Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಬಹುದು ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿವೆ. ಆದರೆ, ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿರುವ ಶೆಟ್ಟರ್ ಅಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಮೂಲಕ ಶೆಟ್ಟರ್ ನೀಡಿದ ಸುಳಿವು ಏನು? ಇಲ್ಲಿದೆ ನೋಡಿ.

ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್!
ಜಗದೀಶ್ ಶೆಟ್ಟರ್
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on: Feb 17, 2024 | 12:34 PM

ನವದೆಹಲಿ, ಫೆಬ್ರವರಿ 17: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಬೆಳಗಾವಿಯಿಂದ (Belagavi) ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಇತ್ತೀಚೆಗಷ್ಟೇ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ. ಬಿಜೆಪಿ (BJP) ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಯಲ್ಲಿರುವ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರ್ತಿದೆ ಎಂಬುದು ಗೊತ್ತಿಲ್ಲ. ಆ ಕುರಿತು ಇಂದಿನ ಸಭೆಯಲ್ಲಿ ಯಾವುದೂ ಚರ್ಚೆ ಆಗಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಶೆಟ್ಟರ್ ಅವರು ಇತ್ತೀಚೆಗೆ ಮರಳಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ, ಅವರು ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ವರದಿಯಾಗಿತ್ತು. ನಂತರ ಆ ಬಗ್ಗೆ ಸಾಕಷ್ಟು ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಸ್ಪರ್ಧಿಸುವ ನಿರ್ಧಾರ ಮಾಡಿಲ್ಲ ಎಂದು ಶೆಟ್ಟರ್ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ಮಧ್ಯೆ, ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ದೆಹಲಿಯಲ್ಲಿ ಆರಂಭವಾಗಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಯಲಿದೆ. ಜತೆಗೆ, ನರೇಂದ್ರ ಮೋದಿ ಸರ್ಕಾರದ 10 ವರ್ಷಗಳ ಸಾಧನೆ ಬಗ್ಗೆಯೂ ಚರ್ಚೆ ನಡೆಯಲಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್​​, ಸಂಸದರು ಹಾಗೂ ಎಲ್ಲಾ ರಾಜ್ಯಗಳ ಪಕ್ಷದ ಶಾಸಕರು ಭಾಗಿಯಾಗಿದ್ದಾರೆ.

ಬೆಳಗಾವಿಯಲ್ಲಿ ಬದಲಾಗಿದ್ದ ರಾಜಕೀಯ ಲೆಕ್ಕಾಚಾರ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಮಂಗಳಾ ಅಂಗಡಿಗೆ ಟಿಕೆಟ್ ಸಿಗುವುದು ಅನುಮಾನ​​​ ಎಂಬ ಬಗ್ಗೆ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗುವುದಕ್ಕೂ ಮುನ್ನ ಚರ್ಚೆಯಾಗಿತ್ತು. ಆದರೆ, ಶೆಟ್ಟರ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಲೆಕ್ಕಾಚಾರಗಳು ಬದಲಾಗಿದ್ದವು. ಶೆಟ್ಟರ್​​, ಅಂಗಡಿ ಇಬ್ಬರೂ ಬೀಗರಾಗಿರುವ ಹಿನ್ನೆಲೆ ಅವರಿಗೆ ರಾಜಕೀಯ ಲಾಭ ದೊರೆಯುವ ಮಾತುಗಳು ಮುನ್ನೆಲೆಗೆ ಬಂದಿದ್ದವು.

ಇದನ್ನೂ ಓದಿ: ಜಗದೀಶ್​​ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ: ಬೆಳಗಾವಿಯಲ್ಲಿ ಬದಲಾದ ರಾಜಕೀಯ ಲೆಕ್ಕಾಚಾರ

ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಜಗದೀಶ್ ಶೆಟ್ಟರ್ ಅವರೇ ಬೆಳಗಾವಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಈ ವಿಚಾರವಾಗಿ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ ಎಂಬೆಲ್ಲ ಊಹಾಪೋಹಗಳೂ ಹರಡಿದ್ದವು. ಇದೀಗ ಶೆಟ್ಟರ್ ನೀಡಿರುವ ಹೇಳಿಕೆ ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ