ವರ್ಣರಂಜಿತ ರಾಜಕಾರಣಿ: 3 ಪಕ್ಷ ಬದಲಿಸಿರುವ ಯೋಗೇಶ್ವರ್ ರಾಜಕೀಯ ಹಾದಿ ಇಲ್ಲಿದೆ

ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಗೊಂದಲದ ಗೂಡಿನಿಂದ ಕೂಡಿದೆ. ಇದೀಗ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರಿದ್ದು, ಕೈ ಟಿಕೆಟ್ ಯೋಗೇಶ್ವರ್​ ಅವರಿಗೆ ಸಿಗುವುದು ಪಕ್ಕಾ ಆಗಿದೆ. ಸಿಪಿ ಯೋಗೇಶ್ವರ್​ ರಾಜಕಾರಣ ಹಾದಿ ಇಲ್ಲಿದೆ.

ವರ್ಣರಂಜಿತ ರಾಜಕಾರಣಿ: 3 ಪಕ್ಷ ಬದಲಿಸಿರುವ ಯೋಗೇಶ್ವರ್ ರಾಜಕೀಯ ಹಾದಿ ಇಲ್ಲಿದೆ
ಸಿಪಿ ಯೋಗೇಶ್ವರ್​
Edited By: ವಿವೇಕ ಬಿರಾದಾರ

Updated on: Oct 23, 2024 | 11:50 AM

ಬೆಂಗಳೂರು, ಅಕ್ಟೋಬರ್​ 23: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (Karnataka By-Election) ಪೈಕಿ ಚನ್ನಪಟ್ಟಣ ಕ್ಷೇತ್ರದ (Channapatna Constituency) ಚುನಾವಣೆ ಹೈ ವೋಲ್ಟೇಜ್​ನಿಂದ ಕೂಡಿದೆ. ಮಾಜಿ ಎಂಎಲ್​ಸಿ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ (CP Yogeshwar) ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಕೈ ಟಿಕೆಟ್​ ಇವರಿಗೆ ನೀಡುವುದು ಪಕ್ಕಾ ಆಗಿದೆ. ಇಂದು (ಅ.23) ಸಂಜೆ ಟಿಕೆಟ್​ ಘೋಷಣೆಯಾಗುವ ಸಾಧ್ಯತೆ ಇದೆ. ಇನ್ನು ಸಿಪಿ ಯೋಗೇಶ್ವರ್​ ಅವರ ರಾಜಕೀಯ ಹಾದಿ ವರ್ಣ ರಂಜಿತದಿಂದ ಕೂಡಿದೆ. ಸಿಪಿ ಯೋಗೇಶ್ವರ್​​ ಏಳು ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಗೆದ್ದ ನಾಲ್ಕೂ ಬಾರಿಯೂ ಬೇರೆ ಬೇರೆ ಚಿಹ್ನೆಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಸೈನಿಕ ಚಿತ್ರದಲ್ಲಿ ನಾಯಕನಾಗಿ ನಟಿಸಿ ಖ್ಯಾತಿ ಗಳಿಸಿರುವ ಸಿಪಿ ಯೋಗೇಶ್ವರ್​​ ಅವರು 1999ರಲ್ಲಿ ಚುನಾವಣಾ ರಾಜಕಾರಣಕ್ಕೆ ದುಮುಕಿದರು. 1999ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್​ನ‌ ಕಾಂತ ಸಾದತ್ ಅಲಿ ಖಾನ್ ಅವರನ್ನು 2282 ಮತಗಳ ಅಂತರದಿಂದ ಸೋಲಿಸಿದರು.

ನಂತರ ಸಿಪಿ ಯೋಗೇಶ್ವರ್​ ಅವರು ಕಾಂಗ್ರೆಸ್​ ಸೇರ್ಪಡೆಯಾದರು. 2004‌ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್​​ನ ಅಶ್ವಥ್ ಎಮ್​ಸಿ ಅವರನ್ನು ಸೋಲಿಸಿ 16,169‌ ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ಮತ್ತೆ 2008‌ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದರು. ಆಗಲೂ ಜೆಡಿಎಸ್ ಅಭ್ಯರ್ಥಿಯನ್ನು 4,930 ಮತಗಳ ಅಂತರದಿಂದ ಪರಾಭವಗೊಳಿಸಿ ವಿಜಯಪತಾಕೆ ಹಾರಿಸಿದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್​ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ

ನಂತರ 2009ರಲ್ಲಿ ಪ್ರಥಮ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಜೆಡಿಎಸ್​ನ ಅಶ್ವತ್ಥ್ ಎಮ್​ಸಿ ಅವರ ವಿರುದ್ಧ 2282 ಮತಗಳ ಅಂತರದಿಂದ ಸೋಲು ಕಂಡರು. ಬಳಿಕ, 2011 ರಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್​ ಜೆಡಿಎಸ್​ ಅಭ್ಯರ್ಥಿ ನಾಗರಾಜು ಅವರನ್ನು 17,803 ಮತಗಳ ಅಂತರದಿಂದ ಸೋಲಿಸಿ, ಅಭೂತಪೂರ್ವ ಜಯಗಳಿಸಿದರು.

2013‌ರಲ್ಲಿ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರನ್ನು 6,464 ‌ಮತಗಳಿಂದ ಸೋಲು ಉಣಿಸಿದರು. 2018ರಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ 21 ಸಾವಿರ ಮತಗಳ ಅಂತರದಿಂದ ಸೋಲು ಕಂಡರು. ಮತ್ತೆ 2023ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ 15 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us