ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ: ದೆಹಲಿಗೆ ತೆರಳಲಿರುವ ಹೆಚ್​ಡಿ ಕುಮಾರಸ್ವಾಮಿ

BJP, JDS seat sharing: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಇಂದು (ಡಿ. 20) ಸಂಜೆ ದೆಹಲಿಗೆ ತೆರಳಲಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ: ದೆಹಲಿಗೆ ತೆರಳಲಿರುವ ಹೆಚ್​ಡಿ ಕುಮಾರಸ್ವಾಮಿ
ಅಮಿತ್ ಶಾ & ಕುಮಾರಸ್ವಾಮಿ (ಸಂಗ್ರಹ ಚಿತ್ರ)
Follow us
Sunil MH
| Updated By: Ganapathi Sharma

Updated on:Dec 20, 2023 | 1:57 PM

ಬೆಂಗಳೂರು, ಡಿಸೆಂಬರ್ 20: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ಜತೆ ಮಾತುಕತೆ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಇಂದು (ಬುಧವಾರ) ಸಂಜೆ ದೆಹಲಿಗೆ ತೆರಳಲಿದ್ದಾರೆ. 5 ರಿಂದ 7 ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಎನ್ನಲಾಗಿದೆ.

ಏಳು ಕ್ಷೇತ್ರಗಳನ್ನು ಜಡಿಎಸ್​ಗೆ ನೀಡಬೇಕೆಂದು ಕುಮಾರಸ್ವಾಮಿ ಬೇಡಿಕೆ ಇಡುವ ಸಾಧ್ಯತೆ ಇದೆ. ಕನಿಷ್ಠ 5 ಕ್ಷೇತ್ರಕ್ಕೆ ಪಟ್ಟುಹಿಡಿಯುವ ಸಾಧ್ಯತೆ ಇದೆ. ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ ಏಳು ಕ್ಷೇತ್ರದ‌ ಮೇಲೆ ಜೆಡಿಎಸ್ ಒಲವು ಹೊಂದಿದೆ ಎನ್ನಲಾಗಿದೆ.

ಕುಮಾರಸ್ವಾಮಿ ಅವರು ಇಂದು ರಾತ್ರಿ ಅಥವಾ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ನಿರೀಕ್ಷೆ ಇದೆ.

2019ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಗೆದ್ದೇ ಗೆಲ್ಲುವ 15ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ. ಇನ್ನುಳಿದ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟು ಕೊಡುವ ಲೆಕ್ಕಾಚಾರಗಳು ನಡೆದಿವೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದವು.

ಇದನ್ನೂ ಓದಿ: ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ

ಈ ಮಧ್ಯೆ, ಖುದ್ದು ಕುಮಾರಸ್ವಾಮಿ ಅವರನ್ನೇ ಲೋಕಸಭಾ ಕಣಕ್ಕಿಳಿಸಿ ಕೇಂದ್ರ ಸಚಿವ ಮಾಡುವ ಬಗ್ಗೆ ಬಿಜೆಪಿ ಆಫರ್ ನೀಡಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಬಿಜೆಪಿ ಆಗಲೀ ಜೆಡಿಎಸ್ ಆಗಲೀ ಈವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 20 December 23