ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪ್ರಧಾನಿಯನ್ನು ಎಳೆದು ತರುವ ಹರಸಾಹಸ: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ

ಅಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಇನ್ನು ಇದರ ಬಗ್ಗೆ ಸಿಟಿ ರವಿ ಅವರು ಮಾಧ್ಯಮಗ ಪ್ರಕಟಣೆ ಮೂಲಕ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ.

ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪ್ರಧಾನಿಯನ್ನು ಎಳೆದು ತರುವ ಹರಸಾಹಸ: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ
Follow us
ರಮೇಶ್ ಬಿ. ಜವಳಗೇರಾ
|

Updated on:Jun 20, 2023 | 12:13 PM

ಬೆಂಗಳೂರು: ಕಾಂಗ್ರೆಸ್ (Congress) ಮತ್ತು ಬಿಜೆಪಿ(BJP) ನಡುವೆ ಶುರುವಾಗಿರುವ ಅಕ್ಕಿ ಯುದ್ಧ ತಾರಕ್ಕೇರುವ ಲಕ್ಷಣ ದಟ್ಟವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ, ಅನ್ನಭಾಗ್ಯ ಯೋಜನೆಗೆ ಅಡ್ಡಿ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರುತ್ತಿದ್ದಾರೆ. ಇತ್ತ ಬಿಜೆಪಿ ನಾಯಕರು ಸಹ ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡುತ್ತಿದ್ದಾರೆ. ಇನ್ನು ಇದೇ ಅಕ್ಕಿ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ(CT Ravi )ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪ್ರಧಾನಿಯನ್ನ ಎಳೆದು ತರುಲು ಹರಸಾಹಸ ಮಾಡುತ್ತಿದೆ. ರಾಜ್ಯದ ಸಿಎಂ ಅಕ್ಕಿಗೆ ಸಂಬಂಧಿಸಿದಂತೆ ಕೇಂದ್ರದ ಬಳಿ ಬೇಡಿಕೆ ಇಟ್ಟಿಲ್ಲ. ಸೌಜನ್ಯಕ್ಕಾದರೂ ಪ್ರಧಾನಿ, ಕೇಂದ್ರ ಆಹಾರ ಸಚಿವರ ಬಳಿ ಬೇಡಿಕೆ ಇಟ್ಟಿಲ್ಲ. ರಾಜ್ಯ ಸರ್ಕಾರ ಬಡವರಿಗೆ ನೆರವಾಗಬೇಕೇ ಹೊರತು ರಾಜಕಾರಣವಲ್ಲ ಎಂದು ಕಿರಿಕಾಡಿದ್ದಾರೆ.

ಇದನ್ನೂ ಓದಿ: BJP Protest: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಬಗ್ಗೆ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ತನ್ನ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ, ಪ್ರಧಾನಿ ಮೋದಿಯವರನ್ನು ಎಳೆದು ತರುಲು ಹರಸಾಹಸ ಮಾಡುತ್ತಿದೆ. ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ , ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ. ಅನಗತ್ಯವಾಗಿ ಕಾಂಗ್ರೆಸ್ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದೆ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರೇ ನೀವು ನೀಡಿರುವ ಹತ್ತು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ. ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡಬಾರದು ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರಬಾರದು. ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:09 pm, Tue, 20 June 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ