BY Vijayendra: ದೆಹಲಿಯಲ್ಲಿ ಜೆಪಿ ನಡ್ಡಾ, ಜೋಶಿ ಭೇಟಿಯಾದ ವಿಜಯೇಂದ್ರ, ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ನಾಯಕರು ಸಿದ್ಧತೆ ತೀವ್ರಗೊಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ಭೇಟಿ ನೀಡಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಚುನಾವಣೆ ಸಿದ್ಧತೆ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ.
ನವದೆಹಲಿ, ಫೆಬ್ರವರಿ 9: ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಶುಕ್ರವಾರ ದೆಹಲಿಯಲ್ಲಿ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ, ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಒದಗಿಸಿ ಚರ್ಚಿಸಲಾಯಿತು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗುತ್ತಿರುವ ನಡುವೆಯೇ ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
ನವ ದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಜೀ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಒದಗಿಸಿ ಚರ್ಚಿಸಲಾಯಿತು. pic.twitter.com/lAVXMMszv2
— Vijayendra Yediyurappa (@BYVijayendra) February 9, 2024
ಆ ನಂತರ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನೂ ವಿಜಯೇಂದ್ರ ಭೆಟಿಯಾದರು. ಇದೇ ವೇಳೆ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಂಸದರಾದ ಪಿಸಿ ಗದ್ದಿಗೌಡರ್, ಪಿಸಿ ಮೋಹನ್ ಕೂಡ ಉಪಸ್ಥಿತರಿದ್ದರು.
ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರು ಹಾಗೂ ಹಿರಿಯರಾದ ಪ್ರಲ್ಹಾದ್ ಜೋಶಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಚರ್ಚಿಸಿ ಮಾಹಿತಿ ಒದಗಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಸಂಸದರು, ಮಾಜಿ ಸಂಸದರು ಹಾಗೂ ಮಾಜಿ ಸಚಿವರುಗಳು ಉಪಸ್ಥಿತರಿದ್ದರು ಎಂದು ವಿಜಯೇಂದ್ರ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿ ಚಾಣಕ್ಯ: ಕುಮಾರಸ್ವಾಮಿ ನಿವಾಸಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ
ಶನಿವಾರ ಮೈಸೂರಿಗೆ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಫೆಬ್ರವರಿ 10ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಆದರೆ, ಅವರ ಪೂರ್ವನಿಗದಿತ ಭೇಟಿಯಲ್ಲಿ ತುಸು ಬದಲಾವಣೆ ಆಗಿದೆ. ಬೆಂಗಳೂರಿನಲ್ಲಿ ನಡೆಸಬೇಕಿದ್ದ ಸಭೆ ರದ್ದಾಗಿದ್ದು, ಮೈಸೂರಿಗಷ್ಟೇ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಶನಿವಾರ ರಾತ್ರಿ ಮೈಸೂರಿಗೆ ತಲುಪಲಿರುವ ಶಾ ಅಲ್ಲಿ ವಾಸ್ತವ್ಯ ಹೂಡಿ 11ರಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ