AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ್ದ ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರ್ಕಾರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿ.ಟಿ. ರವಿ

ಪಕ್ಷದ ನಾಯಕರು ಸರ್ಕಾರ ಮತ್ತು ಬಿಜೆಪಿಯ ವಿರುದ್ಧವೇ ಹೇಳಿಕೆ‌ ನೀಡಿದರೆ ಸಹಿಸುವುದಿಲ್ಲ. ಆದರೆ ಎಲ್ಲಾ ಹೇಳಿಕೆಗಳಿಗೂ ಪಕ್ಷ ಪ್ರತಿಕ್ರಿಯೆ ಕೊಡಬೇಕೆಂದು ಇಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇದ್ದು, ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಆಗಾಗ ಸಿಎಂ ಬದಲಾವಣೆ ರೀತಿಯ ಹೇಳಿಕೆಗಳು ಬರುತ್ತಿವೆ. ಆದರೆ ಹೇಳಿಕೆ ನೀಡಿದವರ ವಿರುದ್ಧ ಹೇಳಿಕೆ ಕೊಡುವುದಿಲ್ಲ ಎಂದು ಅವರು ತಿಳಿಸಿದರು.

ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ್ದ ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರ್ಕಾರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿ.ಟಿ. ರವಿ
ಸಿ.ಟಿ.ರವಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 05, 2021 | 8:49 PM

Share

ದೆಹಲಿ: ಕರ್ನಾಟಕ ಸರ್ಕಾರದ ಸಚಿವ ಸಿ.ಪಿ.ಯೋಗೇಶ್ವರ್​ರ ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರ್ಕಾರ ಹೇಳಿಕೆಯನ್ನು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿರುವ ಸರ್ಕಾರದ ಬಗ್ಗೆ ‘ಕೈ ಮತ್ತು ಜೆಡಿಎಸ್ ಪಕ್ಷಗಳು ಮೆಚ್ಚುಗೆ ವ್ಯಕ್ತಪಡಿಸಿರಬೇಕು. ಹೀಗಾಗಿ ಮೂರು ಪಕ್ಷಗಳ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಪಕ್ಷದ ನಾಯಕರು ಸರ್ಕಾರ ಮತ್ತು ಬಿಜೆಪಿಯ ವಿರುದ್ಧವೇ ಹೇಳಿಕೆ‌ ನೀಡಿದರೆ ಸಹಿಸುವುದಿಲ್ಲ. ಆದರೆ ಎಲ್ಲಾ ಹೇಳಿಕೆಗಳಿಗೂ ಪಕ್ಷ ಪ್ರತಿಕ್ರಿಯೆ ಕೊಡಬೇಕೆಂದು ಇಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇದ್ದು, ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಆಗಾಗ ಸಿಎಂ ಬದಲಾವಣೆ ರೀತಿಯ ಹೇಳಿಕೆಗಳು ಬರುತ್ತಿವೆ. ಆದರೆ ಹೇಳಿಕೆ ನೀಡಿದವರ ವಿರುದ್ಧ ಹೇಳಿಕೆ ಕೊಡುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಉನ್ನತ ಮಟ್ಟದ ಸಭೆಯಲ್ಲಿ ಐದು ರಾಜ್ಯಗಳ ಚುನಾವಣೆ ಮತ್ತು ಫಲಿತಾಂಶಗಳ ಬಗ್ಗೆ ಚರ್ಚೆಯಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ತಮಿಳುನಾಡಿನ 4 ಕ್ಷೇತ್ರಗಳಲ್ಲಿನ ಗೆಲುವಿಗೆ ಅಭಿನಂದಿಸಿದರು. ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ ಸಚಿವ ಸಿ.ಪಿ.ಯೋಗೇಶ್ವರ್‌ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಯೋಗೇಶ್ವರ್‌ರನ್ನು ಬಂಧಿಸಬೇಕು. ಈಗಾಗಲೇ 65 ಶಾಸಕರು ಸಹಿ ಮಾಡಿದ್ದ ಪತ್ರ ನೀಡಿದ್ದಾರೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸ್ವಪಕ್ಷದ ಸಚಿವರ ವಿರುದ್ಧ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಲೇ 65 ಜನ ಶಾಸಕರು ಸಹಿ ಮಾಡಿ ಪತ್ರ ನೀಡಿದ್ದಾರೆ. ಆ ಮೂಲಕ, ಸಿ.ಪಿ. ಯೋಗೇಶ್ವರ್​ನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಯೋಗೇಶ್ವರಗೆ ಜಲ ಸಂಪನ್ಮೂಲ ಹಾಗೂ ಇಂಧನ ಖಾತೆ ಜೊತೆಗೆ ರಾಮನಗರ ಜಿಲ್ಲೆಯ ಉಸ್ತುವಾರಿ ಬೇಕಾಗಿತ್ತು ಅದು ಸಿಕ್ಕಿಲ್ಲ. ಇದೇ ಕಾರಣಕ್ಕೆ ಅವರಿಗೆ ತಳಮಳ ಶುರುವಾಗಿದೆ ಎಂದು ಸಚಿವ ಯೋಗೇಶ್ವರ್ ವಿರುದ್ಧ ಶಾಸಕ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ದೆಹಲಿ ನಾಯಕರ ಮನೆಯ ಗೇಟ್ ಮುಟ್ಟಿ ಅಲ್ಲಿ ಪೋಟೋ ತೆಗೆಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಕೋವಿಡ್ ಸೋಂಕು ಇಳಿಮುಖ ಅಗಲಿ. ನನ್ನ ಹೋರಾಟ ಶುರುವಾಗಲಿದೆ.‌ ಯೋಗೇಶ್ವರ ಅವರನ್ನ ವಜಾ ಮಾಡಬೇಕು. ಜೊತೆಗೆ ಮೆಗಾ ಸಿಟಿ ಹಗರಣದ ಹಿನ್ನೆಲೆ ಬಂಧಿಸಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ

ಸಚಿವಗಿರಿ ನನ್ನ ಮಗ ಚಲಾಯಿಸಿದರೆ ಒಪ್ಪಲ್ಲ.. ಪರೋಕ್ಷವಾಗಿ ಬಿ.ವೈ. ವಿಜಯೇಂದ್ರಗೆ ಟಾಂಗ್ ಕೊಟ್ಟ ಸಚಿವ ಸಿ.ಪಿ. ಯೋಗೇಶ್ವರ್

(BJP Leader CT Ravi dependent Minister CP Yogeshwar statement on Karnataka Govt)