ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ; ಹೇಳಿದ್ದು ಉಲ್ಟಾ ಆಗುತ್ತೆ: ಸಿ ಟಿ ರವಿ

ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರೆ, ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಉಳಿಯಲ್ಲ ಅಂದ್ರೆ ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ; ಹೇಳಿದ್ದು ಉಲ್ಟಾ ಆಗುತ್ತೆ: ಸಿ ಟಿ ರವಿ
ಸಿಟಿ ರವಿ ಹಾಗೂ ಸಿದ್ದರಾಮಯ್ಯ
Edited By:

Updated on: Aug 15, 2021 | 3:33 PM

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು ಉಲ್ಟಾ ಆಗುತ್ತದೆ. ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಅವರಪ್ಪನಾಣೆ ನರೇಂದ್ರ ಮೋದಿ ಪ್ರಧಾನಿ ಆಗಲ್ಲ ಎಂದಿದ್ದರು. ಆದರೆ ನರೇಂದ್ರ ಮೋದಿ ಎರಡು ಬಾರಿ ಪ್ರಧಾನ ಮಂತ್ರಿ ಆದರು. ಸಿದ್ದರಾಮಯ್ಯ ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತೆ. 2018ರಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಾಗಿ ಹೇಳಿದ್ದರು. ಆದರೆ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದಿದ್ದಾರಾ? ಎಂದು ಸಿ.ಟಿ. ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಹೇಳುವುದಕ್ಕೆ ತದ್ವಿರುದ್ಧವಾಗಿಯೇ ನಡೆಯುತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರೆ, ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಉಳಿಯಲ್ಲ ಅಂದ್ರೆ ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕ ಸಿ.ಟಿ. ರವಿ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ವಿವಾದವೂ ಆಗುತ್ತಿದ್ದಾರೆ. ಇಂದಿರಾ ಕ್ಯಾಂಟೀನ್ ಬಗ್ಗೆ ಅವರು ನೀಡಿದ್ದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ವಿವಾದ ಸೃಷ್ಟಿಸಿತ್ತು. ಅದಕ್ಕೆ ಪ್ರತಿಯಾಗಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸಿ.ಟಿ. ರವಿ ವಿರುದ್ಧ ಹರಿಹಾಯ್ದಿದ್ದರು. ಸಿ.ಟಿ. ರವಿ ಒಬ್ಬ ಕೊಲೆಗಡುಕ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ ಬಗ್ಗೆ ಸಿ.ಟಿ. ರವಿ ಮತ್ತೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ಕೊಲೆಗಡುಕ; ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ತಲೆಮರೆಸಿಕೊಂಡಿದ್ದ: ಎಂ ಲಕ್ಷ್ಮಣ್ ವಾಗ್ದಾಳಿ

ಅಂಬೇಡ್ಕರರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್; ಸಿದ್ದರಾಮಯ್ಯ ತಮ್ಮ ಸಾಫ್ಟ್​​​ವೇರ್ ಅಪ್​ಡೇಟ್ ಮಾಡ್ಕೊಳ್ಳಲಿ- ಸಿಟಿ ರವಿ

(BJP Leader CT Ravi on Congress Leader Siddaramaiah at Chikkamagaluru)