ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ: ವಿಪಕ್ಷಗಳ ಸಭೆಗೆ ಯತ್ನಾಳ್ ಕಿಡಿ
ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಬಗ್ಗೆ ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಜುಲೈ 17): ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ನರೇಂದ್ರ ಮೋದಿ(Narendra Modi) ಅವರನ್ನು ಕಟ್ಟಿಹಾಕಲು ದೇಶದ ವಿಪಕ್ಷಗಳು(joint opposition meeting) ಒಂದಾಗಿದ್ದು, ರಾಜಕೀಯ ಲೆಕ್ಕಾಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಸಭೆ ನಡೆಸಲಿವೆ. ಇನ್ನು ಈ ವಿರೋಧ ಪಕ್ಷಗಳ ಜಂಟಿ ಸಭೆಗೆ ಬಿಜೆಪಿ ನಾಯಕರು ಟೀಕಾ ಪ್ರಹಾರ ನಡೆಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ವಿಪಕ್ಷಗಳ ಸಭೆಯನ್ನು ಕಟುವಾಗಿ ಟೀಕಿಸಿದ್ದಾರೆ. ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಮಹಾಘಟಬಂಧನ್ನಿಂದ ಜೆಡಿಎಸ್ನ್ನು ದೂರವಿಟ್ಟ ವಿಪಕ್ಷಗಳು: ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಇಂದು(ಜುಲೈ 17) ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಸೋಲಿಸಲು ಒಗ್ಗೂಡುತ್ತಿದ್ದಾರೆ. ರಾಜ್ಯದಲ್ಲಿ ಜಾಮೀನು ಮೇಲೆ ಇರುವ ಎಲ್ಲಾ ಕುಟುಂಬಗಳು ಒಟ್ಟಿಗೆ ಸೇರಿವೆ. ಮತ್ತೆ ನರೇಂದ್ರ ಮೋದಿ ಬಂದ್ರೆ ಜೈಲೇ ಗತಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಎಲ್ಲಾ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಕಿಡಿಕಾರಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ, ಆತಂಕದ ಛಾಯೆ ಹೆಚ್ಚಾಗಿದೆ. ಹಿಂದೂ ಕಾರ್ಯಕರ್ತರ ಜೋಡಿ ಕೊಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.