ಬಿಜೆಪಿ ಜೆಡಿಎಸ್ ಮೈತ್ರಿ ಅಪಸ್ವರ: ಕುಮಾರಸ್ವಾಮಿ ಮುನಿಸು ಶಮನಕ್ಕೆ ನಡ್ಡಾ, ಅಮಿತ್ ಶಾ ಅಖಾಡಕ್ಕೆ

ಬಿಜೆಪಿಯ ಕರ್ನಾಟಕ ನಾಯಕರ ಧೋರಣೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅವರ ಮುನಿಸು ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಸಚಿವ ಅಮಿತ್ ಶಾ ದೂರವಾಣಿ ಮೂಲಕ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದು ಎಲ್ಲವನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ ಅಪಸ್ವರ: ಕುಮಾರಸ್ವಾಮಿ ಮುನಿಸು ಶಮನಕ್ಕೆ ನಡ್ಡಾ, ಅಮಿತ್ ಶಾ ಅಖಾಡಕ್ಕೆ
ಕುಮಾರಸ್ವಾಮಿ & ಅಮಿತ್ ಶಾ (ಸಂಗ್ರಹ ಚಿತ್ರ)
Follow us
| Updated By: ಗಣಪತಿ ಶರ್ಮ

Updated on: Mar 20, 2024 | 9:57 AM

ಬೆಂಗಳೂರು, ಮಾರ್ಚ್ 20: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ (BJP JDS Alliance) ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ನಾಯಕರು ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿ, ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಕುಮಾರಸ್ವಾಮಿಗೆ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮೈತ್ರಿ ವಿಚಾರವಾಗಿ ಯಾವುದೇ ಗೊಂದಲ ಬೇಡ. ಎಲ್ಲವನ್ನೂ ಕುಳಿತು ಮಾತನಾಡಿ ಬಗೆಹರಿಸೋಣ. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡುವುದು ಬೇಡ. ನಿಮ್ಮ ಹೃದಯದ ಚಿಕಿತ್ಸೆ ಸುಸೂತ್ರವಾಗಿ ನೆರವೇರಲಿ. ನಿಮ್ಮ ಆರೋಗ್ಯ ಸುಧಾರಿಸಿದ ನಂತರ ಮಾತುಕತೆ ನಡೆಸೋಣ. ಸದ್ಯದ ಮಟ್ಟಿಗೆ ನಿಮ್ಮ ಆರೋಗ್ಯವೇ ಮೊದಲ ಆದ್ಯತೆ ಆಗಿರಲಿ. ನೀವು ಗುಣಮುಖರಾದ ಬಳಿಕ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮತ್ತು ಪ್ರಧಾನಿ ಮೋದಿ ಅವರನ್ನು ಒಂದೇ ವೇದಿಕೆಯಲ್ಲಿ ಬರುವಂತೆ ಮಾಡಿ ಕಾರ್ಯಕ್ರಮ ಮಾಡೋಣ ಎಂದು ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಗೆ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸುವೆ.

ಸೋಮವಾರ ಪಕ್ಷದ ಸಭೆ ನಡೆಸಿದ್ದ ಕುಮಾರಸ್ವಾಮಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಬಿಜೆಪಿ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಅಭಿಯಾನ ನಡೆದರೂ ಆ ಜಿಲ್ಲೆಗಳ ಜೆಡಿಎಸ್ ನಾಯಕರ ಬಳಿ ಸೌಜನ್ಯಕ್ಕೂ ಮಾತುಕತೆ ನಡೆಸಿಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೂ ಆಹ್ವಾನ ನೀಡಿಲ್ಲ. ಅಲ್ಲದೆ ಕೇವಲ ಎರಡು ಸೀಟಿಗಾಗಿ ಬಿಜೆಪಿ ಜೊತೆ ಇಷ್ಟೆಲ್ಲ ಹೊಂದಾಣಿಕೆ ಮಾಡುವ ಅಗತ್ಯವಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಆಲರ್ಟ್ ಆಗಿದೆ.

ಇದನ್ನೂ ಓದಿ: ಜೆಡಿಎಸ್ ಅಸಮಾಧಾನ, ಈಶ್ವರಪ್ಪ ಬಂಡಾಯದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು

ಈ ಎಲ್ಲ ಬೆಳವಣಿಗೆಗಳ ಮಧ್ಯೆಯೂ ಮಂಗಳವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಅರೆಸೇನಾ ಪಡೆಗಳನ್ನು ಚುನಾವಣಾ ಭದ್ರತೆಗಾಗಿ ಕಳುಹಿಸಬೇಕು ಎಂದು ಆಗ್ರಹಿಸಿದ್ದರು. ಬಳಿಕ ಹೃದಯದ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ