ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ; ಪ್ರತಾಪ್ ಸಿಂಹ ಹೇಳಿಕೆಗೆ ಹೀಗಿತ್ತು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ
ಡಿಸೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಎಲ್ಲರೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಸಿಎಂ ವಿಚಾರಕ್ಕೆ ಡಿಸೆಂಬರ್ನಲ್ಲಿ ಸರ್ಕಾರ ಪತನವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೆಂಗಳೂರು: ಹೊಂದಾಣಿಕೆ ರಾಜಕಾರಣ ವಿಚಾರವಾಗಿ ಬಿಜೆಪಿಯಲ್ಲಿ ವಾಕ್ಸಮರ ಆರಂಭವಾದ ಬೆನ್ನಲ್ಲೇ ಆ ಕುರಿತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯಲ್ಲಿ ಕೆಲವು ಮಂದಿ ನಾಯಕರು ಹೊಂದಾಣಿಕೆ ರಾಜಕಾರಣ ಮಾಡಿದ್ದಾರೆ ಎಂಬ ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿಕೆಗೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಕಟೀಲ್, ಬಿಜೆಪಿಯಲ್ಲಿ ಎಲ್ಲಿಯೂ ಹೊಂದಾಣಿಕೆ ರಾಜಕಾರಣ ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಎಲ್ಲರೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಸಿಎಂ ವಿಚಾರಕ್ಕೆ ಡಿಸೆಂಬರ್ನಲ್ಲಿ ಸರ್ಕಾರ ಪತನವಾಗಲಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯಲ್ಲಿ ಎಲ್ಲೂ ಹೊಂದಾಣಿಕೆ ರಾಜಕಾರಣ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರ್. ಅಶೋಕ, ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದ್ದೆವು. ಎಲ್ಲಿದೆ ಹೊಂದಾಣಿಕೆ ರಾಜಕಾರಣ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಪ್ರತಾಪ್ ಸಿಂಹ ಅವರ ಭಾವನೆಗೆ ಅನುಗುಣವಾಗಿ ಮಾತನಾಡಿದ್ದಾರೆ. ಅವರನ್ನು ಕರೆದು ಮಾತನಾಡುತ್ತೇವೆ. ಸರ್ಕಾರ ವಿರುದ್ಧದ ಹೋರಾಟದ ರೂಪರೇಷೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಸರ್ಕಾರದ ಅಭಿವೃದ್ಧಿ ಪೂರಕ ಕಾರ್ಯಗಳಿಗೆ ನಮ್ಮ ಸಹಕಾರ ಇರುತ್ತದೆ. ಜೂನ್ 22 ರಿಂದ ನಮ್ಮ ನಾಯಕರ ತಂಡ ರಾಜ್ಯ ಪ್ರವಾಸ ಮಾಡಲಿದೆ. ಸಿದ್ದರಾಮಣ್ಣ ಸರ್ಕಾರದಲ್ಲಿ ಏನೇನು ನಡೆಯುತ್ತೋ ನೋಡೋಣ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ: ಪ್ರತಾಪ್ ಸಿಂಹ ವಿರುದ್ಧ ಸಚಿವ ಹೆಚ್ಸಿ ಮಹದೇವಪ್ಪ ಕಿಡಿ
ಸಿದ್ದರಾಮಯ್ಯ ಸರ್ಕಾರ ವಿದ್ಯುತ್ ಬಿಲ್ನಲ್ಲಿ ವಂಚನೆ ಮಾಡ್ತಿದೆ ಎಂದು ಕಟೀಲ್ ದೂರಿದ್ದಾರೆ. ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡಿತ್ತು. ಎಸ್ಸಿ, ಎಸ್ಟಿ ಸಮುದಾಯಕ್ಕೆ 75 ಯೂನಿಟ್ ವಿದ್ಯುತ್ ನೀಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕರೆಂಟ್ ಕೂಡ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಸಿಎಂ, ಡಿಸಿಎಂ ಸುಳ್ಳು ಹೇಳಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುವುದನ್ನು ಕೊಟ್ಟೇ ಕೊಡುತ್ತದೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ