ಮೈಸೂರು, (ಡಿಸೆಂಬರ್ 28): ಬಿಜೆಪಿ ನಾಯಕ ಸಿಟಿ ರವಿ (CT Ravi) ಅವರು ತಮ್ಮ ಪಿಎಚ್ಡಿಯ(Doctor of Philosophy) ಮಹಾ ಪ್ರಬಂಧ ಸಲ್ಲಿಸಿದ್ದು, ಇದೀಗ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಇದರ ಮೌಖಿಕ ಪರೀಕ್ಷೆಯನ್ನು ಇಂದು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮೌಖಿಕ ಪರೀಕ್ಷೆಯನ್ನು ಯಶಸ್ವಿಗೊಳಸಿರುವ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ ಜೆ ಸುರೇಶ್ ಅವರ ಮಾರ್ಗದರ್ಶನದಲ್ಲಿ ಸಿಟಿ ರವಿ ಅವರು “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ” ವಿಷಯದ ಮೇಲೆ ಸಂಶೋಧನೆ ನಡೆಸಿದ್ದಾರೆ. ಅಲ್ಲದೇ ಈಗಾಗಲೇ ಪಿಎಚ್.ಡಿ ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗಕ್ಕೆ ಮಹಾ ಪ್ರಬಂಧ ಸಲ್ಲಿಸಿದ್ದು, ಇದೀಗ ಇದರ ಮೌಖಿಕ ಪರೀಕ್ಷೆಯನ್ನು ಇಂದು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಸಿಟಿ ರವಿ ಅವರ ಪಿಎಚ್ಡಿ ಅಂತಿಮ ಹಂತಕ್ಕೆ ಬಂದಿದೆ.
Karnataka State Open University (KSOU), ಮೈಸೂರಿನ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ ಜೆ ಸುರೇಶ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ಪಿಎಚ್.ಡಿ ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗಕ್ಕೆ ನಾನು ಸಲ್ಲಿಸಿದ್ದ ಮಹಾ ಪ್ರಬಂಧ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ… pic.twitter.com/WsuXs8d3eD
— C T Ravi 🇮🇳 ಸಿ ಟಿ ರವಿ (@CTRavi_BJP) December 28, 2023
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕರಾಮುವಿ) ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ ಅವರು ಇದೀಗ ಅದೇ ವಿವಿಯಲ್ಲಿ ಪಿಎಚ್ಡಿ ಪದವಿ ಪಡೆದುಕೊಳ್ಳಲಿದ್ದಾರೆ. ಸಿಟಿ ರವಿ ಅವರು ಪಿಎಚ್ಡಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾಹಿತಿ ಕಲೆಹಾಕಿದ್ದರು. ವಿಧೇಯ ವಿದ್ಯಾರ್ಥಿಯಂತೆ ದೇವೇಗೌಡ ಬಳಿ ಸಂಶೋಧನಾ ಮಾಹಿತಿ ಪಡೆದುಕೊಂಡಿದ್ದರು. ಈ ಬಗ್ಗೆ ಸ್ವತಃ ಸಿಟಿ ರವಿ ಅವರೇ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ