ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ; ಬರ ಪೀಡಿತ ತಾಲೂಕುಗಳ ಘೋಷಣೆ ಮಾಡದ್ದಕ್ಕೆ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಸರ್ಕಾರ ತನ್ನ ಕೆಲಸ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೆಲವು ಮಹಿಳೆಯರಿಗೆ ಮಾತ್ರ ಸಿಕ್ಕಿದೆ. ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್ ಮಾಡಲು ಆರಂಭವಾಗಿದೆ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ; ಬರ ಪೀಡಿತ ತಾಲೂಕುಗಳ ಘೋಷಣೆ ಮಾಡದ್ದಕ್ಕೆ ಬಸವರಾಜ ಬೊಮ್ಮಾಯಿ ವಾಗ್ದಾಳಿ
ಬಸವರಾಜ ಬೊಮ್ಮಾಯಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Sep 11, 2023 | 9:45 PM

ಹುಬ್ಬಳ್ಳಿ, ಸೆಪ್ಟೆಂಬರ್ 11: ಇಷ್ಟೊತ್ತಿಗಾಗಲೇ ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳ ಘೋಷಣೆ ಆಗಬೇಕಿತ್ತು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ (Congress Government) ನೆಪ ಹೇಳುತ್ತಾ ಮುಂದೂಡಿಕೆ ಮಾಡುತ್ತಿದೆ. ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಮಾತನಾಡಿದ ಅವರು, ಬರ ಪೀಡಿತ ತಾಲೂಕುಗಳ ಬಗ್ಗೆ ಜೂನ್‌ನಲ್ಲಿ ಕೇಳಿದ್ರೆ ಜುಲೈನಲ್ಲಿ ಘೋಷಣೆ ಮಾಡುತ್ತೇವೆ ಅಂತಾರೆ. ಜುಲೈನಲ್ಲಿ ಕೇಳಿದ್ರೆ ಆಗಸ್ಟ್​ ಅಂತಾರೆ. ಆಗಸ್ಟ್​ ಮುಗಿದು ಸೆಪ್ಟೆಂಬರ್​​​ ಬಂದರೂ ಬರ ಘೋಷಣೆ ಮಾಡುತ್ತಿಲ್ಲ. ಎಲ್ಲಾ ವಿಚಾರಗಳಲ್ಲೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗ್ತಿದೆ ಎಂದರು.

ಸರ್ಕಾರ ತನ್ನ ಕೆಲಸ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೆಲವು ಮಹಿಳೆಯರಿಗೆ ಮಾತ್ರ ಸಿಕ್ಕಿದೆ. ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್ ಮಾಡಲು ಆರಂಭವಾಗಿದೆ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.

ಎಂಎಲ್​ಸಿ ಪ್ರದೀಪ್ ಶೆಟ್ಟರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅಲರ್ಟ್ ಆಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿತ್ತು.

ಇದನ್ನೂ ಓದಿ: ಪ್ರದೀಪ್ ಶೆಟ್ಟರ್ ಅಸಮಾಧಾನ ಬೆನ್ನಲ್ಲೇ ಬಿಜೆಪಿ ಅಲರ್ಟ್; ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಮಹತ್ವದ ಸಭೆ

ಮಾಜಿ ಸಚಿವ ಮುನೇನಕೊಪ್ಪ​ ಗೈರು

ಕೋರ್ ಕಮಿಟಿ ಸಭೆಗೆ ಗೈರಾಗಿರುವ ಬಗ್ಗೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಅನುಮತಿ ಪಡೆದುಕೊಂಡೇ ನಾನು ಸಭೆಗೆ ಗೈರಾಗಿದ್ದೇನೆ. ಅನ್ಯ ಕೆಲಸ ನಿಮಿತ್ತ ಅನುಮತಿ ಪಡೆದು ನಾನು ಬೆಂಗಳೂರಿಗೆ ಬಂದಿದ್ದೇನೆ ಎಂದು ತಿಳಿಸಿದರು.

ರಾಜಸ್ಥಾನ ಪ್ರವಾಸದಲ್ಲಿದ್ದೇನೆ; ಪ್ರದೀಪ್ ಶೆಟ್ಟರ್

ನಾನು ಗುಜರಾತ್​, ರಾಜಸ್ಥಾನ ಪ್ರವಾಸದಲ್ಲಿದ್ದೇನೆ. ಸರ್ವಪಕ್ಷಗಳ ಅಧ್ಯಯನಕ್ಕೆ ಗುಜರಾತ್, ರಾಜಸ್ಥಾನ ಪ್ರವಾಸ ಕೈಗೊಂಡಿದ್ದೇನೆ. ಹೀಗಾಗಿ ಕೋರ್ ಕಮೀಟಿ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಎಂಎಲ್​ಸಿ ಪ್ರದೀಪ್ ಶೆಟ್ಟರ್ ‘ಟಿವಿ9’ಗೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ