ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ; ಪಕ್ಷದ ಘನತೆಗೆ ಧಕ್ಕೆ ತರುವಂಥ ಹೇಳಿಕೆ ನೀಡದಂತೆ ನಳಿನ್ ಕುಮಾರ್ ಕಟೀಲ್ ಸೂಚನೆ

ವಿಪಕ್ಷ ನಾಯಕರ ನೇಮಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಹೇಳಿಕೆ ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಮುಖಂಡರಿಗೆ ಸೂಚನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ; ಪಕ್ಷದ ಘನತೆಗೆ ಧಕ್ಕೆ ತರುವಂಥ ಹೇಳಿಕೆ ನೀಡದಂತೆ ನಳಿನ್ ಕುಮಾರ್ ಕಟೀಲ್ ಸೂಚನೆ
ನಳಿನ್ ಕುಮಾರ್ ಕಟೀಲ್
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Jun 27, 2023 | 7:15 PM

ಬೆಂಗಳೂರು: ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ನೇಮಕ, ವಿಧಾನಸಭೆ ಪ್ರತಿಪಕ್ಷ ನಾಯಕರ ನೇಮಕ ವಿಚಾರವಾಗಿ ಪಕ್ಷದ ಘನತೆಗೆ ಧಕ್ಕೆ ತರುವಂಥ ಹೇಳಿಕೆಗಳನ್ನು ನೀಡಬಾರದು ಎಂದು ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಮಂಗಳವಾರ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ವಿವಿಧ ನಾಯಕರು ಹಲವು ಹೇಳಿಕೆಗಳನ್ನು ನೀಡಿದ್ದರಿಂದ ಪಕ್ಷವು ಮುಗುರಕ್ಕೀಡಾಗುವಂಥ ಸನ್ನಿವೇಶ ನಿರ್ಮಾಣವಾಗಿತ್ತು. ಹೀಗಾಗಿ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದೆ.

ವಿಪಕ್ಷ ನಾಯಕರ ನೇಮಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಹೇಳಿಕೆ ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು. ವಿಪಕ್ಷ ನಾಯಕ, ಮತ್ತಿತರ ಹುದ್ದೆಗಳ ಬಗ್ಗೆ ಪಕ್ಷ ನಿರ್ಧಾರ ಮಾಡಲಿದೆ. ಸೂಕ್ತ ಸಮಯದಲ್ಲಿ ಸಂಸದೀಯ ಮಂಡಳಿ ನಿರ್ಧಾರ ಪ್ರಕಟಿಸಲಿದೆ. ಕೆಲವರು ಹುದ್ದೆ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಪಕ್ಷದ ಸಭೆಗಳಲ್ಲಿ ಈ ವಿಷಯ ಬಗ್ಗೆ ಚರ್ಚೆ ಮಾಡೋದು ಸರಿಯಲ್ಲ. ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದು ರಾಜ್ಯ ಬಿಜೆಪಿ ಮುಖಂಡರಿಗೆ ನಳಿನ್ ಕುಮಾರ್ ಕಟೀಲು ಸೂಚನೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಮಾಜಿ ಸಚಿವ ವಿ ಸೋಮಣ್ಣ ಅವರು ತಾವು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದರು. ಚುನಾವಣೆಯಲ್ಲಿ ಹೆಚ್ಚು ರಿಸ್ಕ್ ತೆಗೆದುಕೊಂಡಿದ್ದೇನೆ. ನನಗೆ ಅಧ್ಯಕ್ಷ ಸ್ಥಾನ ಕೊಟ್ಟರೆ ಅಧ್ಯಕ್ಷ ಹೇಗಿರಬೇಕು ಎಂಬುದನ್ನು 100 ದಿನಗಳಲ್ಲಿ ತೋರಿಸಿಕೊಡುತ್ತೇನೆ ಎಂದು ಹೇಳಿದ್ದರು. ಈ ಮಧ್ಯೆ, ಆರಗ ಜ್ಞಾನೇಂದ್ರ ಸೇರಿ ಹಲವು ನಾಯಕರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿದೆ. ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೂ ಹಲವರ ಹೆಸರು ಕೇಳಿಬಂದಿದೆ.

ಇದನ್ನೂ ಓದಿ: Nalin Kumar Kateel: ನನ್ನ ಮಾತಿನ ಮೇಲೆ ವಿಶ್ವಾಸವಿರಲಿ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸರ್ಕಾರ ಬಿದ್ದುಹೋಗುತ್ತದೆ! ನಳಿನ್ ಕುಮಾರ್ ಕಟೀಲ್

ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಬಿಜೆಪಿಯ ಕಾರ್ಯಕರ್ತರ ಸಭೆಗಳಲ್ಲಿಯೂ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವುದು ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಟೀಲ್ ಅವರು ನಾಯಕರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ