ಇದು ಲೂಟಿ ಸರ್ಕಾರ, ಎಟಿಎಂ ಸರ್ಕಾರ; ಕಾಂಗ್ರೆಸ್ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

IT Raids in Karnataka: ಐಟಿ ದಾಳಿ ರಾಜಕೀಯ ಆಯಾಮ ಪಡೆದುಕೊಂಡಿತ್ತು. ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರೆ, ಪಂಚರಾಜ್ಯ ಚುನಾವಣೆಗೆ ಕರ್ನಾಟಕವನ್ನು ಕಾಂಗ್ರೆಸ್​ ಎಟಿಎಂ ಆಗಿ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಇದು ಲೂಟಿ ಸರ್ಕಾರ, ಎಟಿಎಂ ಸರ್ಕಾರ; ಕಾಂಗ್ರೆಸ್ ವಿರುದ್ಧ ಬಿವೈ ವಿಜಯೇಂದ್ರ ಕಿಡಿ
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ
Follow us
Anil Kalkere
| Updated By: Ganapathi Sharma

Updated on: Oct 16, 2023 | 8:39 PM

ಬೆಂಗಳೂರು, ಅಕ್ಟೋಬರ್ 16: ಬೆಂಗಳೂರಿನಲ್ಲಿ ಐಟಿ ದಾಳಿ (IT Raid) ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರವಾಗಿ ಬಿಜೆಪಿ ನಾಯಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ಸರ್ಕಾರ(Congress Government) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಣ ಸಂಗ್ರಹಿಸಿ ಪಂಚರಾಜ್ಯಗಳಿಗೆ ಕಳುಹಿಸುತ್ತಿರುವುದು ಜನರಿಗೆ ಗೊತ್ತಿದೆ. ಕಾಂಗ್ರೆಸ್ಸಿಗರು ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸುತ್ತಿದ್ದಾರೆ. ಈ ಹಣ ಕಾಂಗ್ರೆಸ್​​ಗೆ ಸೇರಿದೆ ಅಂತ ಅವರೇ ಒಪ್ಪಿಕೊಂಡಿದ್ದಾರೆ. ಇದು ಲೂಟಿ ಸರ್ಕಾರ, ಎಟಿಎಂ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್​​​ನವರು ಲೂಟಿ ಮೂಲಕ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಕಳೆದ 5 ದಿನಗಳಲ್ಲಿ ದೇಶಾದ್ಯಂತ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. 55 ಕಡೆ ನಡೆದ ಐಟಿ ಅಧಿಕಾರಿಗಳ ದಾಳಿಯಲ್ಲಿ ಬರೋಬ್ಬರಿ 94 ಕೋಟಿಗೂ ಅಧಿಕ ಹಣವನ್ನ ಸೀಜ್‌ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ ಲೆಕ್ಕವೂ ಹೊರಬಿದ್ದಿತ್ತು.

ಬೆಂಗಳೂರಿನಲ್ಲಿ ಭರ್ಜರಿ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಗುತ್ತಿಗೆದಾರ ಅಂಬಿಕಾಪತಿ ಪುತ್ರನ ಮನೆಯಲ್ಲಿ 40 ಕೋಟಿಗೂ ಹೆಚ್ಚು ಹಣವನ್ನ ಸೀಜ್ ಮಾಡಿದ್ದರು. ಮಂಚದ ಕೆಳಗೆ 40 ಕೋಟಿ ರೂಪಾಯಿ ಪತ್ತೆಯಾಗಿದ್ದು, ಬಾಕ್ಸ್‌ಗಳಲ್ಲಿ ಹಣ ತುಂಬಿಕೊಂಡು ಹೋಗಿದ್ದ ಐಟಿ ಅಧಿಕಾರಿಗಳು ಅಂಬಿಕಾಪತಿಗೆ ಶಾಕ್ ನೀಡಿದ್ದರು.

ಇದಾದ ಬಳಿಕ ಬಿಲ್ಡರ್ ಸಂತೋಷ್ ಅನ್ನೋರಿಗೂ ಐಟಿ ಟೀಮ್ ಶಾಕ್ ನೀಡಿತ್ತು. ಬೆಂಗಳೂರಿನ ರಾಜಾಜಿನಗರದ ಅಪಾರ್ಟ್ಮೆಂಟ್​ನಲ್ಲಿರೋ ಸಂತೋಷ್​ಗೆ ಸೇರಿದ ಫ್ಲ್ಯಾಟ್​ಮೇಲೆ ದಾಳಿ ಮಾಡಿದ್ರು. ಇದೇ ವೇಳೆ ಪತ್ತೆಯಾದ 40 ಕೋಟಿಗೂ ಅಧಿಕ ಹಣ ಹಣವನ್ನ ಜಪ್ತಿ ಮಾಡಿ, ಮೂರು ಟ್ರಂಕ್​ಗಳು, ಎರಡು ದೊಡ್ಡ ದೊಡ್ಡ ಬ್ಯಾಗ್​ಗಳು, ಒಂದು ಬಾಕ್ಸ್​, ಸಾಲದ್ದಕ್ಕೆ ಒಂದು ದೊಡ್ಡ ಸೂಟ್​ಕೇಸ್​ ಮೂಲಕ ಹಣವನ್ನ ಒಯ್ದಿದ್ದರು. ಬೆಳಗಾಗುತ್ತಿದ್ದಂತೆ, ಈ ದಾಳಿಗೆ, ದಾಳಿಯಲ್ಲಿ ಪತ್ತೆಯಾದ ಹಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿತ್ತು.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಅಸಮಾಧಾನಕ್ಕೆ ಕಾರಣವೇನು? ಮುನಿಸು ತಣಿಸಿದ್ರಾ ಕೆಸಿ ವೇಣುಗೋಪಾಲ್?

ಇದರ ಬೆನ್ನಲ್ಲೇ ಐಟಿ ದಾಳಿ ರಾಜಕೀಯ ಆಯಾಮ ಪಡೆದುಕೊಂಡಿತ್ತು. ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರೆ, ಪಂಚರಾಜ್ಯ ಚುನಾವಣೆಗೆ ಕರ್ನಾಟಕವನ್ನು ಕಾಂಗ್ರೆಸ್​ ಎಟಿಎಂ ಆಗಿ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್