AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೃಪ್ತಿ ಶಮನಕ್ಕೆ ಕೊಡುತ್ತೇವೆ ಎಂದಿದ್ದ 25 ಕೋಟಿ ಅನುದಾನ ಎಲ್ಲಿ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ

ರೈತರಿಗಾಗಿ ರಾಜ್ಯದ ಬೊಕ್ಕಸದಿಂದ ಒಂದು ಪೈಸೆ ಖರ್ಚು ಮಾಡಿಲ್ಲ. ನಮ್ಮ ಸರ್ಕಾರದಲ್ಲಿ ದುಪ್ಪಟ್ಟು ಪರಿಹಾರ ಕೊಟ್ಟಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಸಿದರು.

ಅತೃಪ್ತಿ ಶಮನಕ್ಕೆ ಕೊಡುತ್ತೇವೆ ಎಂದಿದ್ದ 25 ಕೋಟಿ ಅನುದಾನ ಎಲ್ಲಿ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ
ಬಸವರಾಜ ಬೊಮ್ಮಾಯಿ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on: Jan 18, 2024 | 2:17 PM

Share

ಬೆಂಗಳೂರು, ಜನವರಿ 18: ಅತೃಪ್ತಿ ಶಮನಕ್ಕೆ 25 ಕೋಟಿ ರೂಪಾಯಿ ಅನುದಾನ ಕೊಡುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅನುದಾನ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಟ್ಟರೆ, ನಮ್ಮ ಶಾಸಕರಿಗೂ ಕೊಡಬೇಕು. ನಾನು ಸಿಎಂ ಆಗಿದ್ದಾಗ 25 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೇನೆ. ಹಾಗಾದರೆ ಇವರು ಈಗ ಎಷ್ಟು ಕೊಡಬೇಕು ಕಾಂಗ್ರೆಸ್​​​ ಶಾಸಕರಿಗೆ? ಇವರ ಯೋಗ್ಯತೆಗೆ ಸಣ್ಣ ಬೋರ್​ವೆಲ್ ಹಾಕಿಲ್ಲ ಎಂದು ಟೀಕಿಸಿದರು.

ಎಲ್ಲಾ ವಿಚಾರಗಳಲ್ಲಿಯೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಅನುದಾನದ ಬಗ್ಗೆ ಕೇಂದ್ರದವರು ಚರ್ಚೆಗೆ ಬರಲಿ ಎಂಬ ಸವಾಲು ಹಾಕುತ್ತಾರೆ. ಅದು ಆಗದ ವಿಚಾರ ಎಂಬುದು ಅವರಿಗೆ ಗೊತ್ತಿದೆ. ಅದಕ್ಕೇ ಹಾಗೆ ಹೇಳುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಯತೀಂದ್ರ ಹೇಳಿಕೆಯ ಅರ್ಥವೇನು: ಬೊಮ್ಮಾಯಿ ಪ್ರಶ್ನೆ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಡಾ. ಯತೀಂದ್ರ ಹೇಳಿರುವುದರ ಅರ್ಥವೇನು ಎಂದು ಬೊಮ್ಮಾಯಿ ಪ್ರಶ್ನಿಸಿದರು. ಹೆಚ್ಚು ಸೀಟು ಬಂದರೆ ಸಿಎಂ ಆಗಿ ಮುಂದುವಯಲಿದ್ದಾರೆ ಎಂದಿದ್ದಾರೆ. ಹಾಗಾದರೆ ಕಾಂಗ್ರೆಸ್​ಗೆ ಕಡಿಮೆ ಸೀಟು ಬಂದರೆ ಏನು? ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟು ಬರುವುದು ಬಿಜೆಪಿಗೆ. ಹಾಗಾದರೆ ಯತೀಂದ್ರ ಪ್ರಕಾರ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದಿಲ್ಲವೇ? ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯಿಂದ ಈಗ ಈ ಪ್ರಶ್ನೆ ಉದ್ಭವಿಸಿದೆ. ಅದಕ್ಕೆ ಚುನಾವಣೆ ಬಂದಾಗ ಈ ರೀತಿ ವಿತಂಡವಾದ ಮುಂದಿಡುತ್ತಾರೆ ಎಂದು ಬೊಮ್ಮಾಯಿ ಟೀಕಿಸಿದರು.

ರೈತರಿಗಾಗಿ ರಾಜ್ಯದ ಬೊಕ್ಕಸದಿಂದ ಒಂದು ಪೈಸೆ ಖರ್ಚು ಮಾಡಿಲ್ಲ. ನಮ್ಮ ಸರ್ಕಾರದಲ್ಲಿ ದುಪ್ಪಟ್ಟು ಪರಿಹಾರ ಕೊಟ್ಟಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಸಿದರು.

ಕಾನೂನು ಸುವ್ಯವಸ್ಥೆಯಲ್ಲಿ ರಾಜಕಾರಣ ಮಧ್ಯಪ್ರವೇಶ: ಬೊಮ್ಮಾಯಿ ಆರೋಪ

ಹಾವೇರಿ ಜಿಲ್ಲೆ ಹಾನಗಲ್​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಹಾನಗಲ್ ಠಾಣೆಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆಯಲ್ಲಿ ರಾಜಕಾರಣ ಮಧ್ಯಪ್ರವೇಶ ಮಾಡುತ್ತಿದೆ. ಪೋಕ್ಸೊ ಕಾಯ್ದೆ ಉಲ್ಲಂಘನೆ ಮಾಡಿದ್ದಲ್ಲದೆ ಸಂತ್ರಸ್ತೆಗೆ ಆಮಿಷವೊಡ್ಡಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವಂತಹ ಎಲ್ಲಾ ಸಾಧ್ಯತೆಗಳಿವೆ. ಎಸ್​ಐಟಿ ತನಿಖೆಗೆ ಸಿಎಂ‌ ನಿರಾಕರಿಸಿ ಪ್ರೋತ್ಸಾಹ ಮಾಡಿದಂತೆ ಮಾಡಿದ್ದಾರೆ ಎಂದು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಜನವರಿ 20ರಂದು ಹಾವೇರಿ ಎಸ್​ಪಿ ಕಚೇರಿ ಮುಂದೆ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ ಎಂದೂ ಅವರು ತಿಳಿಸಿದರು.

ಟೀಕಿಸುವಾಗ ಏಕವಚನ ಸಲ್ಲ: ಬೊಮ್ಮಾಯಿ

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಿಎಂ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಟೀಕೆ ಮಾಡುವಾಗ ಏಕವಚನದಲ್ಲಿ ಇರದಂತೆ ಎಚ್ಚರಿಕೆ ವಹಿಸಬೇಕು. ಸಿಎಂ ಸಿದ್ದರಾಮಯ್ಯ ಕೂಡ ಹಲವು ವರ್ಷಗಳಿಂದ ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಅವರು ಮಾತನಾಡಿದರೆ ಸರಿ, ಬೇರೆಯವರು ಮಾತನಾಡಿದರೆ ತಪ್ಪು. ಇದಕ್ಕೆ ಮೊದಲು ಸಿದ್ದರಾಮಯ್ಯ ಉತ್ತರ ಕೊಡಲಿ ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ

ಎಲ್ಲರ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆಯೂ ಸಿದ್ದರಾಮಯ್ಯ ಏಕವಚನದಲ್ಲೇ ಮಾತನಾಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ