ಅಂಚೆ ಕಾರ್ಡ್ ಮಹಾ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಳಿನ್‍ಕುಮಾರ್ ಕಟೀಲ್

ಅಭಿಯಾನದ ಅಂಗವಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಧಾನಿಗೆ ಶುಭಾಶಯ ಕೋರಿ ಅಂಚೆ ಕಾರ್ಡ್​ ಬರೆದರು.

ಅಂಚೆ ಕಾರ್ಡ್ ಮಹಾ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಳಿನ್‍ಕುಮಾರ್ ಕಟೀಲ್
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 04, 2021 | 5:34 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಸಲ್ಲಿಸುತ್ತಿರುವ ಸೇವೆಯನ್ನು ಅಭಿನಂದಿಸಲು ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ ಅಭಿನಂದನೆ, ಶುಭಾಶಯ ಪತ್ರ ಬರೆಯುವ ಪೋಸ್ಟ್​ ಕಾರ್ಡ್​ ಮಹಾ ಅಭಿಯಾನ ನಡೆಯುತ್ತಿದೆ. ಅಭಿಯಾನದ ಅಂಗವಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಧಾನಿಗೆ ಶುಭಾಶಯ ಕೋರಿ ಅಂಚೆ ಕಾರ್ಡ್​ ಬರೆದರು.

‘ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಾದರ ವಂದನೆಗಳು ಮತ್ತು ಜನುಮದಿನದ ಹಾರ್ದಿಕ ಶುಭಾಶಯಗಳು. ತಮ್ಮ 20 ವರ್ಷದ ಅಧಿಕಾರಾವಧಿಯಲ್ಲಿ ಶೋಷಿತರ, ಹಿಂದುಳಿದ ವರ್ಗಗಳ, ಬಡವರ ಹಾಗೂ ಸರ್ವ ವರ್ಗದ ಪರ ಯೋಜನೆಗಳು- ಅಭಿವೃದ್ಧಿ ಪರವಾದ ಆಡಳಿತ, ಭ್ರಷ್ಟಾಚಾರರಹಿತ ಅಧಿಕಾರಾವಧಿ, ಅತ್ಯುತ್ತಮ ಆಡಳಿತ- ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡುತ್ತಿರುವುದು ಅಭಿನಂದನೀಯ’ ಎಂದು ನಳಿನ್ ಕುಮಾರ್ ಕಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತವನ್ನು ವಿಶ್ವಗುರುವನ್ನಾಗಿಸುವ ತಮ್ಮ ಮಹೋನ್ನತ ಸಂಕಲ್ಪ ಸಾಕಾರಗೊಳಿಸುವಂತಹ ಸೌಭಾಗ್ಯ- ಆಯುರಾರೋಗ್ಯವನ್ನು ತಾಯಿ ಭಾರತಾಂಬೆ ಕರುಣಿಸಲಿ ಎಂದು ಅವರು ಹಾರೈಸಿದ್ದಾರೆ.

ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯದಲ್ಲಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯು ಸೇವಾ ಮತ್ತು ಸಮರ್ಪಣ ಅಭಿಯಾನ (Seva and Samarpan Abhiyan) ಹಮ್ಮಿಕೊಂಡಿದೆ. ಸೆಪ್ಟೆಂಬರ್​ 17ರಂದು ಆರಂಭವಾಗಿರುವ ಈ ಅಭಿಯಾನವು 20 ದಿನಗಳ ಅವಧಿಗೆ, ಅಂದರೆ ಅಕ್ಟೋಬರ್ 7ರವರೆಗೆ ನಡೆಯಲಿದೆ.

ದೇಶಾದ್ಯಂತ ಬೂತ್​ಮಟ್ಟದಲ್ಲಿರುವ ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಸಕ್ರಿಯರಾಗಿ ನರೇಂದ್ರ ಮೋದಿಯವರಿಗೆ 5 ಕೋಟಿಗಳಷ್ಟು ಅಂಚೆಪತ್ರ (Postcard) ಕಳಿಸುವ ಮೂಲಕ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮನ್ನು ತಾವು ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳುವುದಲ್ಲದೆ, ಬಿಜೆಪಿ ಪಕ್ಷದ ಪ್ರತಿ ಸದಸ್ಯರೂ ತಮ್ಮನ್ನು ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲು 5 ಕೋಟಿ ಪೋಸ್ಟ್ ಕಾರ್ಡ್​ ಕಳಿಸಿಕೊಡಲಾಗುವುದು ಎಂದು ಬಿಜೆಪಿ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು 2001ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದರು. ಅಲ್ಲಿಂದಲೂ ಅವರು ಪ್ರಮುಖ ಹುದ್ದೆಯನ್ನೇ ನಿಭಾಯಿಸುತ್ತ ಬಂದಿದ್ದಾರೆ. ಅವರು ರಾಜಕೀಯದ ಪ್ರಮುಖ ಹುದ್ದೆಯಲ್ಲಿ ಇದ್ದು, 20 ವರ್ಷ ಕಳೆದಿದೆ ಈ ಹಿನ್ನೆಲೆಯಲ್ಲಿ ಅಭಿಯಾನ ನಡೆಸಲಾಗುತ್ತಿದೆ ಎಂದು ಬಿಜೆಪಿ ಹೇಳಿತ್ತು.

(BJP Karnataka Unit President Nalin Kumar Kateel Writes Letter to Narendra Modi as part of Post Card Campaign)

Published On - 5:33 pm, Mon, 4 October 21

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್