Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವೀಕರ್​ ಯುಟಿ ಖಾದರ್​ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದ ಬಿಜೆಪಿ, ಜೆಡಿಎಸ್​

ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್​ ನೀಡಿದ್ದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ನೋಟಿಸ್​ಗೆ ಸಹಿ ಹಾಕಿದ್ದಾರೆ.

ಸ್ವೀಕರ್​ ಯುಟಿ ಖಾದರ್​ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದ ಬಿಜೆಪಿ, ಜೆಡಿಎಸ್​
ಸ್ವೀಕರ್​ ಯುಟಿ ಖಾದರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 19, 2023 | 5:50 PM

ಬೆಂಗಳೂರು: ತಾಜ್​ ವೆಸ್ಟೆಂಡ್​ ಹೋಟೆಲ್​ನಲ್ಲಿ ನಿನ್ನೆ ಪ್ರತಿಪಕ್ಷಗಳ ಸಭೆ ವೇಳೆ ವಿಧಾನಸಭೆ ಸ್ವೀಕರ್​ ಯು.ಟಿ ಖಾದರ್ (Speaker UT Khader)​​ ಭೇಟಿ ನೀಡಿದ್ದನ್ನು ವಿರೋಧಿಸಿ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ​ ನಿರ್ಣಯಕ್ಕೆ ನೋಟಿಸ್ ನೀಡಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ನ್ಯೂಸ್​ 9 ವರದಿ ಮಾಡಿದೆ.

ಸ್ವೀಕರ್​ ಸ್ಥಾನ ಸಾಂವಿಧಾನಿಕವಾಗಿದ್ದು, ಇತರೆ ಯಾವುದೇ ಪಕ್ಷಗಳೊಂದಿಗೆ ಗುರುತಿಸಕೊಳ್ಳುವಂತಿಲ್ಲ. ಆದರೆ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಆಯ್ಕೆಯಾದ ಸ್ಪೀಕರ್ ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ಪದಚ್ಯುತಗೊಳಿಸಬೇಕು ಮತ್ತು 169 ರ ಅಡಿಯಲ್ಲಿ ಸದನದಲ್ಲಿ ನಿರ್ಣಯವನ್ನು ತರಲು ಸಮಯ ನೀಡುವಂತೆ ನಾವು ವಿನಂತಿಸುತ್ತೇವೆ ಎಂದು ವಿಧಾನಸಭೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: BJP MLAs Suspended: ಸದನದಲ್ಲಿ ಅತಿರೇಕದ ವರ್ತನೆ; ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು

ಯು.ಟಿ ಖಾದರ್ ಅವರು ಈ ವರ್ಷ ಮೇ 24 ರಂದು ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾದರು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಧಿವೇಶನ ಮುಂದುವರಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಖಾದರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡೆಪ್ಯುಟಿ ಸ್ಪೀಕರ್​ ಮೇಲೆ ಕಾಗದ ಪತ್ರ ಎಸೆತ: 10 ಬಿಜೆಪಿ ಶಾಸಕರು ಅಮಾನತು

ವಿಧಾನಸಭೆ ಕಲಾಪದ ಮೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮೇಲೆ ಕಾಗದ ಪತ್ರ ಹರಿದು ಎಸೆಯಲಾಗಿದೆ. ಈ ಹಿನ್ನೆಲೆ ಸ್ಪೀಕರ್​ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದು, 10 ಬಿಜೆಪಿ ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಿ ಸ್ಪೀಕರ್​ ಯು.ಟಿ ಖಾದರ್​​ ಆದೇಶಿಸಿದ್ದಾರೆ.

ಇದನ್ನೂ ಓದಿ: ಬಂಧಿತರನ್ನು ಈಗಲೇ ಉಗ್ರರು ಎನ್ನಲಾಗದು: ಗೃಹ ಸಚಿವ ಪರಮೇಶ್ವರ್ ಹೀಗೆಂದಿದ್ದು ಯಾಕೆ?

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್.ಅಶೋಕ್, ಬೆಂಗಳೂರಿನ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.‌ಅಶ್ವತ್ಥ್ ನಾರಾಯಣ, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶಪಾಲ್ ಸುವರ್ಣ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್, ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನೀಲ್ ಕುಮಾರ್, ಮೂಡಬಿದಿರೆ ಕ್ಷೇತ್ರದ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಅಮಾನತುಗೊಳಗಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:39 pm, Wed, 19 July 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್