ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ! ಅಶ್ವತ್ಥನಾರಾಯಣ ಹೇಳಿದ್ದೇನು?
ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗೆ ಈಗ ಷರತ್ತುಗಳನ್ನು ವಿಧಿಸುವುದು ಸರಿಯಲ್ಲ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರು: ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗೆ ಈಗ ಷರತ್ತುಗಳನ್ನು ವಿಧಿಸುವುದು ಸರಿಯಲ್ಲ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿತ್ತು. ಅವುಗಳಿಗೆ ಈಗ ಷರತ್ತುಗಳು ಅನ್ವಯ ಎಂದು ಹೇಳುತ್ತಿದ್ದಾರೆ. ಜನರಿಗೆ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಬೇಕು ಎಂದು ಹೇಳಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿತ್ತು. ಈಗ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ. ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳಿದ್ದರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದ್ದಾರೆ. 200 ಯುನಿಟ್ ವಿದ್ಯುತ್ ಫ್ರೀ, ನಿರುದ್ಯೋಗ ಭತ್ಯೆ ಅಂತ 2000 ರೂ. ಘೋಷಿಸಿದ್ದರು. ಹೇಳಿದ್ದನ್ನು ಎಲ್ಲರಿಗೂ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.
ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟಲು ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಹೇಳಿರುವುದನ್ನು ಈಗ ಜನ ಕೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರೆಂಟ್ ಬಿಲ್ ಕಟ್ಟುವಂತಿಲ್ಲ ಅಂತ ಹೇಳಿದ್ದರು, ಅದಕ್ಕೆ ಕಟ್ಟುತ್ತಿಲ್ಲ. ನಾವು ಇದನ್ನು ಅಸ್ತ್ರ ಮಾಡಿಕೊಂಡಿಲ್ಲ ಎಂದು ಅವರು ಹೇಳಿದರು. ವಿಪಕ್ಷ ನಾಯಕ ನೇಮಕ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ರಾಹುಲ್ ಗಾಂಧಿ ಘೋಷಣೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ರಾಹುಲ್ ಗಾಂಧಿ ಮಂಗಳೂರಿನಲ್ಲಿ ಘೋಷಣೆ ಮಾಡಿದ್ದರು. ಇದರೊಂದಿಗೆ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಿತ್ತು. ಇದಕ್ಕೂ ಮುನ್ನವೇ, ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ