಕ್ಕೂ ಮನ್ನ ದೆಹಲಿಯಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಕುಮಾರಸ್ವಾಮಿ, ಅಮಿತ್ ಶಾ, ನಡ್ಡಾ, ನಿಖಿಲ್ ಕುಮಾರಸ್ವಾಮಿ ಕುಪೇಂದ್ರ ರೆಡ್ಡಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಮಾತುಕತೆ ನಡೆಸಿದ್ದರು.

‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕರಾದ ಹೆಚ್​​ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಇದ್ದರು. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನದ ಮೇಲೆ ತಮ್ಮ ನಂಬಿಕೆಯನ್ನು ವ್ಯಕ್ತಪಡಿಸಿರುವ ಜೆಡಿಎಸ್ ಮುಂದೆ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರಲು ನಿರ್ಧರಿಸಿದೆ. ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ ಅನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ’ ಎಂದು ಅಮಿತ್ ಶಾ ‘ಎಕ್ಸ್​’ ಪೋಸ್ಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಜೆಡಿಎಸ್ ಜತೆಗಿನ ಮೈತ್ರಿಯು ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲಿದೆ. ಜತೆಗೆಬಲಿಷ್ಠ ಎನ್​ಡಿಎ ಮತ್ತು ಬಲಿಷ್ಠ ಭಾರತಕ್ಕೆ ದಾರಿ ಮಾಡಿಕೊಡಲಿದೆ ಎಂದು ಅಮಿತ್ ಶಾ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮ; ಮಾತುಕತೆಯ ನಂತರ ಹೆಚ್​ಡಿಕೆ ಹೇಳಿದ್ದಿಷ್ಟು

‘ಜೆಡಿಎಸ್ ನಾಯಕ ಹೆಚ್​​​ಡಿ ಕುಮಾರಸ್ವಾಮಿ ಅವರನ್ನು ಅಮಿತ್ ಶಾ ಅವರ ಸಮ್ಮುಖದಲ್ಲಿ ಭೇಟಿಯಾದೆ. ಎನ್​ಡಿಎ ಮೈತ್ರಿಕೂಟದ ಭಾಗವಾಗಲು ಜೆಡಿಎಸ್ ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಎನ್‌ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇದು ಎನ್‌ಡಿಎ ಮತ್ತು ಗೌರವಾನ್ವಿತ ಪ್ರಧಾನಿಯವರ ‘ನವ ಭಾರತ, ಬಲಿಷ್ಠ ಭಾರತ’ ದೃಷ್ಟಿಕೋನನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.

ಸೀಟು ಹಂಚಿಕೆ ವಿಚಾರವಾಗಿ ಉಭಯ ಪಕ್ಷಗಳು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಸೀಟು ಹಂಚಿಕೆ ಬಗ್ಗೆ ವಿಜಯದಶಮಿ ಬಳಿಕ ಚರ್ಚೆ ನಡೆಸಲಾಗುವುದು ಎಂದು ಜೆಡಿಎಸ್ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ